Breaking News

ರಾಷ್ಟ್ರೀಯ

ಸಂಪಾದಕೀಯ | ಆರ್‌ಬಿಐ ಹೊಸ ತೀರ್ಮಾನ ಹಣದ ಹರಿವಿಗೆ ಉತ್ತೇಜನ

ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತೀಯ ರಿಸರ್ವ್‌ ಬ್ಯಾಂಕಿನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯರು ಒಕ್ಕೊರಲಿನಿಂದ ತೀರ್ಮಾನಿಸಿದ್ದಾರೆ. ಈ ವರ್ಷದ ಫೆಬ್ರುವರಿಯ ನಂತರ ಆರ್‌ಬಿಐ, ರೆಪೊ ದರವನ್ನು ಶೇಕಡ 1.15ರಷ್ಟು ತಗ್ಗಿಸಿದೆ. ಹೀಗಾಗಿ, ಕೆಲವು ಅರ್ಥಶಾಸ್ತ್ರಜ್ಞರು ಮತ್ತು ಕಾರ್ಪೊರೇಟ್ ವಲಯದ ಕೆಲವರು ದರ ಕಡಿತದ ಪರ ಮಾತನಾಡಿದ್ದರೂ ಆ ತೀರ್ಮಾನ ಕೈಗೊಳ್ಳಲು ಆರ್‌ಬಿಐ ಮುಂದಾಗಿಲ್ಲ. ಕೇಂದ್ರೀಯ ಬ್ಯಾಂಕ್‌ನ ಈ ತೀರ್ಮಾನವನ್ನು ಷೇರು ಮಾರುಕಟ್ಟೆ ತಕ್ಷಣಕ್ಕೆ ಸ್ವಾಗತಿಸಿರುವುದನ್ನು …

Read More »

ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ : ಆರು ನಾಗರಿಕರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ …

Read More »

ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್…………..

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದು, ಈ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್ ನೀಡಿದೆ.   ದೇಶದ ಆಂತರಿಕ ವಿಚಾರದಲ್ಲಿ ನೀವು ತಲೆ ಹಾಕಬೇಡಿ ಎಂದು ಭಾರತ ಎಚ್ಚರಿಸಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಪ್ರತಿಕ್ರಿಯಿಸಿ, ಭಾರತದ ಆಂತರಿಕ ವಿಷಯದ ಬಗ್ಗೆ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪತ್ರಿಕಾ ಹೇಳಿಕೆ ಗಮನಕ್ಕೆ ಬಂದಿದೆ. ಪಾಕಿಸ್ತಾನವು ಭಾರತದ …

Read More »

ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ…………..

ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ.   ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ. ಈ ವಜ್ರಗಳನ್ನು ಕಾರ್ಮಿಕರ ಸುಬಲ್ …

Read More »

ನದಿ ತೀರದ ಗ್ರಾಮಗಳಿಗೆ ಪ್ರವಾಹ ಬೀತಿ ಸೇತುವೆಗಳು ಜಲಾವೃತ, ಸಂಚಾರ ಸ್ಥಗಿತ

ಮೂಡಲಗಿ: ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಗುರುವಾರದಂದು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಮೈದುಂಬಿ ಸುರಿಯುತ್ತಿರುವ ಘಟಪ್ರಭೆ ನದಿ ಮೈದುಂಬಿ ಹರಿಯುತ್ತಿದ್ದು ಮೂಡಲಗಿ ತಾಲೂಕಿನ ಸುಣಧೋಳಿ, ಕಮ¯ದಿನ್ನಿ, ಹುಣಶ್ಯಾಳ ಪಿ.ವಾಯ್, ಢವಳೇಶ್ವರ, ಅವರಾದಿ ಹಾಗೂ ಗೋಕಾಕ ತಾಲೂಕಿನ ಉದಗಟ್ಟಿ …

Read More »

ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೈದರಾಬಾದ್: ಟಿಆರ್ ಎಸ್ ಪಕ್ಷದ ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಮಲಿಂಗಾ ರೆಡ್ಡಿಯವರು ದುಬ್ಬಾಕಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 59 ವರ್ಷದ ರಾಮಲಿಂಗಾ ರೆಡ್ಡಿ ಇತ್ತೀಚೆಗೆ ಕೊಂಪಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೊಳಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆನಾರೋಗ್ಯ ಹಿನ್ನೆಲೆಯಲ್ಲಿ ಶಾಸಕರನ್ನು ರಾತ್ರಿ ಸುಮಾರು 2.30ಕ್ಕೆ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೆಲಂಗಾಣ ರಾಷ್ಟ್ರೀಯ ಪಕ್ಷದ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಸಹ ಒಬ್ಬರಾಗಿದ್ದರು. ಶಾಸಕರ ಅಂತಿಮ ವಿಧಿವಿಧಾನಗಳು …

Read More »

ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ …

Read More »

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ.

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ. ಮಧ್ಯಾಹ್ನ ಗರ್ಭಗುಡಿ ಇರುವ ಜಾಗದಲ್ಲಿ ಭೂಮಿ ಪೂಜೆ ನಡೆದ ಬಳಿಕ ವೇದಿಕೆಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂರು ಬಾರಿ ಕರ್ನಾಟಕ ಪ್ರಸ್ತಾಪವಾಯಿತು. ವೇದಿಕೆಯಲ್ಲಿ ಬಟನ್‌ ಒತ್ತುವ ಮೂಲಕ ಮೋದಿ ಶಿಲಾಫಲಕವನ್ನು ಅನಾವರಣಗೊಳಿಸಿದರು. ಇದಾದ ಬಳಿಕ ಪ್ರಧಾನಿಯನ್ನು ಕೋದಂಡರಾಮನ ವಿಗ್ರಹವನ್ನು ನೀಡುವ ಮೂಲಕ ಗೌರವಿಸಲಾಯಿತು. ಈ ವೇಳೆ ನಿರೂಪಕರು ಕರ್ನಾಟಕದಿಂದ ಈ ವಿಗ್ರಹವನ್ನು …

Read More »

ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ.

ಹೊಸದಿಲ್ಲಿ:  ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಭವ್ಯ ಅಡಿಪಾಯ ಹಾಕುವ ಸಮಾರಂಭ ನಡೆಯುತ್ತಿರುವ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ, ಪ್ರಭು ರಾಮ್ ಅತ್ಯುತ್ತಮ ಮಾನವೀಯ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದಾರೆ, “ಅವರು ನಮ್ಮ ಹೃದಯದ ಆಳದಲ್ಲಿ ನೆಲೆಸಿರುವ ಮಾನವೀಯತೆಯ ಚೈತನ್ಯ” ಎಂದು ಹೇಳಿದ್ದಾರೆ. “ರಾಮ್ ಎಂದರೆ ಪ್ರೀತಿ, ಅವನು ಎಂದಿಗೂ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ …

Read More »