ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …
Read More »ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ
ಮುಂಬೈ: ದೇಶ ಸಂಕಷ್ಟಕ್ಕೆ ಸಿಲುಕಿರುವ ಈ ಸಮಯದಲ್ಲಿ ವಿರೋಧ ಪಕ್ಷ ಹೇಗೆ ವರ್ತಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ರಾಹುಲ್ ನಡೆಯನ್ನು ಶಿವಸೇನೆ ಮೆಚ್ಚಿಕೊಂಡಿದೆ. ಈ ವಿಚಾರವಾಗಿ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಅವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಮತ್ತು ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. …
Read More »ಅಕ್ಷಯ ಪಾತ್ರೆ ಮೂಲಕ ನಟಿ ರವೀನಾ ಟಂಡನ್ ಸಹಾಯ
ನವದೆಹಲಿ: ಕೆಜಿಎಫ್-2 ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ರವೀನಾ ಟಂಡನ್, ತಮ್ಮ ವಿವಿಧ ಕೆಲಸಗಳ ಮೂಲಕ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ಸಹಾಯ ಹಸ್ತ ಚಾಚಿದ್ದು, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಟಿ ರವೀನಾ ಟಂಡನ್ ಲಾಕ್‍ಡೌನ್ ದಿನಗಳನ್ನು ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿದ್ದು, ಮೊಮ್ಮಕ್ಕಳೊಂದಿಗೆ ಆಟವಾಡುವ ಮೂಲಕ ಕಾಲ ಕಳೆಯುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ. ರವೀನಾ ತಮ್ಮ ಚಟುವಟಿಕೆಗಳ ಕುರಿತು …
Read More »ಹುಬ್ಬಳ್ಳಿ:ಜಗದೀಶ್ ಶೆಟ್ಟರ್ ಪುತ್ರನಿಂದ ಆಹಾರ ಕಿಟ್ ವಿತರಣೆ……
ಹುಬ್ಬಳ್ಳಿ: ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ಸಚಿವ ಜಗದೀಶ್ ಶೆಟ್ಟರ್ ಅವರ ಮಗ ಸರ್ಕಾರದ ಆಹಾರ ಕಿಟ್ ವಿತರಣೆ ಮಾಡಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಹೌದು, ಯಾವುದೇ ಚುನಾಯಿತ ಪ್ರತಿನಿಧಿ ಅಲ್ಲದಿದ್ದರು ಕೂಡ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಕಾರ್ಮಿಕ ಇಲಾಖೆಯ ವತಿಯಿಂದ ವಿತರಿಸಲಾಗುತ್ತಿರುವ ಆಹಾರ ಕಿಟ್ ವಿತರಣೆ ಮಾಡಿ ಫೇಸ್‍ಬುಕ್ ಪೋಸ್ಟ್ ಹಾಕಿರುವುದು ಟೀಕೆಗೆ ಗುರಿಯಾಗಿದೆ. ಅಲ್ಲದೇ ಯಾವುದೇ ಚುನಾಯಿತ ವ್ಯಕ್ತಿ ಆಗಿಲ್ಲದಿದ್ದರು ಕೂಡ ತಂದೆಯ …
Read More »ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ಕೈಕೊಟ್ಟಿದೆ.ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ
ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …
Read More »ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ:ರಮೇಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೊನಾ ನಿಯಂತ್ರಣ ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ ಯಲ್ಲಿ ಮಾತನಾಡಿದರು. ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ …
Read More »ಕಳ್ಳಭಟ್ಟಿ ತಯಾರಿಕಾ ಅಡ್ಡೆ ಮೇಲೆ ದಾಳಿ, ಕಚ್ಚಾ ಸಾಮಗ್ರಿ ನಾಶ ಪಡಿಸಿದ ಪೊಲೀಸರು
ತಾಳಿಕೋಟೆ: ತಾಲ್ಲೂಕಿನ ಗಡಿ ಸೋಮನಾಳ ಗ್ರಾಮದ ತಾಂಡಾಕ್ಕೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಕಳ್ಳಬಟ್ಟಿ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್ ಐ ವಸಂತ ಬಂಡಗಾರ ಅವರ ನೇತೃತ್ವದಲ್ಲಿ ಶನಿವಾರ ಮದ್ಯಾಹ್ನ ದಾಳಿ ಮಾಡಿ ಜಮೀನಿನಲ್ಲಿ ಹೂತ್ತಿಟ್ಟ ಸುಮಾರು ೨೦೦ ಲೀಟರ್‌ಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶ ಪಡಿಸಿದ್ದಾರೆ. ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರ್ಕಾರವು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿದ್ದರಿಂದ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಕಳ್ಳಭಟ್ಟಿ ಸರಾಯಿ ತಯಾರಿಸಿ …
Read More »ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಮುಲ್ಲಾ ಓಣಿಯ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡ್ತಿದೆ. P-236 ರೋಗಿ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 63 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೋಗಿ ನಂಬರ್ P-236ನೇ ವ್ಯಕ್ತಿ ಜೊತೆ ದ್ವಿತೀಯ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಪ್ರಯೋಗಾಲಯದಿಂದ ಬಂದ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ. ಜಿಲ್ಲೆಯಲ್ಲಿ …
Read More »ದಿನದ 24 ಗಂಟೆಯೂ ಗಂಡನ ಕಾವಲು – ಮಂಗಳೂರು ವೃದ್ಧನ ಪತ್ನಿಯ ನೋವು ಕೇಳಿದ್ರೆ ಮನಕಲುಕುತ್ತೆ
ಮಂಗಳೂರು: ಸಾಮಾನ್ಯವಾಗಿ ಪತ್ನಿ, ಪತಿಯ ಯಶಸ್ಸು, ನೋವು, ಬೇಸರ ಮತ್ತು ಕಣ್ಣೀರಿನಲ್ಲಿಯೂ ಜೊತೆಯಲ್ಲಿಯೇ ಇರುತ್ತಾರೆ. ಪತಿಗೆ ಹುಷಾರಿಲ್ಲ ಎಂದರೆ ಒಂದು ಮಗುವನ್ನು ನೋಡಿಕೊಳ್ಳುವ ರೀತಿಯಲ್ಲಿ ಗಂಡನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಪತ್ನಿಯೊಬ್ಬರು ತಮ್ಮ ಪತಿಯನ್ನು ದಿನದ 24 ಗಂಟೆಗಳ ಕಾಲ ಕಾಯುತ್ತಾ ಅವರನ್ನು ಕಣ್ಣಿನ ರೆಪ್ಪೆ ತರ ನೋಡಿಕೊಳ್ಳುತ್ತಿದ್ದಾರೆ. ಆ ಪತ್ನಿಯ ಕಷ್ಟ, ನೋವು ನೋಡಿದರೆ ಪ್ರತಿಯೊಬ್ಬರ ಮನಕಲುಕುತ್ತದೆ. ಕಳೆದ ದಿನ ಮಂಗಳೂರಿನಲ್ಲಿ ಪೊಲೀಸರು ವೃದ್ಧರೊಬ್ಬರ ಬಳಿ …
Read More »ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..
ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಸಪ್ತಾಪುರ 8ನೇ ಕ್ರಾಸ್‍ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …
Read More »