ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹಿಟಣಗ್ಗಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …
Read More »ಸೆನ್ಸೆಕ್ಸ್ 1 ಸಾವಿರ ಅಂಕ ಕುಸಿತ, ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟ!
ಮುಂಬೈ: ಭಾರತೀಯ ಷೇರು ಮಾರುಕಟ್ಟೆ ವಾರದ ಕೊನೆಯ ದಿನವಾದ ಶುಕ್ರವಾರ ಒಂದೇ ದಿನ ಭಾರಿ ಕುಸಿತ ಕಂಡಿದ್ದು, ಸೆನ್ಸೆಕ್ಸ್ 1 ಸಾವಿರಕ್ಕೂ ಅಧಿಕ ಅಂಕಗಳ ನಷ್ಟ ಅನುಭವಸಿದ್ದು ಮಾತ್ರವಲ್ಲದೇ ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟವಾಗಿದೆ. ಇಂದು ದಿನದ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸೆ ಬರೊಬ್ಬರಿ 1, 017 ಅಂಕಗಳ ಕುಸಿತ ಕಂಡಿದ್ದು ಆ ಮೂಲಕ ಬರೊಬ್ಬರಿ ಶೇ.1.24ರಷ್ಟು ಕುಸಿತದೊಂದಿಗೆ 81,183 ಅಂಕಗಳಿಗೆ ಕುಸಿದಿದೆ. ಅಂತೆಯೇ ನಿಫ್ಟಿ ಕೂಡ ಶೇ.1.17ರಷ್ಟು ಅಂದರೆ …
Read More »ಬಿಜೆಪಿ ಸೇರಿದ ಕ್ರಿಕೆಟಿಗ ರವೀಂದ್ರ ಜಡೇಜಾ
ಜಾಮ್‌ನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಅವರ ಪತ್ನಿ ಮತ್ತು ಕೇಸರಿ ಪಕ್ಷದ ಶಾಸಕಿ ರಿವಾಬಾ ಜಡೇಜಾ ಅವರು ಗುರುವಾರ ಹೇಳಿದ್ದಾರೆ. ಇಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಿವಾಬಾ ಜಡೇಜಾ, ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದ ಕಾರ್ಡ್‌ನ ಫೋಟೋಗಳನ್ನು “ಸದಾಸ್ಯತ ಅಭಿಯಾನ 2024” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ …
Read More »ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು
ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ ಹೆಡ್ ಕಾನ್ಸ್ ಟೇಬಲ್. ಗಜೇಂದ್ರಗಢ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಅವರ ಮನೆಯಲ್ಲಿ ನಾಳೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೂವು-ಹಣ್ಣು, ಪೂಜೆ ಸಾಮಗ್ರಿಗಳೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಂಕ್ರಿಟ್ …
Read More »ಯಾವುದೇ ಸಮಯದಲ್ಲೂ ಚುನಾವಣೆ ಬರಬಹುದು ಸಿದ್ಧರಾಗಿ : HD ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ!
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ …
Read More »ಪ್ರಧಾನಿ ಮೋದಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್
ಬೆಂಗಳೂರು, ಸೆಪ್ಟೆಂಬರ್ 06:ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ. ಆರೋಗ್ಯ ವಿಮೆ ಮೇಲೂ ಶೇ …
Read More »ರೇಣುಕಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಕರೆ ಮಾಡಿದ್ದು ಯಾರಿಗೆ, ಹೋಗಿದ್ದು ಎಲ್ಲಿಗೆ? ಚಾರ್ಜ್ಶೀಟ್ನಲ್ಲಿ ಬಯಲಾಯ್ತು ‘ಡಿ ಗ್ಯಾಂಗ್’ನ ಮತ್ತೊಂದು ಕರಾಳ ಮುಖ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸ್ಸೇಜ್ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ನ ಕರಾಳ ಕೃತ್ಯಗಳು ದಿನ ಕಳೆದಂತೆ ಒಂದೊಂದೇ ಬಯಲಾಗುತ್ತಿದೆ. ನಿಜಜೀವನದಲ್ಲಿ ಮಾದರಿಯಾಗಬೇಕಿದ್ದ ಸ್ಟಾರ್ ನಟನ ಈ ಕೃತ್ಯ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಚಾರ್ಜ್ಶೀಟ್ನಲ್ಲಿ ಪೊಲೀಸರು ಉಲ್ಲೇಖಿಸಿರುವ ಆಘಾತಕಾರಿ ಅಂಶಗಳು ಡಿ ಗ್ಯಾಂಗ್ನ ಕರಾಳ ಮುಖವನ್ನು ಹೊರಜಗತ್ತಿಗೆ ಪರಿಚಯಿಸುತ್ತಿದೆ. ಪ್ರಕರಣದ …
Read More »ಇಬ್ಬರು `IAS’, ಮೂವರು `IFS’ ಅಧಿಕಾರಿಗಳನ್ನು ವರ್ಗಾವಣೆ
ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ …
Read More »ಲಕ್ಷ್ಮೇಶ್ವರ: ರೈತನ ಕೈ ಹಿಡಿದ ತರಕಾರಿ ಕೃಷಿ
ಲಕ್ಷ್ಮೇಶ್ವರ: ಅಲ್ಪಸ್ವಲ್ಪ ಭೂಮಿಯಲ್ಲೇ ಕಷ್ಪಪಟ್ಟು, ವಿವಿಧ ತರಕಾರಿಗಳನ್ನು ಬೆಳೆದು ಸೈ ಎನಿಸಿಕೊಂಡವರು ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ರಾಮನಗೌಡ ಶಂಕರಗೌಡ ದುರುಗನಗೌಡ್ರ. ಮೂಲತಃ ಲಕ್ಷ್ಮೇಶ್ವರ ತಾಲ್ಲೂಕು ಗುಲಗಂಜಿಕೊಪ್ಪದ ನಿವಾಸಿಯಾದ ರಾಮನಗೌಡ್ರ ಈಗ ಲಕ್ಷ್ಮೇಶ್ವರದ ರಂಭಾಪುರಿ ನಗರದ ಆಶ್ರಯ ಕಾಲೊನಿಯಲ್ಲಿ ವಾಸವಾಗಿದ್ದಾರೆ. ಲಕ್ಷ್ಮೇಶ್ವರದ ಮಾನ್ವಿ ಎಂಬುವವರಿಗೆ ಸೇರಿದ ಆರು ಎಕರೆ ತೋಟವನ್ನು ವರ್ಷಕ್ಕೆ ₹50 ಸಾವಿರದಂತೆ ಇವರು ಲಾವಣಿ ಆಧಾರದ ಮೇಲೆ ಪಡೆದುಕೊಂಡು ವಿವಿಧ ತರಕಾರಿ, ಗಲಾಟೆ ಹೂವು ಬೆಳೆಯುತ್ತಿದ್ದಾರೆ. ಹದಿನೈದು ಗುಂಟೆಯಲ್ಲಿ …
Read More »