Breaking News

ರಾಷ್ಟ್ರೀಯ

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7,665 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದಾಖಲೆಯ 139 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ. ಮಂಗಳವಾರ ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸಾವು ವರದಿಯಾಗಿದ್ದು, ಕಳೆದ ಭಾನುವಾರ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ 7,665 ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.41 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ …

Read More »

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ.

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »

ಸಂಪಾದಕೀಯ: ವಿಶ್ವದ ಅತ್ಯಂತ ಶಕ್ತ ನ್ಯಾಯಾಂಗ ಇನ್ನಷ್ಟು ಉದಾರವಾದಿ ಆಗಲಿ

ನ್ಯಾಯಾಂಗ ನಿಂದನೆಯ ಪ್ರಕರಣಗಳು ಸಾರ್ವಜನಿಕ ಜೀವನದಲ್ಲಿ ಪ್ರಮುಖವಾಗಿ ಚರ್ಚೆಯಾದಾಗಲೆಲ್ಲ, ನ್ಯಾಯಶಾಸ್ತ್ರಜ್ಞ, ನ್ಯಾಯಮೂರ್ತಿ ಲಾರ್ಡ್‌ ಡೆನಿಂಗ್ ಅವರ ಮಾತೊಂದು ಉಲ್ಲೇಖವಾಗುವುದಿದೆ. ನ್ಯಾಯಾಂಗ ನಿಂದನೆಯ ಕಾನೂನು ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಬಳಕೆಯಾಗಬೇಕಿಲ್ಲ. ಈ ಕಾನೂನನ್ನು ಅಪರೂಪಕ್ಕೆ ಬಳಸಿಕೊಳ್ಳಬೇಕು. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸಬೇಕಿರುವುದು ಬಹುಮುಖ್ಯವಾದುದು ಎನ್ನುವುದು ಲಾರ್ಡ್ ಡೆನಿಂಗ್ ಅವರು ಆಡಿದ್ದ ಮಾತುಗಳು. ನ್ಯಾಯದಾನ ಮಾಡುವ ಸ್ಥಾನದಲ್ಲಿ ಕುಳಿತಿರುವ ವ್ಯಕ್ತಿಗಳ ಬಗ್ಗೆ ಟೀಕೆ ಮಾಡುವಾಗ, ‘ನ್ಯಾಯಸಮ್ಮತವಾದ ಟೀಕೆಗಳು ಬರಲಿ; ಏಕೆಂದರೆ, ನ್ಯಾಯಮೂರ್ತಿಗಳಿಗೆ ಅವರು ಹೊಂದಿರುವ …

Read More »

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೀಡಲಾಗಿದೆ. ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. …

Read More »

ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ನಿರ್ದೇಶಕರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕುಟುಂಬದವರು ಸಂಭ್ರಮ ಪಡುತ್ತಿದ್ದಾರೆ. ಈ ಬಗ್ಗೆ ಸಂತೋಷ್ ಸೋಶಿಯಲ್ ಮೀಡಿಯಾದಲ್ಲಿ ತಾವು ತಂದೆಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. “ನಾನು ಗಂಡು ಮಗುವಿನ ತಂದೆಯಾಗಿದ್ದಾನೆ. ನಿಮ್ಮೆಲ್ಲರ …

Read More »

ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.

ಡೆಹ್ರಾಡೂನ್ : ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ದ್ವಾರಹಾತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನೇಗಿ, 2016ರಿಂದ 2018ರ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆಪಾದಿಸಿದ್ದಾರೆ. ಪ್ರತಿಯಾಗಿ ಮಹಿಳೆಯ ಮೇಲೆ ಶಾಸಕರ ಪತ್ನಿ ಬ್ಲ್ಯಾಕ್‌ಮೇಲ್ ಆರೋಪ ಹೊರಿಸಿ ದೂರು ನೀಡಿದ್ದಾರೆ. ತನ್ನ ಮಗುವಿಗೆ ಶಾಸಕ ನೇಗಿ ತಂದೆಯಾಗಿದ್ದು, ಸತ್ಯ ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಿ ಎಂದು ಮಹಿಳೆ ಸವಾಲು ಹಾಕಿದ್ದಾರೆ. …

Read More »

ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ,ದೆಹಲಿಗೆ ಬಂದು ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ:ರಮೇಶ್ ಜಾರಕಿಹೋಳಿ.

ಹೊಸದಿಲ್ಲಿ : ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ವರಿಷ್ಠರ ಮುಂದೆ ಡಿಸಿಎಂ ಸ್ಥಾನವನ್ನೂ ಕೇಳಿಲ್ಲ. ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಅವರನ್ನ ಪರಿಷತ್ ಗೆ ನಾಮನಿರ್ದೇಶನ ಮಾಡಿದ ಹಿನ್ನೆಲೆ ಅವರ ಜೊತೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇವೆ. …

Read More »

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ.

ಹೊಸದಿಲ್ಲಿ: ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈಗ ಮತ್ತೆ ಪೆಟ್ರೋಲ್ ಬೆಲೆಯನ್ನು ಏರಿಸಲು ಆರಂಭಿಸಿದೆ. ಆಗಸ್ಟ್ 16ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆ ಹೆಚ್ಚಳ ಮಾಡಿತ್ತು. ಬಳಿಕ ಆಗಸ್ಟ್ 17ರಂದು 16 ಪೈಸೆ ಹೆಚ್ಚಿಸಿತ್ತು. ಈಗ ಆಗಸ್ಟ್ 18ರಿಂದ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 17 ಪೈಸೆ ಹೆಚ್ಚಳ ಮಾಡಿದೆ. …

Read More »

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್‌ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನ …

Read More »

ಕುಂದಾನಗರಿಯಲ್ಲಿ ವರುಣನ ಅಬ್ಬರ : ಮಹಾಮಳೆಗೆ ಧರೆಗುರುಳಿದ ಮನೆಗಳು

ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು …

Read More »