Breaking News

ರಾಷ್ಟ್ರೀಯ

ಹೆರಿಗೆ ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಗಂಡಾಂತರ.. ಎಲ್ಲಿ?

ಬೆಳಗಾವಿ: ಚಿಕ್ಕೋಡಿ ಹೆರಿಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಆದ ಮಹಾ ಎಡವಟ್ಟಿಗೆ ಇಡೀ ಗ್ರಾಮವೊಂದು ಆತಂಕಕ್ಕೆ ಒಳಗಾಗಿದೆ. ಬಾಣಂತಿಗೆ ಸೋಂಕು ಇರುವುದನ್ನು ಹೇಳದೇ ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್‌ ಮಾಡಿದ್ದಾರೆ. ಇದರಿಂದ ಈಗ ಇಡೀ ಬಾವನಸೌಂದತ್ತಿ ಗ್ರಾಮಕ್ಕೆ ಗಂಡಾಂತರ ಎದುರಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. ಹೆರಿಗೆಯಾದ ಬಳಿಕ ಬಾಣಂತಿಗೆ ಸೋಂಕಿರುವುದು ಹೇಳದೆ ವೈದ್ಯರು ಆಕೆಯನ್ನು ಮನೆಗೆ ಕಳುಹಿಸಿದ್ದರು. ನಿನ್ನೆ ಸಂಜೆ ಗ್ರಾಮವನ್ನ …

Read More »

ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಬೆಳಗಾವಿ, : ಪತ್ನಿ ತಮ್ಮನ್ನು ಬಿಟ್ಟು ತವರಿಗೆ ಹೋಗಿದ್ದರಿಂದ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಣ್ಣ ಗಿಡ್ಡಾಳೆ (35) ಎಂಬುವರು ತಮ್ಮ ಮಕ್ಕಳಾದ ಚಿನ್ನು (2), ನಿರಂಜನ್ (10) ಅವರಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಹೆಂಡತಿ …

Read More »

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …

Read More »

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ರಾಮ ಮಂದಿರ ನಿರ್ಮಾಣಕ್ಕೆ ತಲಾ ಹತ್ತು ರೂ. ಮತ್ತು ಮನೆಯಿಂದ 100 ರೂ. ದೇಣಿಗೆ……….!

ಅಯೋಧ್ಯೆ,ಜು.27- ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳು ಮಾತ್ರವಲ್ಲದೆ ಎಲ್ಲಾ ಸಮುದಾಯಗಳಿಂದ ದೇಣಿಗೆಯನ್ನು ಸ್ವೀಕರಿಸಲಾಗುತ್ತದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇತ್ತೀಚೆಗೆ ನಡೆದ ಟ್ರಸ್ಟ್‍ನ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ಅವರು, ರಾಮ ಮಂದಿರ ನಿರ್ಮಾಣಕ್ಕೆ ತಲಾ ಹತ್ತು ರೂ. ಮತ್ತು ಮನೆಯಿಂದ 100 ರೂ. ದೇಣಿಗೆ ನೀಡಬಹುದಾಗಿದೆ. ಇದು ಕೇವಲ ಸಲಹೆ ಅಷ್ಟೇ. ತೆರಿಗೆಯಂತೆ ಅಲ್ಲ …

Read More »

ಸೊಸೆ, ಮೊಮ್ಮಗಳು ಡಿಸ್ಚಾರ್ಜ್ ಖುಷಿಯಿಂದ ಕಣ್ಣೀರಿಟ್ಟ ಬಿಗ್ ಬಿ

ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.ಸೋಮವಾರ ಸಂಜೆ ಪುತ್ರಿ …

Read More »

ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಸಿಕ್ಕಿದೆ.

ಕೋಲ್ಕತ್ತಾ: ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಪಶ್ಚಿಮ ಬಂಗಾಳದ ದಿಘಾದಲ್ಲಿ ಸಿಕ್ಕಿದೆ. ಚಿಲ್‍ಶಂಕರ್ ಮೀನು ಎಂದು ಕರೆಯಲಾಗುತ್ತದೆ. ಇದು ಸುಮಾರು 780 ಕೆ.ಜಿ ತೂಕ ಇದೆ. ಚಿಲ್‍ಶಂಕರ್ ಮೀನು ಅಪರೂಪದ ಜಾತಿಯಾಗಿದ್ದು, ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸಿಕ್ಕಿದೆ. ಈ ಮೊದಲು ಇಂತಹ ಮೀನನ್ನು ನೋಡಿಲ್ಲ ಎಂದು ಮೀನುಗಾರರು ಹೇಳಿದ್ದಾರೆ. ಸೋಮವಾರ ಒರಿಸ್ಸಾದ ವ್ಯಕ್ತಿಯೊಬ್ಬನ ಒಡೆತನದ ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸೆರೆ ಸಿಕ್ಕಿದೆ. ಅದರಲ್ಲೂ ಪಶ್ಚಿಮ …

Read More »

800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ. ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು …

Read More »