Breaking News

ರಾಷ್ಟ್ರೀಯ

ಬಿಜೆಪಿಗೆ ಬಿಗ್ ಶಾಕ್ : ಹಗರಣಗಳ ತನಿಖೆಗೆ ಸಮಿತಿ ರಚಿಸಿ ‘ಸಿಎಂ ಸಿದ್ದರಾಮಯ್ಯ’ ಆದೇಶ.!

ಬೆಂಗಳೂರು : ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಮಿತಿ ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ: ಸಚಿವರುಗಳಾದ ಡಾ.ಜಿ. ಪರಮೇಶ್ವರ, ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ …

Read More »

ಓಣಂ ಪ್ರಯುಕ್ತ ಹುಬ್ಬಳ್ಳಿಯಿಂದ ವಿಶೇಷ ರೈಲು ಸೇವೆ

ಬೆಂಗಳೂರು, ಸೆಪ್ಟಂಬರ್ 11: ಓಣಂ ಹಬ್ಬದ ನೈರತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ವಿಶೇಷ ರೈಲು ಬಿಡಲಾಗಿದೆ. ಈ ವಿಶೇಷ ರೈಲು ಹುಬ್ಬಳ್ಳಿ ಜಂಕ್ಷನ್‌ನಿಂದ ನೆರೆಯ ಕೇರಳ ರಾಜ್ಯ ತಲುಪಲಿದೆ. ಈ ರೈಲಿನಿಂದ ಓಣಂಗೆ ತೆರಳುವವರಿಗೆ ಹಾಗೂ ರಾಜ್ಯದ ಕೆಲವು ಜಿಲ್ಲೆಗಳ ಮೂಲಕ ಹಾದು ಹೋಗುವುದರಿಂದ ಸ್ಥಳೀಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ವಿಶೇಷ ರೈಲಿನ ವೇಳಾಪಟ್ಟಿ, ಮಾಹಿತಿ ಇಲ್ಲಿದೆ. ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿ-ಕೊಚುವೇಲಿ ನಡುವೆ ಸೆಪ್ಟೆಂಬರ್ 13ರಂದು ವಿಶೇಷ ರೈಲು …

Read More »

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ಗದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ ಪ್ರಸಾದ ಸಿಳ್ಳಿಕೇತರ, ಗುರುಪ್ರಸಾದ ಸಿಳ್ಳಿಕೇತರ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗದಗ, ಹಾವೇರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ಹಲವು ದೇವಾಲಯಗಳಲ್ಲಿ ಕಳವು ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು, ಹರಪನಹಳ್ಳಿ, ಶಿವಮೊಗ್ಗ ಜಿಲ್ಲೆಯ ಆನವಟ್ಟಿ, ಚಿತ್ರದುರ್ಗ ಜಿಲ್ಲೆಯ …

Read More »

ಭಾವೈಕ್ಯ ಸಾರಿದ ಹಿಂದೂ-ಮುಸ್ಲಿಂ ಯುವಕರು

ಕಾಗವಾಡ: ತಾಲ್ಲೂಕಿನ ಉಗಾರ ಬುದ್ರುಕ ಗ್ರಾಮದ ವಾರ್ಡ್ ನಂ.7ರಲ್ಲಿ ಪದ್ಮಶ್ರೀ ಕಾಲೊನಿಯಲ್ಲಿರುವ ಮಹೆಬೂಬ ಸುಬಾನಿ ದರ್ಗಾದ ಪಕ್ಕದಲ್ಲಿ ಹಿಂದೂ- ಮುಸ್ಲಿಂ ಯುವಕರು ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಭಾವೈಕ್ಯ, ಸಾಮರಸ್ಯದ ಸಂದೇ ಸಾರಿದ್ದಾರೆ. ಇಲ್ಲಿನ ಸುಮಾರು 30ಕ್ಕೂ ಹೆಚ್ಚು ಮುಸ್ಲಿಂ ಯುವಕರು ಹಾಗೂ 20ಕ್ಕೂ ಹೆಚ್ಚು ಹಿಂದೂ ಯುವಕರು ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಿದರು. ಕಳೆದ 6 ವರ್ಷಗಳಿಂದ ಈ ರೀತಿಯ ಗಣೇಶೋತ್ಸವ ಆಚರಿಸುತ್ತಿದ್ದು ತಮ್ಮ ಗಣೇಶ ಮಂಡಳಿಗೆ ಹಿಂದೂ-ಮುಸ್ಲಿಂ ಮಂಡಳಿ …

Read More »

ಬೆಂಗಳೂರಿಗರಿಗೆ ರಸ್ತೆ ಗುಂಡಿಗಳಿಂದ ಬಿಗ್‌ ರಿಲೀಫ್‌!

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್‌ ಎಷ್ಟು ಕಿರಿಕಿರಿ ನೀಡುತ್ತಿದೆಯೋ? ಅದೇ ಪ್ರಮಾಣದಲ್ಲಿ ತಲೆಬಿಸಿ ಕೊಡುವ ವಿಚಾರ ಅಂದ್ರೆ ರಸ್ತೆ ಗುಂಡಿಗಳು. ಮಳೆಬಂದರೆ ಗುಂಡಿ ಕಾಣದೆ ವಾಹನ ಸಮೇತ ಬೀಳುವ ಘಟನೆಗಳು, ಅಪಘಾತಗಳು ಸಾಮಾನ್ಯ. ಹೀಗಾಗಿ ರಸ್ತೆಗಿಳಿದವರೆಲ್ಲ ಗುಂಡಿಗಳಿಗೆ ಹಿಡಿಶಾಪ ಹಾಕುತ್ತಲೇ ಸಂಚರಿಸುತ್ತಿದ್ದರು. ಈ ವಿಚಾರ ರಾಜ್ಯ ಸರ್ಕಾರಕ್ಕೂ ದೊಡ್ಡ ತಲೆನೋವಾದ ಕಾರಣ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಬೇಕು ಎಂದು ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದರು. …

Read More »

ಡಿ ಗ್ಯಾಂಗ್​ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ಅನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಚಾರ್ಜ್​ಶೀಟ್​ ಸಲ್ಲಿಕೆಯಾದ ಮೇಲೆ ಅನೇಕ ಸತ್ಯಗಳು, ಹುದುಗಿದ್ದ ಅನೇಕ ಕರಾಳ ಅಧ್ಯಾಯಗಳು ಹೊರ ಬಂದಿದೆ. ಇತ್ತ ರೇಣುಕಸ್ವಾಮಿ ಹತ್ಯೆ ಪ್ರಕರಣವನ್ನು ಬೇಗನೆ ಇತ್ಯರ್ಥಗೊಳಿಸಲು ಪೊಲೀಸರು ಚಿಂತನೆ ನಡೆಸಿದ್ದು, ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ …

Read More »

ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.12ಕ್ಕೆ ಮುಂದೂಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ದಾಖಲಾಗಿರುವ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ .ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.   ಈ ವೇಳೆ ಅರ್ಜಿದಾರರ …

Read More »

ದೀಪ್ವೀರ್ ಮಗಳನ್ನು ನೋಡಲು ಆಸ್ಪತ್ರೆಗೆ ಬಂದ ಮುಖೇಶ್​ ಅಂಬಾನಿ

ಮೂಂಬೈ: ಬಾಲಿವುಡ್​ ಕ್ಯೂಟ್ ಕಪಲಸ್​ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​​​ ಮುದ್ದಾದ ಮಗಳ ಪಾಲಕರಾಗಿದ್ದಾರೆ. ಸೆಪ್ಟೆಂಬರ್​ 8ರಂದು ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಗೊತ್ತೆ ಇದೆ. ಇದರೊಂದಿಗೆ ರಣವೀರ್ ಸಿಂಗ್ ಅವರ ಹಲವು ವರ್ಷಗಳ ಆಸೆ ಈಡೇರಿದೆ. ಏಕೆಂದರೆ ಈ ಹಿಂದೆ ಅವರು ಮಗಳಿಗೆ ತಂದೆಯಾಗಬೇಕೆಂದು ಹೇಳಿದ್ದರು. ಇಬ್ಬರೂ ತಮ್ಮ ಸಂತೋಷದ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಅಭಿನಂದೆನೆಗಳ ಮಹಾಪೂರವೆ ಹರಿಯುತ್ತಿದೆ. ಅಂದ್ಹಾಗೆ ದೀಪಿಕಾ ಪಡುಕೋಣೆ …

Read More »

ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ …

Read More »

ಪಿಎಸ್‌ಐ ಪರೀಕ್ಷೆ ಮುಂದೂಡಿ: ಗೃಹ ಸಚಿವ ಪರಮೇಶ್ವರ್‌ಗೆ ಬಿಜೆಪಿ ಮನವಿ

ಬೆಂಗಳೂರು: ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸೆ.22ರಂದು ನಿಗದಿಪಡಿಸಿರುವ ಪಿಎಸ್​ಐ ಪರೀಕ್ಷೆಯನ್ನು ಮುಂದೂಡಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. …

Read More »