Breaking News

ರಾಷ್ಟ್ರೀಯ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ?

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ‌ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು‌ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೈನ್ನೈನಿಂದ ಅಪರಿಚಿತರಿಂದ ಬೆದರಿಕೆ ಪತ್ರದ‌ ಮೇಲ್ ಬಂದಿದೆ.   ಶ್ವಾನದಳ, ಬಾಂಬ್ ಸ್ಕ್ವಾಡನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು. ಈ ಬಗ್ಗೆ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »

ಮಹಾ’ ಸೀಟು ಹಂಚಿಕೆ ಬಗ್ಗೆ ಸಿಎಂ ಶಿಂಧೆ ಮಹತ್ವದ ಮಾಹಿತಿ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಉಭಯ ಪಕ್ಷಗಳ ತಯಾರಿ ಗರಿಗೆದರಿದೆ. ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರು ನಿನ್ನೆ ದೆಹಲಿಗೆ ತೆರಳಿ ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆಗೆ ಮಹತ್ವದ ಚರ್ಚೆ ನಡೆಸಿ ಬಂದಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದ ಜನತೆಗೆ ಒಳ್ಳೆಯ ಸುದ್ದಿಯನ್ನೇ ಕೊಡುತ್ತೇವೆ ಎಂದು ಸುಳಿವು ನೀಡಿದ್ದಾರೆ.   ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದೆವು. ನಮ್ಮ ಮಹಾಯುತಿಯ …

Read More »

ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು. ಮುಳುಗಿದ ಬ್ಯಾರೇಜ್

ಮುಧೋಳ: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್‌ ಜಲಾಶಯದಿಂದ ಹೆಚ್ಚಿನ‌ ಪ್ರಮಾಣ ನೀರು ಘಟಪ್ರಭಾ ನದಿಗೆ ಹರಿದುಬರುತ್ತಿರುವ ಕಾರಣ ತಾಲೂಕಿನ ಬ್ರಿಡ್ಜ್ ಕಂ ಬ್ಯಾರೇಜ್ ಗಳು‌ ಮುಳುಗಿ ಜನಸಂಚಾರ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿವೆ. ಮಿರ್ಜಿ-ಮಹಾಲಿಂಗಪುರ ಸಂಪರ್ಕ ರಸ್ತೆಯಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ‌ ನೀರು ಹರಿಯುತ್ತಿದ್ದು ಸದ್ಯ ವಾಹನ ಸಂಚಾರಕ್ಕೆ ಅಡಚಣೆಯಾಗಿಲ್ಲ. ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಂಜೆ ಅಥವಾ ನಾಳೆ ವೇಳೆಗೆ ಸಂಚಾರ ಸ್ಥಗಿತಗೊಳ್ಳುವ ಭೀತಿ‌ ಎದುರಾಗಿದೆ. ಜೀರಗಾಳ ಸಮೀಪದ ಬ್ರಿಡ್ಜ …

Read More »

ಎಣ್ಣೆ ಒಳಗೆ ಹೋದ್ಮೇಲೆ ಬಾಡಿ ಶೇಕ್‌ ಆಗೋದ್ಯಾಕೆ?

ಮದ್ಯ (Alcohol) ಸೇವಿಸಿದ ನಂತರ ವ್ಯಕ್ತಿಯ ಒಟ್ಟಾರೆ ವರ್ತನೆಯಲ್ಲಿ ಬದಲಾವಣೆಯಾಗುವುದನ್ನು ನೀವು ಹೆಚ್ಚಾಗಿ ನೋಡಿದ್ದೀರಿ. ಅದರಲ್ಲೂ ಮದ್ಯಪಾನ ಮಾಡುವವರಿಗೆ ಇದರ ಬಗ್ಗೆ ಹೆಚ್ಚು ತಿಳಿಯುತ್ತದೆ. ಮದ್ಯ ಸೇವಿಸಿದ ಸ್ವಲ್ಪ ಸಮಯದ ನಂತರ ಕುಡಿಯುವವರ ಧ್ವನಿ (Voice) ಬದಲಾಗಲು ಪ್ರಾರಂಭಿಸುತ್ತದೆ. ವ್ಯಕ್ತಿಯು ನಡೆಯಲು ಕಷ್ಟಪಡುತ್ತಾನೆ ಮತ್ತು ಕ್ರಮೇಣ ದೇಹದ ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ. ಇದು ಏಕೆ ಸಂಭವಿಸುತ್ತದೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಸ್ವಲ್ಪ ಸಮಯದ (Time) ನಂತರ ಆಲ್ಕೋಹಾಲ್ ಏಕೆ ಪರಿಣಾಮ …

Read More »

ಎರಡನೇ ವಿಮಾನ ನಿಲ್ದಾಣಕ್ಕೆ ಈ ಸ್ಥಳವೇ ಅಂತಿಮ?

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ವೇಗ ಪಡೆದುಕೊಂಡಿದೆ. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಡಿಸಿಎಂ ಡಿ.ಕೆ. ಶಿವಕುಮಾರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಂದಿನ ವಾರದೊಳಗೆ ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಡಾಬಸ್‌ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಪದಮಂಡಿ ಗ್ರಾಮದ ಶ್ರೀ ದುರ್ಗಾ ದೇವಿ ಹಾಗೂ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

ಸಿರುಗುಪ್ಪ: ಆಸ್ತಿಗಾಗಿ ತಂದೆಯೇ ಮಗಳನ್ನು ಕೊಲೆ ಮಾಡಲು ಮುಂದಾದ ಘಟನೆ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ, ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.18ರ ಶುಕ್ರವಾರ ನಡೆದಿದೆ. ಅರಳಿಗನೂರು ಗ್ರಾಮದ ದೊಡ್ಡರಂಗಪ್ಪನಿಗೆ ಶಿವಲಿಂಗಮ್ಮ ಅವರು ಮೊದಲನೇ ಪತ್ನಿ ಹಾಗೂ ಜಯಮ್ಮ ಅರು ಎರಡನೇ ಪತ್ನಿಯಾಗಿದ್ದು, ಮೊದಲನೇ ಪತ್ನಿ ಶಿವಲಿಂಗಮ್ಮನಿಗೆ ಗೊತ್ತಿಲ್ಲದಂತೆ ದೊಡ್ಡ ರಂಗಪ್ಪ ತನ್ನ ಎರಡನೇ ಪತ್ನಿ ಜಯಮ್ಮಳ ಹೆಸರಿಗೆ ಆಸ್ತಿಯನ್ನು ಮಾಡಿಸಿದ್ದರಿಂದ ಶಿವಲಿಂಗಮ್ಮನ ಮಗಳು ಸೋಮಲಿಂಗಮ್ಮ ತನಗೆ ಅಸ್ತಿಯಲ್ಲಿ ಪಾಲು ಬರಬೇಕೆಂದು ಸಿರುಗುಪ್ಪದ …

Read More »

ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

ಬೆಂಗಳೂರು: ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ’ ಎಂಬ ವಾದ ಅರ್ಥವಾಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್‌, ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ. 2023ರ ಸೆ. 24ರಂದು ರಾತ್ರಿ ಸುಮಾರು 10.50ರ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ದಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ ಜೈ …

Read More »

ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ …

Read More »

ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.   ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ …

Read More »