ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್) ನೀಡಲಾಗಿದೆ. ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನೇಮಿಸುವ ‘ಕ್ಲೇಮ್ ಕಮಿಷನರ್’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. …
Read More »ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ನಿರ್ದೇಶಕರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕುಟುಂಬದವರು ಸಂಭ್ರಮ ಪಡುತ್ತಿದ್ದಾರೆ. ಈ ಬಗ್ಗೆ ಸಂತೋಷ್ ಸೋಶಿಯಲ್ ಮೀಡಿಯಾದಲ್ಲಿ ತಾವು ತಂದೆಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. “ನಾನು ಗಂಡು ಮಗುವಿನ ತಂದೆಯಾಗಿದ್ದಾನೆ. ನಿಮ್ಮೆಲ್ಲರ …
Read More »ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.
ಡೆಹ್ರಾಡೂನ್ : ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ದ್ವಾರಹಾತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನೇಗಿ, 2016ರಿಂದ 2018ರ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆಪಾದಿಸಿದ್ದಾರೆ. ಪ್ರತಿಯಾಗಿ ಮಹಿಳೆಯ ಮೇಲೆ ಶಾಸಕರ ಪತ್ನಿ ಬ್ಲ್ಯಾಕ್‌ಮೇಲ್ ಆರೋಪ ಹೊರಿಸಿ ದೂರು ನೀಡಿದ್ದಾರೆ. ತನ್ನ ಮಗುವಿಗೆ ಶಾಸಕ ನೇಗಿ ತಂದೆಯಾಗಿದ್ದು, ಸತ್ಯ ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಿ ಎಂದು ಮಹಿಳೆ ಸವಾಲು ಹಾಕಿದ್ದಾರೆ. …
Read More »ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ,ದೆಹಲಿಗೆ ಬಂದು ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ:ರಮೇಶ್ ಜಾರಕಿಹೋಳಿ.
ಹೊಸದಿಲ್ಲಿ : ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ವರಿಷ್ಠರ ಮುಂದೆ ಡಿಸಿಎಂ ಸ್ಥಾನವನ್ನೂ ಕೇಳಿಲ್ಲ. ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಅವರನ್ನ ಪರಿಷತ್ ಗೆ ನಾಮನಿರ್ದೇಶನ ಮಾಡಿದ ಹಿನ್ನೆಲೆ ಅವರ ಜೊತೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇವೆ. …
Read More »ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ.
ಹೊಸದಿಲ್ಲಿ: ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ ಹೆಚ್ಚಳ ಮಾಡಿತ್ತು. ಬಳಿಕ ಆಗಸ್ಟ್ 17ರಂದು 16 ಪೈಸೆ ಹೆಚ್ಚಿಸಿತ್ತು. ಈಗ ಆಗಸ್ಟ್ 18ರಿಂದ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 17 ಪೈಸೆ ಹೆಚ್ಚಳ ಮಾಡಿದೆ. …
Read More »ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.
ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್‌ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನ …
Read More »ಕುಂದಾನಗರಿಯಲ್ಲಿ ವರುಣನ ಅಬ್ಬರ : ಮಹಾಮಳೆಗೆ ಧರೆಗುರುಳಿದ ಮನೆಗಳು
ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು …
Read More »ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ
ಬೀದರ್ : ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದಶಿಗಳು ಆದೇಶ ಹೊರಡಿಸಿ ತಿಳಿಸಿದ ಮಾರ್ಗಸೂಚಿನುಸಾರ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲು ಮನವಿ ಮಾಡಿದರು. ಧರ್ಮದ ವಿರುದ್ಧ ಮಾಡಿರುವ ಮಾರ್ಗಸೂಚಿ ಎಂದು …
Read More »ಗೋಕಾಕ ಪ್ರವಾಹ ಪ್ರದೇಶ ವೀಕ್ಷಿಸಿದ ಜಿಲ್ಲಾಧಿಕಾರಿ
ಬೆಳಗಾವಿ: ಜಿಲ್ಲೆಯ ವಿವಿಧೆಡೆ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೋಮವಾರ ವೀಕ್ಷಿಸಿದರು. ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ‘ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು ಬಿಡುಗಡೆಗಿಂತ ಮುಂಚೆ ನದಿ …
Read More »ಈ ಮಳೆರಾಯನ ಅಬ್ಬರ ಎಲ್ಲಿಯವರೆಗೂ ಇರಲಿದೆ ಗೊತ್ತಾ? ಇವರಿಂದ ಪ್ರಕಟಿಸಲಾಗಿದೆ
ಬೆಂಗಳೂರು : ರಾಜ್ಯದಲ್ಲಿ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ. ಹಲವೆಡೆ ಮಳೆರಾಯನ ಅವಾಂತರಕ್ಕೆ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಮುಂದುವರೆಯಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇಂದು ಕೂಡ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ …
Read More »