ಕೇರಳದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ – ಷರತ್ತುಗಳೊಂದಿಗೆ ಅನುಮತಿ ನೀಡಿದ ಕೇರಳ – ಕೆಂಪು ವಲಯದಲ್ಲಿ ಮೇ 3ರವರೆಗೆ ಲಾಕ್‍ಡೌನ್ ಮುಂದುವರಿಕೆ ತಿರುವನಂತಪುರಂ: ಮಹತ್ವದ ನಿರ್ಧಾರವೊಂದರಲ್ಲಿ ಕೇರಳ ಸರ್ಕಾರ ರಾಜ್ಯದಲ್ಲಿ ಹೋಟೆಲ್, ರೆಸ್ಟೋರೆಂಟ್‍ಗಳ ಓಪನ್‍ಗೆ ಅನುಮತಿ ನೀಡುವುದರ ಜೊತೆಗೆ ಬಸ್‍ಗಳ ಓಡಾಟಕ್ಕೂ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಿದೆ. ಈ ಮೂಲಕ ನಾಳೆಯಿಂದ ಕೇರಳದ 14 ಜಿಲ್ಲೆಗಳಲ್ಲಿ ಜನ ಜೀವನ ಸಹಜ ಸ್ಥಿತಿಗೆ ಬರಲಿದೆ. 21 ದಿನಗಳ ಲಾಕ್‍ಡೌನ್ ಬಳಿಕ ವಿನಾಯ್ತಿ …
Read More »ರಾಜಮೌಳಿ ನಿರ್ದೇಶನದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ನಟನೆ
ಹೈದರಾಬಾದ್: ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡುವುದಾಗಿ ಖ್ಯಾತ ನಿರ್ದೇಶಕ ಎಸ್‍ಎಸ್ ರಾಜಮೌಳಿ ಹೇಳಿದ್ದಾರೆ. ಆ ಮೂಲಕ ಟಾಲಿವುಡ್‍ನಲ್ಲಿ ಬಹುದಿನಗಳಿಂದ ಕೇಳಿ ಬರುತ್ತಿದ್ದ ಕ್ರೇಜಿ ಕಾಂಬಿನೇಷನ್ ಸುದ್ದಿಗಳಿಗೆ ತೆರೆ ಹೇಳಿದಿದ್ದಾರೆ. ಸದ್ಯ ಎನ್‍ಟಿಆರ್, ರಾಮ್ ಚರಣ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಆರ್‌ಆರ್‌ಆರ್ ಸಿನಿಮಾದಲ್ಲಿ ರಾಜಮೌಳಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಎಂದು ಘೋಷಣೆ ಮಾಡುವ ಮೂಲಕ ಅಭಿಮಾನಿಗಳಲ್ಲಿ …
Read More »ದೇಶದಲ್ಲಿ 15 ಸಾವಿರ ದಾಟಿದ ಸೋಂಕಿತರ ಸಂಖ್ಯೆ- ಅಮೆರಿಕದಲ್ಲಿ ಒಂದೇ ದಿನ 4,600 ಸಾವು
ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನ 1,300ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15,232ಕ್ಕೆ ತಲುಪಿದೆ. ಈ ಪೈಕಿ ತಬ್ಲೀಘಿಗಳ ಪಾಲು 4,200ಕ್ಕೂ ಹೆಚ್ಚು. ಅಂದರೆ ಪ್ರತಿ ಮೂವರು ಸೋಂಕಿತರಲ್ಲಿ ಒಬ್ಬರು ತಬ್ಲಿಘಿಗಳು. ಕಳೆದ 24 ಗಂಟೆಗಳಲ್ಲಿ 43 ಮಂದಿ ಸಾವನ್ನಪ್ಪಿದ್ದು, ಒಟ್ಟು 505 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3,648 ದಾಟಿದ್ದು, ಇಂದು 328 ಹೊಸ ಪ್ರಕರಣಗಳು ಪತ್ತೆಯಾಗಿವೆ. ಗುಜರಾತ್‍ನಲ್ಲಿ ಒಂದೇ ದಿನ …
Read More »ಮಗನಿಗೆ ಕೊರೊನಾ ಸೋಂಕು- ಹೃದಯಾಘಾತದಿಂದ ತಾಯಿ ಸಾವು…….
ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕಿರುವ ವಿಷಯ ತಿಳಿಯುತ್ತಿದ್ದಂತೆ ರೋಗಿ ನಂ.381 ಅವರ 70 ವರ್ಷದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಂಯ ಜಮಖಂಡಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ನಿವಾಸಿಯಾಗಿರುವ ಸೋಂಕಿತ ತಾಯಿ, ಹೃದಯಸಂಬಂಧಿ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇತ್ತೀಚೆಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ಕುಟುಂಬದ ಜೊತೆಗಿದ್ದರು. ಇಂದು ಮಗನಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು. ಇದರಿಂದ ಶಾಕ್‍ಗೆ …
Read More »ದಿಯಾ ಸಿನಿಮಾ ಮೆಚ್ಚಿದ ಸಮಂತಾ, ತೆಲುಗಿಗೆ ರಿಮೇಕ್ ಮಾಡಲು ಚಿಂತನೆ….
ಹೈದರಾಬಾದ್: ಟಾಲಿವುಡ್ ಕ್ಯೂಟ್ ಬೆಡಗಿ ಸಮಂತಾ ಅಕ್ಕಿನೇನಿ ರಿಮೇಕ್ ಸಿನಿಮಾಗಳತ್ತ ಹೆಚ್ಚು ಒಲವು ತೋರುತ್ತಿದ್ದು, ಕೆಲ ರಿಮೇಕ್ ಸಿನಿಮಾಗಳೂ ಅವರಿಗೆ ಯಶಸ್ಸು ಹಾಗೂ ಹೆಸರನ್ನು ತಂದುಕೊಟ್ಟಿವೆ. ಅದೇ ರೀತಿ ಇದೀಗ ಕನ್ನಡದ ಸಿನಿಮಾವೊಂದರ ಮೇಲೆ ಸಮಂತಾ ಕಣ್ಣು ಹಾಕಿದ್ದಾರೆ. ಕೇವಲ ನಟಿಸುವುದು ಮಾತ್ರವಲ್ಲ, ಅವರೇ ನಿರ್ಮಿಸುವುದಕ್ಕೂ ಮುಂದಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಇತ್ತೀಚೆಗೆ ಸಮಂತಾ ಕನ್ನಡದ ಈ ಸಿನಿಮಾ ನೋಡಿದ್ದು, ತುಂಬಾ ಇಷ್ಟವಾಗಿದೆಯಂತೆ. ಹೀಗಾಗಿ ಈ ಸಿನಿಮಾವನ್ನು ತೆಲುಗಿನಲ್ಲಿ …
Read More »ಸರ್ಕಾರದ ಮುಂದಿನ ಆದೇಶದವರೆಗೂ ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡುವಂತಿಲ್ಲ
ಬೆಂಗಳೂರು,ಏ.18- ಖಾಸಗಿ ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಿ ಮಾಡುವುದನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. 2019-20ನೇ ಸಾಲಿನಲ್ಲಿ ವ್ಯಾಸಂಗ ಮಾಡಿ ತೇರ್ಗಡೆಗೊಂಡು ಅದೇ ಶಾಲೆಯಲ್ಲಿ ಮುಂದಿನ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳಿಂದ ಖಾಸಗಿ ಶಾಲೆಗಳು ಆನ್‍ಲೈನ್ ಮೂಲಕ ಬೋಧನಾ ಶುಲ್ಕ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು ಮುಂದಿನ ಆದೇಶದವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಖಾಸಗಿ ಶಾಲೆಗಳವರು ಆನ್‍ಲೈನ್ ಮೂಲಕ …
Read More »ಕೂಲಿ ಕಾರ್ಮಿಕರ ಮಗಳ ಹುಟ್ಟುಹಬ್ಬ ಆಚರಿಸಿದ ಪೊಲೀಸ್……..
ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಏಕಾಏಕಿ ಲಾಕ್‍ಡೌನ್ ಜಾರಿಗೆ ಬಂದಿದೆ. ಇಂತಹ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಂದ ಅನೇಕ ಹೃದಯ ಸ್ಪರ್ಶಿಸು ಪ್ರಸಂಗಗಳು ನಡೆದಿವೆ. ಅಂತೆ ಪೊಲೀಸರ ಪುಟ್ಟ ಸಹಾಯದಿಂದ ಶನಿವಾರ ಕೂಲಿ ಕಾರ್ಮಿಕರ ನಾಲ್ಕು ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಆಚರಿಸಿಕೊಳ್ಳಲು ಸಾಧ್ಯವಾಯಿತು. ಫತೇಪುರಿ ಬೇರಿಯ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು …
Read More »BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,
ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ. ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ …
Read More »ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು
ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ. ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ …
Read More »ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್
ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …
Read More »