Breaking News

ರಾಷ್ಟ್ರೀಯ

ಅತಿ ಕಡಿಮೆ ‘ಆಕ್ಟಿವ್ ಕೇಸ್’ ಹೊಂದಿರುವ ಕರ್ನಾಟಕದ ಐದು ಜಿಲ್ಲೆಗಳು..

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಟಾಪ್ ಹತ್ತರೊಳಗೆ ಕರ್ನಾಟಕ ಗುರುತಿಸಿಕೊಂಡಿದೆ. ಒಂದು ಹಂತದಲ್ಲಿ ಇತರೆ ರಾಜ್ಯಗಳಿಗೆ ಮಾದರಿ ಎನಿಸಿಕೊಂಡಿದ್ದ ಕರ್ನಾಟಕ ಈಗ ಗಂಭೀರ ಸ್ಥಿತಿ ತಲುಪಿತ್ತಿದೆ. ಈವರೆಗೂ ರಾಜ್ಯದಲ್ಲಿ 23,474 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 9847 ಜನರು ಗುಣಮುಖರಾಗಿದ್ದು, 13,251 ಕೇಸ್‌ಗಳು ಸಕ್ರಿಯವಾಗಿದೆ. ಈ ಪೈಕಿ ಬೆಂಗಳೂರು …

Read More »

ಕಳೆದ ತಿಂಗಳು 19 ರಂದು ಸುರಪುರದ ದೀವಳಗುಡ್ಡದ ನಿವಾಸಿಯಾದ ಬಸ್ ಕಂಡಕ್ಟರ್ ಗೆ ಕೊರೋನಾ ವಕ್ಕರಿಸಿತ್ತು. ಸೋಂಕಿತ ನಿರ್ವಾಹಕ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆ ಓಡಾಡಿಕೊಂಡಿದ್ದರು. ಅಲ್ಲದೆ, ಸೋಂಕಿತ ವ್ಯಕ್ತಿಯ ಪತ್ನಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೀಗಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಸೋಂಕಿತ ಬಸ್ ಕಂಡಕ್ಟರ್ ಹಾಗೂ ಆತನ ಪತ್ನಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಬಸ್ ಕಂಡಕ್ಟರ್ ನಿಂದ ಹರಡಿದ ಸೋಂಕಿನಿಂದ 16 ಜನರಿಗೆ ಇದೀಗ ಕೊರೋನಾ ವಕ್ಕರಿಸಿದೆ. ಬಸ್ ಘಟಕದಲ್ಲಿನ 7 ಜನರಿಗೆ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದ್ದ 9 ಜನರಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಹೀಗಾಗಿ ಮುಂಜಾಗ್ರತೆ ವಹಿಸಿ ಸುರಪುರ ಬಸ್ ಘಟಕ ಸೀಲ್ ಡೌನ್ ಮಾಡಲಾಗಿದೆ. ಸುರಪುರ ಬಸ್ ಘಟಕದಿಂದ ಯಾವುದೇ ಬಸ್ ಸಂಚಾರವಿರುವದಿಲ್ಲ ಎನ್ನಲಾಗಿದೆ. ಸುರಪುರ ಬಸ್ ಘಟಕದಲ್ಲಿ 335 ಜನ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು ಎಲ್ಲಾ ಸಿಬ್ಬಂದಿಗಳ ಸ್ಯಾಂಪಲ್‌ ಸಂಗ್ರಹ ಮಾಡಲಾಗುತ್ತಿದೆ. ಇಲ್ಲಿವರಗೆ 300 ಜನರ ಸ್ಯಾಂಪಲ್‌ ಸಂಗ್ರಹ ಮಾಡಲಾಗಿದ್ದು ಅದರಲ್ಲಿ 60 ಜನರ ಸ್ಯಾಂಪಲ್‌ ವರದಿ ನೆಗೆಟಿವ್ ಬಂದಿದೆ. ಇದರಿಂದ ಸಿಬ್ಬಂದಿಗಳು ಸ್ವಲ್ಪ ನಿರಾಳರಾಗಿದ್ದಾರೆ. ಸುರಪುರ ತಾಲೂಕು ಆರೋಗ್ಯಧಿಕಾರಿ ಡಾ.ಆರ್.ವಿ.ನಾಯಕ, “ಕಂಡಕ್ಟರ್ ಮೂಲಕ 16 ಜನರಿಗೆ ಕೊರೊನಾ ಬಂದಿದ್ದು 300 ಜನರ ಸ್ಯಾಂಪಲ್‌ ಸಂಗ್ರಹ ಮಾಡಲಾಗಿದೆ. ಅದರಲ್ಲಿ 60 ಜನರ ವರದಿ ನೆಗೆಟಿವ್ ಬಂದಿದೆ. ಜನರು ಯಾವುದೇ ಆತಂಕ ಪಡದೆ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡರೆ ಕೊರೊನಾಗೆ ಭಯಪಡುವ ಅಗತ್ಯ ಇಲ್ಲ” ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು 19 ರಂದು ಸುರಪುರದ ದೀವಳಗುಡ್ಡದ ನಿವಾಸಿಯಾದ ಬಸ್ ಕಂಡಕ್ಟರ್ ಗೆ ಕೊರೋನಾ ವಕ್ಕರಿಸಿತ್ತು. ಸೋಂಕಿತ ನಿರ್ವಾಹಕ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆ ಓಡಾಡಿಕೊಂಡಿದ್ದರು. ಅಲ್ಲದೆ, ಸೋಂಕಿತ ವ್ಯಕ್ತಿಯ ಪತ್ನಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೀಗಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಸೋಂಕಿತ ಬಸ್ ಕಂಡಕ್ಟರ್ ಹಾಗೂ ಆತನ ಪತ್ನಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.   ಆದರೆ, ಬಸ್ ಕಂಡಕ್ಟರ್ ನಿಂದ ಹರಡಿದ ಸೋಂಕಿನಿಂದ …

Read More »

ಚಿತ್ರದುರ್ಗದಲ್ಲಿ ನ್ಯಾಯಾಲಯದ ಟೈಪಿಸ್ಟ್​​ಗೆ ಕೊರೋನಾ; 23 ಜನರೊಂದಿಗೆ ಪ್ರಾಥಮಿಕ ಸಂಪರ್ಕ; ಜಿಲ್ಲೆಯ ಜನರಲ್ಲಿ ಆತಂಕ

ಚಿತ್ರದುರ್ಗ(ಜು.06): ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಒಬ್ಬೊಬ್ಬರಿಗೆ ಹರಡಿದ ಕೊರೋನಾ ಸೋಂಕು ಈಗ ಚಿತ್ರದುರ್ಗ ಜಿಲ್ಲಾ ಸೀನಿಯರ್ ಡಿವಿಷನ್ ನ್ಯಾಯಾಲಯಕ್ಕೆ ಕಾಲಿಟ್ಟಿದೆ. ನಿನ್ನೆ ಚಿತ್ರದುರ್ಗದ ಸಿಜೆಎಂ ನ್ಯಾಯಾಲಯದ ಟೈಪಿಸ್ಟ್ ಗೆ ಕೊರೋನಾ ಪಾಸಿಟಿವ್ ಬಂದಿದು ಜಿಲ್ಲೆಯ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಚಿತ್ರದುರ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯೂರು ಮೂಲದ 33 ವರ್ಷದ ವ್ಯಕ್ತಿಗೆ ಕೊರೋ‌ನಾ ಪಾಸಿಟಿವ್ …

Read More »

60 ವರ್ಷ ಮೇಲ್ಪಟ್ಟವರು ಹೊರಬರದಂತೆ ರಾಜ್ಯದಲ್ಲಿ ಕಾನೂನು

ಬೆಂಗಳೂರು(ಜು.06): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ಕಿಡ್ನಿ, ಲಿವರ್‌, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಪೂರ್ವ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರಬರಬಾರದೆಂಬ ಕಾನೂನು ರೂಪಿಸುವ ಚಿಂತನೆ ನಡೆಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಪೈಕಿ ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಹಾಗೂ ಈಗಾಗಲೇ ಪೂರ್ವ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಾಗಿದ್ದಾರೆ. …

Read More »

ಕೊಡಗು: ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಕುಟುಂಬದ ಬದುಕು ಕಿತ್ತುಕೊಂಡು ಗಾಯದ ಮೇಲೆ ಬರೆ ಎಳೆದ ಕೊರೋನಾ…

ಕೊಡಗು(ಜು.06): ಮಾರಕ ಕೊರೋನಾ ವೈರಸ್​ ಪ್ರತಿಯೊಬ್ಬರ ಜೀವನನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಭೂಕುಸಿತದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದ ಕುಟುಂಬ ಲಾಕ್ಡೌನ್​​ನಿಂದ ಕೂಲಿಯನ್ನು ಕಳೆದುಕೊಂಡು ಒಂದೊತ್ತಿನ ಗಂಜಿಗೂ ಪರಿಪಾಟಲು ಪಡುತ್ತಿದೆ. ಹಲವು ಕಾಯಿಲೆಗಳಿಂದ ನರಳುವ ತಂದೆ ತಾಯಿಯನ್ನು ಸಾಕೋದು ಪಿಯುಸಿ ಓದುತ್ತಿದ್ದ ಮಗನ ಹೆಗಲಿಗೆ ಬಿದ್ದಿದೆ. ಅಂತಹ ಮನಕಲಕುವ ಕಥೆ ವ್ಯವಸ್ಥೆಯನ್ನು ನೋವು ನೋಡ್ಲೇಬೇಕು. Ρ ಕಣ್ಣು ಕಾಣದೆ ತನ್ನ ಕೆಲಸವನ್ನು ತಾನು ಮಾಡಿಕೊಳ್ಳಲು ಸಾಧ್ಯವಾಗದ ತಂದೆ, ಸಂಧಿವಾತದಿಂದ ಕೈ …

Read More »

ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ. ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ …

Read More »

17 ದಿನಗಳ ಮಗುವಿನ ಅಂತ್ಯಕ್ರಿಯೆ ನಡೆಸಿ ಕಣ್ಣೀರು ಹಾಕಿದ್ರು ಆರೋಗ್ಯ ಸಿಬ್ಬಂದಿ…

ಬೆಂಗಳೂರು: ಒಂದು ಮಗುವಿನ ಆಗಮನ ಅಂದ್ರೆ ಆ ಮನೆ ತುಂಬಾ ಸಂತೋಷ ತುಂಬಿರುತ್ತದೆ. ಇನ್ನು ತಾಯಿಗಂತೂ ಅದು ಮರುಜನ್ಮ, ಒಂಬತ್ತು ತಿಂಗಳು ಹೊತ್ತು, ಹೆರಿಗೆ ನೋವು ಸಹಿಸಿಕೊಂಡ ಆಕೆಗೆ, ಬಳಿಕ ಆ ಮಗುವಿನ ಮುಕ ನೋಡಿ, ಒಮ್ಮೆ ಮಗುವನ್ನು ಮುದ್ದಾಡಿದರೇ ಎಲ್ಲ ನೋವು ಶಮನ. ಆದ್ರೆ ದುರಾದೃಷ್ಟವಶಾತ್​ ಈ ತಾಯಿಗೆ ಆ ಸಂತೋಷ ಸಿಗದಂತಾಗಿದೆ. ಈ ಕಥೆ ಓದಿದ್ರೆ ನಿಜಕ್ಕೂ ಕಣ್ಣೀರು ಬರುತ್ತದೆ. ಕೊರೊನಾ ತಂದಿಟ್ಟ ಪರಿಸ್ಥಿತಿ ನೋಡಿದರೆ ನಿಜಕ್ಕೂ …

Read More »

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಹವಾಮಾನ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಇಂದಿನಿಂದ ಜುಲೈ 10 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.     ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಇಂದಿನಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ …

Read More »

ಭೀಕರ ಅಪಘಾತದಲ್ಲಿ ವ್ಯಕ್ತಿ ಸಾವು; ಎದೆ ಝಲ್ಲೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ. ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್​ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್​ ಹಾರಿ ಹೋಗಿದ್ದು, ಮಹಂತೇಶ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ …

Read More »

24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …

Read More »