ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ. ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್‌ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ. …
Read More »ದೇಶದಲ್ಲಿ 27 ಲಕ್ಷ ಗಡಿದಾಟಿದ ಕೋವಿಡ್ 19 ಸೋಂಕಿತರ ಸಂಖ್ಯೆ
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ರೆ, 876 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 51,797ಕ್ಕೆ ಬಂದು ನಿಂತಿದೆ. 27,02,743 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 19,77,780ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,73,166 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …
Read More »ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಕೋವಿಡ್ ಸೋಂಕಿಗೆ 3,030 ಮಂದಿ ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಸರಿಸುಮಾರು ಮೂರು ಸಾವಿರದಷ್ಟು ಕೋವಿಡ್ ವೈರಸ್ ಸೋಂಕಿತರ ಸಾವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕು ಸಾವಿರ ಗಡಿದಾಟಿದೆ. ಸೋಮವಾರ 115 ಮಂದಿ ಸೋಂಕು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 4062ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದಷ್ಟೆ (ಜುಲೈ 16ಕ್ಕೆ) ಸೋಂಕಿತರ ಸಾವಿನ ಸಂಖ್ಯೆ ಒಂದು ಸಾವಿರ ಗಡಿದಾಟಿತ್ತು. ಆ ನಂತರ ನಿತ್ಯ ಸರಾಸರಿ ನೂರು ಸೋಂಕಿತರು ಸಾವು …
Read More »ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ
ಹೊಸದಿಲ್ಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ ಮಾಡಿದರು. ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ …
Read More »ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ಗಳಿಗೆ ನೋಟಿಸ್
ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ …
Read More »ಒನ್ ಸೈಡ್ ಲವ್ – 16 ವರ್ಷದ ಹುಡುಗ ನೇಣಿಗೆ ಶರಣು
ಮುಂಬೈ: 16 ವರ್ಷದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಮುಂಬೈನ ಸಂತಾಕ್ರೂಜ್ ನ ಕೊಲಿವೆರಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ತಾನು ಪ್ರೀತಿಸುತ್ತಿದ್ದ ಗೆಳತಿಗೆ ಗುಡ್ ಬೈ ಮೆಸೇಜ್ ಕಳುಹಿಸಿದ್ದಾನೆ. 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಒನ್ ಸೈಡ್ ಪ್ರೀತಿಯಲ್ಲಿದ್ದನು. ಶುಕ್ರವಾರ ಪೋಷಕರು ಕೆಲಸಕ್ಕೆ ಹೋದಾಗ ಮನೆಯನ್ನು ಲಾಕ್ ಮಾಡಿಕೊಂಡಿದ್ದಾನೆ. ನೆರೆ ಮನೆಯ ಮಹಿಳೆ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆಯದಿದ್ದಾಗ, ಮಹಿಳೆ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ವಿದ್ಯಾರ್ಥಿ …
Read More »ಇಂದಿನಿಂದ 5 ದಿನ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ
ಪಟ್ಟಣಂತಿಟ್ಟ, ಆ.17- ವಿಶ್ವವಿಖ್ಯಾತ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಇಂದು ಬೆಳಗ್ಗೆ ತೆರೆಯಲಾಗಿದೆ. ಮಲೆಯಾಳಂ ಪಂಚಾಂಗದ ಪ್ರಕಾರ ಇಂದಿನಿಂದ ಆಗಸ್ಟ್ 21ರ ವರೆಗೆ ಅಯ್ಯಪ್ಪ ಸ್ವಾಮಿಗೆ ಮಾಸಿಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ ಎಂದು ಟ್ರವಾಂಕುರ್ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ.ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹಾಜರುಪಡಿಸಬೇಕು. ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನವು ಕಟ್ಟುನಿಟ್ಟಿನ …
Read More »ಆಸ್ಪತ್ರೆಯಲ್ಲಿದ್ದ ಸೋಂಕಿತ ಪತಿಗೆ ಕದ್ದು ಮುಚ್ಚಿ ಎಣ್ಣೆ ತಂದುಕೊಟ್ಟ ಪತ್ನಿ
ಚೆನ್ನೈ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತಿಗೆ 38 ವರ್ಷದ ಮಹಿಳೆಯೊಬ್ಬರು ಮದ್ಯ ತಂದುಕೊಟ್ಟು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.ತಮಿಳುನಾಡಿನ ಕುದ್ದಲೂರಿನ ಚಿದಂಬರಂನ ರಾಜಾ ಮುತ್ತಯ್ಯ ವೈದ್ಯಕೀಯ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪತಿಗೆ ಮದ್ಯ ತಂದುಕೊಟ್ಟಿದ್ದಕ್ಕೆ ಮಹಿಳೆಯನ್ನು ಬಂಧಿಸಲಾಗಿದೆ. ಕುಡಿದ ಮತ್ತಿನಲ್ಲಿ ಮಹಿಳೆಯ ಪತಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಟಿ.ಮುತ್ತುಕುಮಾರ್(48) ಅವರಿಗೆ ವಾರದ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತು. …
Read More »ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ:ರಮೇಶ್ ಜಾರಕಿಹೋಳಿ.
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.ಇದರಿಂದಾಗಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲುತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ …
Read More »ಹಿಡಕಲ್ ಜಲಾಶಯಿಂದ 40 ಸಾವಿರ ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಬಿಡುಗಡೆ- ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗೋಕಾಕ ತಹಶಿಲ್ದಾರ ಸೂಚನೆ.
ಬೆಳಗಾವಿ: ಪಶ್ಚಿಮ ಗಟ್ಟದಲ್ಲಿ ಧಾರಾಕಾರು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳ ಹರಿಯುವ ಹೆಚ್ಚಾಗಿದ್ದು ಜಲಾಶಯದಿಂದ ಇಂದು 40000 ಕ್ಯೂಸೆಕ್ಸ ನೀರು ಹೊರ ಬಿಡಲಾಗಿದೆ . ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಒಳಹರಿಯುವ 18052 ಕ್ಯೂಸೆಕ್ಸ ಇದ್ದು ಈ ಒಳ ಹರಿವಿನ ಪ್ರಮಾಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಜಲಾಶಯದ ಕ್ರಷ್ಟ ಗೇಟುಗಳು ಮೂಲಕ ಘಟಪ್ರಭಾ ನದಿಗೆ ನೀರು ಹರಿದು ಬಿಡಲಾಗಿದೆ. ಬಾನುವಾರ ಸಂಜೆ 5:30 ಕ್ಕೆ 40 ಸಾವಿರ ಕ್ಯೂಸೆಕ್ಸ ನೀರು ನದಿಗೆ …
Read More »