Breaking News

ರಾಷ್ಟ್ರೀಯ

ಐಸಿಸಿ ಟಿ -20 ವಿಶ್ವಕಪ್ ಮುಂದೂಡಿಕೆ – ಐಪಿಎಲ್ ಲೀಗ್ ಗೆ ರಹದಾರಿ

ನವದೆಹಲಿ, ಜು.23 (ಹಿ.ಸ) : ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು 2022ಕ್ಕೆ ಮುಂದೂಡಿದೆ. ಈ ಹಿನ್ನಲೆಯಲ್ಲಿ ಇಂಡಿಯನ್ ಪ್ರೀಮಿಯರ್‌ ಲೀಗ್‌ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮಾರ್ಚ್‌ 29ರಿಂದ ಮೇ 24ರವರೆಗೆ ನಡೆಯಬೇಕಿದ್ದ ಐಪಿಎಲ್‌ 2020 ಟೂರ್ನಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅನಿರ್ದಿಷ್ಟ ಕಾಲ ರದ್ದು ಪಡಿಸಿತ್ತು. ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ …

Read More »

ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ …

Read More »

ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..

ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …

Read More »

ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್‌ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ. ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್‌ಮನ್‌ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ. 830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ರಕ್ಷಣೆಗೆ ಆಗ್ರಹಿಸಿ ಬಿಮ್ಸ್‌ ಸಿಬ್ಬಂದಿ ಪ್ರತಿಭಟನೆ

ಬೆಳಗಾವಿ: ಇಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗುಂಪೊಂದು ಕಲ್ಲುತೂರಾಟ ನಡೆಸಿದ್ದನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ವೈದ್ಯಕೀಯ ಸಿಬ್ಬಂದಿ ಗುರುವಾರ ಪ್ರತಿಭಟಿಸಿದರು. ಬೆಳಿಗ್ಗೆಯೇ ಬಿಮ್ಸ್‌ ಕಾಲೇಜಿನ ಆವರಣದಲ್ಲಿ ಜಮಾಯಿಸಿದ ಅವರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಯಾವುದಾದರೂ ವ್ಯಕ್ತಿಗೆ ಕೊರೊನಾ ಬಂದಿದೆ ಎಂದಾಕ್ಷಣ ಜನರು ದೂರ ಹೋಗುತ್ತಿರುವ ಸಂದರ್ಭವಿದು. ಆದರೆ, ವೈದ್ಯರು ಹಾಗೂ ವೈದ್ಯಕೀಯ …

Read More »

ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರಿಸಿ: ಭಾರತೀಯ ಕೃಷಿಕ ಸಮಾಜ

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್‌ …

Read More »

ನನ್ನ ಕಣ್ಮುಂದೆ ನಮ್ಮ ಜನರು ಸೋಂಕಿತರಾಗೋದನ್ನು ನೋಡಲಾರೆ:ಒಂದೇ ದಿನ 10,576 ಪ್ರಕರಣಗಳು ವರದಿ

ಮುಂಬೈ: ಮಹಾರಾಷ್ಟ್ರ ಕೊರೊನಾ ಸೋಂಕಿತರಲ್ಲಿ ಮಹಾ ದಾಖಲೆಯನ್ನು ಬರೆದಿದ್ದು, ಬುಧವಾರ ಒಂದೇ ದಿನ 10,576 ಪ್ರಕರಣಗಳು ವರದಿಯಾಗಿವೆ. ಬುಧವಾರ ಕೊರೊನಾಗೆ ಮಹಾರಾಷ್ಟ್ರದಲ್ಲಿ 280 ಜನರನ್ನು ಬಲಿ ಪಡೆದುಕೊಂಡಿದೆ. ದೇಶದಲ್ಲಿ ಇದುವರೆಗೂ 11 ಲಕ್ಷಕ್ಕೂ ಅಧಿಕ ಜನರು ಕೊರೊನಾ ಪ್ರಕರಣಗಳಿವೆ. ಮಹಾರಾಷ್ಟ್ರ ಕೊರೊನಾ ಪೀಡಿತ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ. 24 ಗಂಟೆಯಲ್ಲಿ 10,576 ಪ್ರಕರಣ ಸೇರಿ ಸೋಂಕಿತರ ಸಂಖ್ಯೆ 3,37,607ಕ್ಕೆ ಏರಿಕೆಯಾಗಿದೆ. ಇದುವರೆಗೂ ಮಹಾರಾಷ್ಟ್ರದಲ್ಲಿ 12,556 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿ …

Read More »

ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ

ಮುಂಬೈ: ಗೇಮ್ ಆಡಬೇಡ ಎಂದು ತಾಯಿ ಮೊಬೈಲನ್ನು ಕಿತ್ತುಕೊಂಡಿದಕ್ಕೆ 12 ವರ್ಷದ ಮಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇತ್ತೀಚೆಗೆ ಯುವಜನತೆ ಮೊಬೈಲ್‍ಗೆ ಅಂಟಿಕೊಂಡೆ ಇರುತ್ತಾರೆ. ಅದರಲ್ಲಿ ಗೇಮ್ ಆಡುವ ಮತ್ತು ವಿಡಿಯೋ ಮಾಡುವ ಗೀಳಿಗೆ ಬಿದ್ದಿರುತ್ತಾರೆ. ಹೀಗೆ ಮೊಬೈಲ್ ಚಟಕ್ಕೆ ಬಿದ್ದ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊರೊನಾ ಲಾಕ್‍ಡೌನ್‍ನಿಂದ ಮನೆಯಲ್ಲೇ ಇದ್ದ ಬಾಲಕ …

Read More »

ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ

ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …

Read More »

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »