ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ನಾನು ಅಸ್ಸಾಂನ ಬಿಜೆಪಿ ಸಿಎಂ ಅಭ್ಯರ್ಥಿಯಲ್ಲ: ರಂಜನ್ ಗೊಗೊಯ್
ನವದೆಹಲಿ: ನಾನು ಅಸ್ಸಾಂನ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿಯಲ್ಲ ಎಂದು ಸುಪ್ರೀಂ ಕೋರ್ಟ್‍ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಂದಿನ ವರ್ಷ ಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ ಶನಿವಾರ ಬೆಳಗ್ಗೆ ಹೇಳಿದ್ದರು. ಈ ವಿಚಾರವಾಗಿ ಇಂದು ಮಾತನಾಡಿರುವ …
Read More »ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ
ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಎಸ್‍ಪಿಬಿ ಬಾಲ್ಯದ ಸ್ನೇಹಿತ ಒಬಯ್ಯ ಅವರ ಜೊತೆ ನಾನು ಮಾತನಾಡಿದೆ. ಎರಡು ಬಾರಿ ಕರೆ ಮಾಡಿ ಮಾಹಿತಿಯನ್ನು ಖಚಿತ ಪಡಿಸಿದೆ. ವರದಿ ನೆಗೆಟಿವ್ ಬಂದಿದೆ ಎಂಬದುನ್ನು ತಿಳಿಸಿದರು ಎಂದು ಮಾಹಿತಿ ನೀಡಿದರು. ಎಸ್‍ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ …
Read More »ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು
ಬೆಳಗಾವಿ: ಗಣೇಶ ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ ಎಂಎಲ್ ಸಿ ವಿವೇಕರಾವ್ ಪಾಟೀಲ್, ಹಾಗೂ ಹಾಲುಮತದ ಹಲವು ನಾಯಕರು ಇಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಕರಣ ಇತ್ಯರ್ಥ ಪಡೆಸಿ ಜಿಲ್ಲಾಡಳಿತ ವತಿಯಿಂದಲೇ ಮೂರ್ತಿ ಸ್ಥಾಪನೆ ಮಾಡುವಂತೆ ಒತ್ತಡ …
Read More »30 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಶನಿವಾರ 69,239 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ತನ್ನೆಲ್ಲ ಹಿಂದಿನ ದಾಖಲೆಗಳ ಬ್ರೇಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ ಒಟ್ಟು 912 ಜನರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 56,706ಕ್ಕೆ ಏರಿಕೆಯಾಗಿದೆ. ಸದ್ಯ 7,07,668 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,44,941ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಗುಣಮುಖ ಪ್ರಮಾಣ ಶೇ.74.89ರಷ್ಟಿದೆ. ಕಳೆದ 15 ದಿನದಲ್ಲಿಯೇ 20 ಲಕ್ಷ …
Read More »ಎಸ್‍ಪಿಬಿ ಶೀಘ್ರಗುಣಮುಖರಾಗಲಿ: ಹಿರಿಯ ನಟಿ ಭಾರತಿ ವಿಷ್ಣುವರ್ಧನ್
ಬೆಂಗಳೂರು: ಕೊರೊನಾದಿಂದ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯ ಆರೋಗ್ಯದಲ್ಲಿ ಗಂಭೀರವಾದ ಹಿನ್ನೆಲೆಯಲ್ಲಿ ಎಸ್‍ಪಿಬಿ ಶೀಘ್ರಗುಣಮುಖರಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.ಸೋಶಿಯಲ್ ಮೀಡಿಯಾದ ಮೂಲಕ ಭಾರತಿ ವಿಷ್ಣುವರ್ಧನ್ ಅವರು ಬಾಲಸುಬ್ರಹ್ಮಣ್ಯ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ಬಾಲಸುಬ್ರಹ್ಮಣ್ಯ ಅವರು ಕೊರೊನಾದಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಅದರಿಂದ ನರಳುತ್ತಿದ್ದಾರೆ. ಈ ಸುದ್ದಿ ಕೇಳಿ ನನಗೆ ಬಹಳ ಬೇಸರವಾಗಿದೆ. ಅಂತಹ …
Read More »ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …
Read More »ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ
ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …
Read More »ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ
ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …
Read More »ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?
ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ …
Read More »
Laxmi News 24×7