Breaking News

ರಾಷ್ಟ್ರೀಯ

ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …

Read More »

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ. ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ …

Read More »

ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ………

ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.   ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು …

Read More »

ಕೊರೊನಾ ವಿರುದ್ಧ ಹೋರಾಡಲು ಯೋಗ ಮುಖ್ಯ………..?

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …

Read More »

ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ……….

ರಾಯ್‍ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್‍ಗಢದ ರಾಜನಂದಗಾಂವ್‍ನ ಮನ್‍ಪುರನಲ್ಲಿ ನಡೆದಿದೆ. ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …

Read More »

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರು, ( ಕರ್ನಾಟಕ ವಾರ್ತೆ ) :ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ ತಾಣ www.ksp.gov.in ಲಾಗ್‍ಇನ್ ಆಗಿ ಜೂನ್ 22 …

Read More »

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ತಂದೆ- ತಾಯಿ ಸೇರಿ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ತಂದೆ- ತಾಯಿ ಸೇರಿ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೌರವ್ ಗಂಗೂಲಿ ಅವರ ತಂದೆ-ತಾಯಿ ಸಹೋದರ ಮತ್ತು ಅವರ ಪತ್ನಿಗೆ ಸೋಂಕು ಪತ್ತೆಯಾಗಿದೆ. ಗಂಗೂಲಿ ಸಹೋದರ, ಅವರ ಪತ್ನಿ ಹಾಗೂ ಗಂಗೂಲಿ ಪೋಷಕರಿಗೆ ಒಂದೇ ರೀತಿಯ ಅನಾರೋಗ್ಯ ಕಾಣಿಸಿಕೊಂಡಿತ್ತು. ಆದರೆ ಅವರ್ಯಾರೂ ಬೆಹಾಲಾದಲ್ಲಿರುವ ಗಂಗೂಲಿ ಅವರ ಮನೆಯಲ್ಲಿರಲಿಲ್ಲ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವಿವಿಧ ರೀತಿಯ ಪರೀಕ್ಷೆಗಳನ್ನು …

Read More »

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘

2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …

Read More »

ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್,​​ …

Read More »