ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …
Read More »ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ: ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ
ಹೊಸದಿಲ್ಲಿ: ಅಯ್ಯೋಧ್ಯೆಯ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆ ಜತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ. ಅಯೋಧ್ಯೆಯಲ್ಲಿ ರಾಮಮಂದಿರ ದೇವಾಲಯದ ನಿರ್ಮಾಣವು ಟ್ರಸ್ಟ್ ನಿಂದ ಆಗಬೇಕೆಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಆದ ಕಾರಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಂತಹ ಸರ್ಕಾರದ ಉನ್ನತ …
Read More »ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ
ಅಯೋಧ್ಯೆ: ಬುಧವಾರ ರಾಮ ದೇವಾಲಯದ ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ. ಬುಧವಾರ ಬೆಳಗ್ಗೆ 11.15ಕ್ಕೆ ಸಾಕೇತ್ ಕಾಲೇಜ್‍ನ ಹೆಲಿಪ್ಯಾಡ್‍ಗೆ ಮೋದಿ ದೆಹಲಿಯಿಂದ ಆಗಮಿಸಲಿದ್ದಾರೆ. ಬಳಿಕ ಹೆಲಿಪ್ಯಾಡ್‍ನಿಂದ ನೇರವಾಗಿ ಹನುಮಂತ ದೇವಾಲಯಕ್ಕೆ ತೆರಳಲಿದ್ದಾರೆ. ಇಲ್ಲಿ 7 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾದ ಬಳಿಕ ರಾಮಜನ್ಮಭೂಮಿಗೆ ಗೇಟ್ ನಂ.3ರ ಮೂಲಕ ಆಗಮಿಸಲಿದ್ದಾರೆ.ಕಾರ್ಯಕ್ರಮ ಆಯೋಜನೆಗೊಂಡಿರುವ ಸ್ಥಳಕ್ಕೆ ನೇರವಾಗಿ ಮೋದಿ ತೆರಳಬಹದುಲ್ಲವೇ ಎಂಬ …
Read More »ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?
ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …
Read More »ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ
ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …
Read More »ತನ್ನ ಕೈಯಾರೆ ಶೌಚಾಲಯ ಕ್ಲೀನ್ ಮಾಡಿದ ಸಚಿವ
ಭೋಪಾಲ್: ತನ್ನ ಕೈಯಾರೆ ಶೌಚಾಲಯ ಶುಚಿಗೊಳಿಸುವ ಮೂಲಕ ಮಧ್ಯಪ್ರದೇಶದ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾರೀ ಸುದ್ದಿಯಾಗಿದ್ದು, ಸದ್ಯ ಅವರಿಗೆ ಪ್ರಶಂಸೆಗಳ ಸುರಿಮಳೆಯೇ ಬರುತ್ತಿದೆ. ಹೌದು. ಸಚಿವರಿಗೆ ಗ್ವಾಲಿಯರ್‍ನ ಆಯುಕ್ತರ ಕಚೇರಿಯ ಸಾರ್ವಜನಿಕ ಶೌಚಾಲಯ ದುರ್ನಾತ ಬೀರುತ್ತಿದೆ ಎಂದು ಕೆಲ ಮಹಿಳೆಯರು ದೂರು ನಿಡಿದ್ದರು. ಈ ಹಿನ್ನೆಲೆಯಲ್ಲಿ ಪರಶೀಲನೆ ನಡೆಸಲೆಂದು ಸಚಿವರು ತೆರಳಿದ್ದರು. ಈ ವೇಳೆ ಶೌಚಾಲಯ ಗಲೀಜಾಗಿರುವುದು ಕಂಡು ಬಂದಿದೆ.ಈ ವೇಳೆ ಸಮಯ ವ್ಯರ್ಥ ಮಾಡದ ಸಚಿವರು …
Read More »ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ
ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …
Read More »ಬಿಎಸ್‍ವೈ ಪುತ್ರಿ, ಕಾವೇರಿ ನಿವಾಸದ ಸಿಬ್ಬಂದಿಗೂ ಕೊರೊನಾ ಶಾಕ್.!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.
Read More »ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ
ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ. ಸಿಎಂ ನಿವಾಸದ …
Read More »ಸಿಎಂ ತವರು ಶಿವಮೊಗ್ಗದಲ್ಲಿ ಮತ್ತೊಬ್ಬ ಶಾಸಕರಿಗೆ ಕೋವಿಡ್-19 ಪಾಸಿಟಿವ್
ಶಿವಮೊಗ್ಗ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತ್ತೋರ್ವ ಶಾಸಕರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ ನಲ್ಲಿ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ಇಂದು ಆರ್.ಪ್ರಸನ್ನ ಕುಮಾರ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡರು. ಈ ವೇಳೆ ಸೋಂಕು ಪತ್ತೆಯಾಗಿದೆ. ಆದರೆ ರೋಗ …
Read More »
Laxmi News 24×7