Breaking News

ರಾಷ್ಟ್ರೀಯ

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ..! ಏನಿರುತ್ತೆ ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು : ರಾಜ್ಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂಲೇ ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಈ ಕುರಿತಂತೆ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ …

Read More »

ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ50 ಕುಟುಂಬಗಳಿಗೆದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾದಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡ ಕುಟುಂಬಗಳ ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ ಇಲ್ಲಿನ ಕಣಬರಗಿಯಲ್ಲಿ ವಾಸವಾಗಿರುವ ಪ್ಲಾಸ್ಟಿಕ್, ಬಾಟಲ್ ಆಯ್ದು ಜೀವನ ಸಾಗಿಸುತ್ತಿರುವ ಸುಮಾರು 50 ಕುಟುಂಬಗಳಿಗೆ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು. ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಇತ್ಯಾದಿ ವಸ್ತುಗಳನ್ನು ಒಳಗೊಂಡಿರುವ ಕಿಟ್ ನೀಡಿದರು. ಮಹಿಳಾ ಕಲ್ಯಾಣ …

Read More »

ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಸಿಎಂ ಚಾಲನೆ …..

ಬೆಂಗಳೂರು,ಏ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ರೋಗ ಕೊರೊನಾ ವೈರಸ್ ಹರಡುವಿಕೆ ಶೀಘ್ರದ ಲ್ಲೇ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಕೊರೊನಾ ಹೋರಾಟದಲ್ಲಿ ಈಗ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದರು. ಸಹಾಯವಾಣಿಯ ಉದ್ದೇಶ ರಾಜ್ಯದ ಎಲ್ಲಾ ನಿವಾಸಿಗಳಿಗೆ …

Read More »

ಪೆನ್ಷನ್ ಹಣ ಸಿಗದೆ ಸಂಕಷ್ಟದಲ್ಲಿ ವಿಕಲಚೇತನೆ – ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಹಾಸನ: ಸರ್ಕಾರ ವಿಕಲಚೇತನರಿಗೆ ನೀಡುತ್ತಿದ್ದ 1400 ರೂಪಾಯಿ ಪೆನ್ಷನ್ ಹಣ 9 ತಿಂಗಳುಗಳಿಂದ ಬಾರದ ಕಾರಣ ಎರಡು ಕಾಲಿನಲ್ಲಿ ಸ್ವಾಧೀನವಿಲ್ಲದ ಮಹಿಳೆಯೊಬ್ಬಳು ಓರ್ವ ಮಗನೊಂದಿಗೆ ಸರಿಯಾಗಿ ಊಟವಿಲ್ಲದೆ ಸಂಕಟ ಪಡುತ್ತಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ವಿಕಲಚೇತನೆ ಭಾಗ್ಯಲಕ್ಷ್ಮಿ ತನ್ನ ಮಗನೊಂದಿಗೆ ಅರಸೀಕೆರೆ ಪಟ್ಟಣದಲ್ಲಿ ವಾಸವಿದ್ದು ಹೂಕಟ್ಟಿ ಜೀವನ ಸಾಗಿಸುತ್ತಿದ್ದರು. ಕೊರೊನಾ ಲಾಕ್‍ಡೌನ್ ಆದ ನಂತರ ಹೂ ಕಟ್ಟುವ ಕಾಯಕಕ್ಕೂ ಕುತ್ತು ಬಿದ್ದಿದೆ. ಪರಿಣಾಮ …

Read More »

ಗದಗ:ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ

ಗದಗ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರನ್ನು ಗುಂಪು ಸೇರುವುದನ್ನು ತಡೆಯುವುದೇ ಪೊಲೀಸರಿಗೆ ತಲೆನೋವಾಗಿದೆ. ನಗರದ ಗ್ರೇನ್ ಮಾರ್ಕೆಟ್ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್‍ನಲ್ಲಿ ಜನಸ್ತೋಮ ನಿರ್ಮಾಣವಾಗಿದೆ. ಜಿಲ್ಲೆನಲ್ಲಿ ಲಾಕ್‍ಡೌನ್ ನಿಯಮ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಕೊರೊನಾ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ಮಾಡಲು ಜನರು ಹೂವು, ಹಣ್ಣು, ದಿನಸಿ, ಬಟ್ಟೆ …

Read More »

ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್

ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್ ನೀಡಿವೆ. ಬಳ್ಳಾರಿ ನಗರದ ಸುತ್ತ ಸ್ಯಾನಿಟೈಜರ್ ಸಿಂಪಡಣೆ ಮಾಡುವ ಮೂಲಕ ತಮ್ಮದೇ ಆದ ಸಹಾಯ ಮಾಡಿವೆ. ಲಾಕ್‍ಡೌನ್ ಸಮಯದಲ್ಲಿ ಜಿಲ್ಲೆಯ ಕೈಗಾರಿಕೆಗಳು ಸಹಾಯ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕಲು ಕೇಳಿದ್ದರು. ಹೀಗಾಗಿ ಬಳ್ಳಾರಿಯ ಎನ್‍ಎಮ್‍ಡಿಸಿ ಕಂಪನಿ ಜಿಲ್ಲಾಡಳಿತಕ್ಕೆ ಸಾತ್ ನೀಡಿದ್ದು, ಕಂಪನಿ ವತಿಯಿಂದ ನಗರದ ನೈರ್ಮಲ್ಯೀಕರಣ ಕೈಗೊಳ್ಳಲು ಮುಂದಾಗಿದೆ. ನಗರದ ಜನ ನಿಬಿಡ …

Read More »

ಉಚಿತ ಹಾಲಿನಿಂದ ರಾಜ್ಯದಲ್ಲಿ ಕೊರೋನಾ ಹರಡುವುದು ಖಚಿತ..!

ಬೆಂಗಳೂರು, ಏ.22- ಸರ್ಕಾರವೇನೋ ಬಡವರಿಗಾಗಿ ಉಚಿತ ಹಾಲು ನೀಡುತ್ತಿದೆ. ಆದರೆ ಇದನ್ನು ಪಡೆಯಲು ಜನ ಮುಗಿ ಬೀಳುತ್ತಿರುವುದನ್ನು ನೋಡಿದರೆ ಮಹಾ ಮಾರಿ ಕೊರೊನಾ ಉಚಿತವಾಗಿ ಹರಡುತ್ತಿದೆಯೇನೋ ಎಂದೆನಿಸುತ್ತಿದೆ.ಬಿಟ್ಟಿ ಹಾಲು ಪಡೆಯಲು ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಾ ಮುಂದು ತಾ ಮುಂದು ಎಂದು ನುಗ್ಗುತ್ತಿರುವುದು ಒಬ್ಬರ ಮೇಲೊಬ್ಬರು ಬಿದ್ದು ಪೈಪೋಟಿಗೆ ಬೀಳುತ್ತಿರುವುದರಿಂದ ಹಾಲು ಉಚಿತ ಕೊರೊನಾ ಖಚಿತ ಎಂಬಂತಾಗಿದೆ. ನಗರದ ಯಲಹಂಕ, ಬಾಪೂಜಿ ನಗರ, ನೆಲಮಂಗಲ ಮುಂತಾದೆಡೆ ಉಚಿತ ಹಾಲು …

Read More »

ಬೆಂಗಳೂರಲ್ಲಿ ಲಾಕ್‍ಡೌನ್ ಮತ್ತಷ್ಟು ಟೈಟ್ : ರಸ್ತೆಗಿಳಿದರೆ ವಾಹನ ಸೀಜ್ ಆಗುತ್ತೆ ಹುಷಾರ್..!

ಬೆಂಗಳೂರು, ಏ.22- ಬೇಕಾಬಿಟ್ಟಿ ವಾಹನ ಸಂಚಾರದಿಂದ ನಿನ್ನೆ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಂಚಾರಿ ಪೊಲೀಸರು ಇಂದು ನಗರದಲ್ಲಿ ಲಾಕ್‍ಡೌನ್ ಬಿಗಿಗೊಳಿಸಿದ್ದಾರೆ. ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದ 1000ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದುವರೆಗೂ 759 ವಾಹನಗಳನ್ನು ವಶಪಡಿಸಿಕೊಂಡಿದ್ದು, ತಪಾಸಣೆ ಮುಂದುವರಿಸಿರುವ ಪೊಲೀಸರು ರಸ್ತೆಯಲ್ಲಿ ಓಡಾಡುವ ಪ್ರತಿಯೊಂದು ವಾಹನಗಳ ನಂಬರ್ ನೋಟ್ ಮಾಡಿಕೊಳ್ಳುತ್ತಿದ್ದು, ವಾಹನ …

Read More »

BIG BREAKING : ಭಾರತದಲ್ಲೂ ಮೇ.3ಕ್ಕೆ ಮುಗಿಯಲ್ಲ ಲಾಕ್‍ಡೌನ್‍..!

ನವದೆಹಲಿ, ಏ.22- ವಿಶ್ವಾದ್ಯಂತ ಕಾಡಿರುವ ಕೊರೊನಾ ಸೋಂಕನ್ನು ಹಿಮ್ಮೆಟ್ಟಿರುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ರಾಷ್ಟ್ರಗಳಲ್ಲಿ ಲಾಕ್‍ಡೌನ್‍ಅನ್ನು ಜೂನ್‍ವರೆಗೂ ಮುಂದುವರಿಸಲಾಗಿದೆ. ಇದರ ನಡುವೆ ಭಾರತದಲ್ಲೂ ಮೇ 3ರ ನಂತರ ಮತ್ತೆ ಇದೇ ಪರಿಸ್ಥಿತಿ ಮುಂದುವರಿಯಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಅಮೆರಿಕ, ಸ್ಪೇನ್, ಇಟಲಿ, ಫ್ರಾನ್ಸ್, ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳು ಕೊರೊನಾ ಹತೋಟಿಗೆ ತರಲು ಲಾಕ್‍ಡೌನ್‍ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಮುಂಬರುವ ಮೇ ಅಂತ್ಯದವರೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ …

Read More »

ಬೆಳಗಾವಿಯ ಕೊರೋನಾ ವೈರಾಣು ಟೆಸ್ಟಿಂಗ್ ಲ್ಯಾಬ್ ಟೆಸ್ಟಿಂಗ್ ಪ್ರಾರಂಭ..

ಬೆಳಗಾವಿ- ಬೆಳಗಾವಿಯ ಕೆ ಎಲ್ ಈ ಆಸ್ಪತ್ರೆ ಎದುರಿನ ಪಾರಂಪರಿಕ ಔಷಧಿ ಸಂಶೋಧನಾ ಕೇಂದ್ರದಲ್ಲಿ ಕೊರೋನಾ ವೈರಾಣು ಟೆಸ್ಟ್ ಮಾಡುವ ಲ್ಯಾಬ್ ಸೆಟಲ್ ಮಾಡುವ ಕೆಲಸ ಅಹೋರಾತ್ರಿ ನಡೆಯುತ್ತಿದೆ. ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಶಂಕಿತರ ಗಂಟಲು ದ್ರವಗಳನ್ನು ಟೆಸ್ಟ್ ಮಾಡುವ ಟ್ರೈಲ್ ನಡೆಯುತ್ತಿದ್ದು.ಬಹುಶ ನಾಳೆಯಿಂದ ಬೆಳಗಾವಿಯ ಲ್ಯಾಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ . ಬೆಳಗಾವಿಯ ಪ್ರಯೋಗಾಲಯ ಪೂರ್ಣ ಪ್ರಮಾಣದಲ್ಲಿ ನಾಳೆಯಿಂದ …

Read More »