ಮುಂಬೈ, ಏ.26- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ದಿನೇ ದಿನೇ ಶೋಚನೀಯವಾಗುತ್ತದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಂದೇ ದಿನ ಅವಧಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿ 5000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಾಧಿತರಾಗಿದ್ದಾರೆ. ಅಲ್ಲಿ ಪ್ರತಿದಿನ ಹೊಸ ಸೋಂಕು ಪ್ರಕರಣಗಳು ದೃಢಪಡುತ್ತಲೇ ಇವೆ. ಮಹಾರಾಷ್ಟ್ರದಲ್ಲಿ …
Read More »ಟಿಕ್‍ಟಾಕ್‍ನಲ್ಲಿ ನಾನು ನಿನ್ನನ್ನ ಬ್ಲಾಕ್ ಮಾಡ್ತೀನಿ: ಗೇಲ್…..
ನವದೆಹಲಿ: ನೀನು ತುಂಬ ಕಿರಿಕಿರಿ ಮಾಡುತ್ತೀಯಾ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಟೀಕಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಬೌಲರ್ ಆಗಿರುವ ಚಹಲ್ ಅವರು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಎಲ್ಲರನ್ನೂ ಕಾಲೆಳೆಯುವ ಕೆಲಸ ಮಾಡುತ್ತಾರೆ. ಹೀಗಾಗಿ ಗೇಲ್ ನೀನು ಸೋಶಿಯಲ್ ಮೀಡಿಯಾದಲ್ಲಿ ಕಿರಿಕಿರಿ ಮಾಡುತ್ತಿದ್ದೀಯ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ಚಹಲ್‍ಗೆ …
Read More »ಕಟಿಂಗ್ ಶಾಪ್‍ಗೆ ಹೋಗಿದ್ದ ಓರ್ವನಿಂದ 6 ಮಂದಿಗೆ ತಗುಲಿದ ಕೊರೊನಾ…….
ಭೋಪಾಲ್: ಕಟಿಂಗ್ ಮಾಡಿಸಿಕೊಂಡು ಬಂದಿದ್ದ ಓರ್ವ ಸೋಂಕಿತನಿಂದ ಈಗ ಆ ಕಟಿಂಗ್ ಶಾಪ್‍ಗೆ ಹೋಗಿದ್ದ 6 ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿದೆ. ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಬಾರ್ಗಾಂವ್ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂದೋರ್ ಹಾಸ್ಟೆಲ್‍ನಲ್ಲಿ ಇದ್ದ ಸೋಂಕಿತ ವ್ಯಕ್ತಿ ಕೆಲ ದಿನಗಳ ಹಿಂದೆ ಗ್ರಾಮಕ್ಕೆ ವಾಪಸ್ ಬಂದಿದ್ದನು. ಬಾರ್ಗಾಂವ್ ಗ್ರಾಮದಲ್ಲಿ ಕಟಿಂಗ್ ಶಾಪ್‍ಗೆ ಏಪ್ರಿಲ್ 5ರಂದು ಸೋಂಕಿತ ಭೇಟಿಕೊಟ್ಟಿದ್ದನು. ಇಲ್ಲಿ ಕ್ಷೌರಿಕನ ಬಳಿ ಕಟಿಂಗ್ ಹಾಗೂ ಶೇವಿಂಗ್ …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »ಇರ್ಫಾನ್ ಖಾನ್ ತಾಯಿ ನಿಧನ – ಅಂತಿಮ ದರ್ಶನವೂ ಇಲ್ಲ
ಜೈಪುರ್: ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ (95) ಶನಿವಾರ ನಿಧನರಾಗಿದ್ದಾರೆ. ಇರ್ಫಾನ್ ತಾಯಿ ಸಯೀದಾ ಬೇಗಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ಜೈಪುರದ ಬೆನಿವಾಲ್ ಕಾಂತ ಕೃಷ್ಣ ಕಾಲೋನಿಯಲ್ಲಿ ವಾಸವಾಗಿದ್ದರು. ಇರ್ಫಾನ್ ವಿದೇಶದಲ್ಲಿದ್ದಾರೆ. ಆದರೆ ಕೊರೊನಾ ಲಾಕ್‍ಡೌನ್ ಪರಿಣಾಮದಿಂದಾಗಿ ವಿಮಾನಯಾನ ಸಂಪೂರ್ಣವಾಗಿ ಸ್ಥಗಿತವಾಗಿದೆ. ಹೀಗಾಗಿ ಅವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಕೊನೆಯ ಬಾರಿಗೆ ತಾಯಿ ಅಂತಿಮ ದರ್ಶನವೂ …
Read More »ಒಂದೇ ದಿನ 18 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲೇ 11 ಜನರನ್ನು ವೈರಾಣು ಹೊಸಕಿ ಹಾಕಿದೆ.
ಮುಂಬೈ, ಏ.25- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರ ನಂಬರ್ ಒನ್ ಹಾಟ್‍ಸ್ಪಾಟ್ ರಾಜ್ಯ ಎನಿಸಿದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಮರಣ ಮೃದಂಗದ ಮಾರ್ದನಿ ಮುಂದುವರಿದಿದ್ದು, ಒಂದೇ ದಿನ 18 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲೇ 11 ಜನರನ್ನು ವೈರಾಣು ಹೊಸಕಿ ಹಾಕಿದೆ. ದೇಶದಲ್ಲಿ ಮಾರಕ ಕೋವಿಡ್-19 ಸೋಂಕಿನಿಂದ 24 ತಾಸುಗಳಲ್ಲಿ ಇಷ್ಟು ರೋಗಿಗಳು ಅಸುನೀಗಿರುವುದು ಇದೇ …
Read More »ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಹೃದಯಾಘಾತದಿಂದ ನಿಧನ ……..
ಬೆಂಗಳೂರು, ಏ. 25 : ಭಜರಂಗ ದಳದ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ, ವಾಗ್ಮಿ ಮಹೇಂದ್ರ ಕುಮಾರ್ (47)ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮಹೇಂದ್ರ ಕುಮಾರ್ ವಿಧಿವಶರಾಗಿದ್ದಾರೆ. ಭಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್, 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಬಳಿಕ ಅದೇ ಪ್ರಕರಣದಲ್ಲಿ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. 2008 ರ …
Read More »ಪ್ರಭಾಸ್ ಜೊತೆ ಮದ್ವೆ- ಮೌನ ಮುರಿದ ನಿಹಾರಿಕಾ……….
ಹೈದರಾಬಾದ್: ಬಾಹುಬಲಿ ಖ್ಯಾತಿಯ ಪ್ರಭಾಸ್ ಇತ್ತೀಚೆಗೆ ವಿವಾಹದ ವಿಚಾರವಾಗಿ ಸುದ್ದಿಯಾಗುತ್ತಿದ್ದು, ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಜೊತೆ ಸುತ್ತಾಡುವ ಮೂಲಕ ಇವರಿಬ್ಬರು ವಿವಾಹವಾಗಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ನಂತರ ಸ್ವತಃ ಅನುಷ್ಕಾ ಶೆಟ್ಟಿ ಅವರೇ ಈ ಕುರಿತು ಪ್ರತಿ ಪ್ರತಿಕ್ರಿಯಿಸಿ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಮೆಗಾ ಫ್ಯಾಮಿಲಿ ಜೊತೆಗೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಹೌದು ಅನುಷ್ಕಾ ಶೆಟ್ಟಿ ಬಳಿಕ ಇದೀಗ …
Read More »ಮಂಗಗಳಲ್ಲಿ ಕಾಣಿಸಿಕೊಂಡ ಕೆಮ್ಮು, ಸುಸ್ತು: ಗ್ರಾಮದಲ್ಲಿ ಆತಂಕ…….
ಕೋಲಾರ: ನಿತ್ಯ ತರ್ಲೆ ಮಾಡೋ ಕೋತಿಗಳು ಇದ್ದಕ್ಕಿದಂತೆ ಮಂಕಾಗಿವೆ. ಕಳೆದ ಕೆಲವು ದಿನಗಳಿಂದ ಈ ಕೋತಿಗಳ ಆರೋಗ್ಯದಲ್ಲಾದ ಏರು ಪೇರು ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಕೊರೊನಾ ಆತಂಕದ ನಡುವೆ ಕೋತಿಗಳು ಮಂಕಾಗಿರುವುದು ಜನರಲ್ಲಿ ಭಯ ಹುಟ್ಟಿಸಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕೋಡುಗುರ್ಕಿ ಗ್ರಾಮದಲ್ಲಿ ಮಂಗಗಳು ಈ ರೀತಿ ವರ್ತಿಸುತ್ತಿದ್ದು, ಕೆಲವು ನಿತ್ರಾಣವಾಗಿ ಮಲಗಿದರೆ, ಇನ್ನೂ ಕೆಲವು ಏಳಲು ಸಾಧ್ಯವಾಗದೇ ಅಸಹಾಯಕ ಸ್ಥಿತಿಯಲ್ಲಿ ನೋಡುತ್ತಿವೆ. ಇನ್ನೂ ಹಲವು ಕೋತಿಗಳು …
Read More »ಶುಕ್ರವಾರ ಪತ್ತೆಯಾದ ಎರಡು ಪ್ರಕರಣಗಳು ಬೆಂಗಳೂರು ದಕ್ಷಿಣದ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿವೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 19 ಮಂದಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಶುಕ್ರವಾರ ಪತ್ತೆಯಾದ ಎರಡು ಪ್ರಕರಣಗಳು ಬೆಂಗಳೂರು ದಕ್ಷಿಣದ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿವೆ. ರೋಗಿ ನಂಬರ್ 465 ಮತ್ತು 466 ಇಬ್ಬರು ಸೋಂಕಿತರಿಗೆ ಕೊರೊನಾ ಹೇಗೆ ತಗುಲಿದೆ ಎಂಬುವುದೇ ಗೊತ್ತಾಗುತ್ತಿಲ್ಲ. ರೋಗಿ ನಂಬರ್ 465: 45 ವರ್ಷದ ಹಂಪಿ ನಗರದ ನಿವಾಸಿಯಾಗಿರುವ ಮಹಿಳೆ ವಿದೇಶ ಪ್ರಯಾಣ ಬೆಳೆಸಿಲ್ಲ ಮತ್ತು ಯಾವ …
Read More »
Laxmi News 24×7