Breaking News

ರಾಷ್ಟ್ರೀಯ

ಕೊರೊನಾ ಹಾಟ್‌ಸ್ಪಾಟ್‌ಗಳ ಪಟ್ಟಿ ಬಿಡುಗಡೆ, ……

ನವದೆಹಲಿ : ದೇಶವನ್ನೇ ಆಲ್ಲೋಲ ಕಲ್ಲೋಲ ಮಾಡಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದ್ದು, ದೇಶದಲ್ಲಿ 170 ಜಿಲ್ಲೆಗಳು ಕೊರೊನಾ ವೈರಸ್ ಹಾಟ್‌ಸ್ಪಾಟ್‌ಗಳಾಗಿವೆ. ಇದರಲ್ಲಿ 207 ಜಿಲ್ಲೆಗಳು ಅಪಾಯದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅತಿ ಹೆಚ್ಚು ಕರೊನಾ ಬಾಧಿತವಾಗಿರುವ ರಾಷ್ಟ್ರದ 170 ಜಿಲ್ಲೆಗಳ ಪೈಕಿ ಕರ್ನಾಟಕದ 8 ಜಿಲ್ಲೆಗಳು ಕೂಡ ಸೇರಿವೆ. ಯಾವ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿ ಇದೆಯೋ ಅಂಥಹ ಜಿಲ್ಲೆಗಳನ್ನು …

Read More »

‘ಕೋವಿಡ್-19’ ಮಹಾಮಾರಿಯಿಂದ ಮತ್ತೋಂದು ವಿಪತ್ತೊಂದು ನಮ್ಮಗಾಗಿ ಕಾಯುತ್ತಿದೆ.!

ಖ್ಯಾತ ವೈರಾಣು ತಜ್ಞ ಹಾಗೂ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಮಾಜಿ ಪ್ರೊಫೆಸರ್ ಆಗಿರುವ ಡಾ.ಟಿ. ಜಾಕೋಬ್ ಜಾಕೋಬ್ ಅವರು The Lede ಗೆ ನೀಡಿರುವ ಸಂದರ್ಶನದಲ್ಲಿ ಕೊರೋನ ವೈರಸ್ ಪತ್ತೆಗಾಗಿ ಸಾಕಷ್ಟು ಪರೀಕ್ಷೆಗಳನ್ನು ಕೈಗೊಳ್ಳದಿರುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಮಹಾ ವಿಪತ್ತೊಂದು ದೇಶವನ್ನು ಅಪ್ಪಳಿಸಲು ಕಾಯುತ್ತಿದೆ ಮತ್ತು ಪಾಸಿಟಿವ್ ಪ್ರಕರಣಗಳ ಮಹಾಪೂರವೇ ಹರಿದು ಬರಲಿದೆ ಎಂದು ಅವರು ಎಚ್ಚರಿಕೆಯನ್ನೂ ನೀಡಿದ್ದಾರೆ. ಕೊರೋನ ವೈರಸ್ ಪಿಡುಗು …

Read More »

ಮೋದಿ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೆ ಇರುತ್ತೆ, ಇದರಲ್ಲಿ ಯಾವುದೇ ಸಂಕೋಚ ಇಲ್ಲ ” : ದೇವೇಗೌಡರು

ಬೆಂಗಳೂರು, -ನಮ್ಮ ರಾಜ್ಯದಲ್ಲಿ ಕೊರೋನಾದಿಂದ ಜನ ಸತ್ತಿದ್ದು, ಪ್ರಧಾನಿ‌ ನರೇಂದ್ರಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ತೀರ್ಪಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಕೋರೋನಾ ಹೊಡೆದೋಡಿಸಲು ಮಹಡಿಯ ಮೇಲೆ ನಿಂತು ಶಬ್ಧ ಮಾಡುವುದು. ಕತ್ತಲ್ಲಿನಿಂದ ಬೆಳಕಿನೆಡೆಗೆ ಎಂಬ ಸಂದೇಶದೊಂದಿಗೆ ದೀಪ …

Read More »

ಮುಂಬೈನಲ್ಲಿ ವಲಸೆ ಕಾರ್ಮಿಕರಿಗೆ ಲಾಠಿ ಏಟು……

ಮುಂಬೈ: ಮುಂಬೈನಲ್ಲಿ ವಲಸೆ ಕಾರ್ಮಿಕರ ಪರದಾಟ ಹೇಳತೀರದಾಗಿದ್ದು, ಪೊಲೀಸರ ಲಾಠಿ ಚಾರ್ಜ್ ನಿಂದಾಗಿ ದೊಡ್ಡ ಗದ್ದಲ ಉಂಟಾಗಿದೆ. ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದ್ದು, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಾಗ್ವಾದಕ್ಕೆ ಕಾರಣವಾಗಿದೆ. ಇಂದು ಲಾಕ್‍ಡೌನ್ ತೆರವಾಗಲಿದೆ ಎಂದು ಭಾವಿಸಿದ್ದ ಸ್ಲಂ ನಿವಾಸಿಗಳು, ತಮ್ಮ ಊರುಗಳಿಗೆ ಹಿಂದಿರುಗಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಅದೇ ರೀತಿ ಮುಂಬೈನ ಬಾಂದ್ರಾ ಪಶ್ಚಿಮ ರೈಲು …

Read More »

ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ

ಅಹ್ಮದಾಬಾದ್: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್‍ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ …

Read More »

ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ.

ಚಿಕ್ಕೋಡಿ/ಬೆಳಗಾವಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ. ಇನ್ನೂ ಕೆಲವರು ತಿಪ್ಪೆಗೆ ಸುರಿಯುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ತಾನು ಬೆಳೆದ ತರಕಾರಿಯನ್ನ ಕುರಿ ಮತ್ತು ಮೇಕೆಗಳಿಗೆ ಮೇವು ನೀಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಗುರುನಾಥ್ ಹುಕ್ಕೇರಿ ತನ್ನ ಎರಡು ಎಕರೆ ಜಮೀನಿನಲ್ಲಿ ಒಂದು ಎಕರೆಯಲ್ಲಿ ಎಲೆಕೋಸು, ಇನ್ನೊಂದು ಎಕರೆಯಲ್ಲಿ ಹೂಕೋಸು ಬೆಳೆಯನ್ನ ಬೆಳೆಸಿದ್ದರು. ಸುಮಾರು 2 …

Read More »

ಬೆಂಗ್ಳೂರಲ್ಲಿ 40 ಹಾಟ್‍ಸ್ಪಾಟ್ – ಯಾವ ವಾರ್ಡಿನಲ್ಲಿ ಎಷ್ಟು ಮಂದಿಗೆ ಸೋಂಕು?

ಬೆಂಗಳೂರು: ಸಿಲಿಕಾನ್ ಸಿಟಿ, ಗ್ರೀನ್‍ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ಈಗ ಕೊರೊನಾ ಹಾಟ್‍ಸ್ಪಾಟ್ ಆಗುತ್ತಿದೆ. ಬೆಂಗಳೂರಿನಲ್ಲಿ 2 ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೊತೆಗೆ, ಟಿಪ್ಪುನಗರ, ಆನಂದಪುರ ವಾರ್ಡ್‌ಗಳನ್ನು ಸೀಲ್‍ಡೌನ್ ಮಾಡಲಾಗಿದ್ದು, 40 ಹಾಟ್‍ಸ್ಪಾಟ್‍ಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಲಾಕ್‍ಡೌನ್ ಮಾಡಿ ಎಷ್ಟೇ ಮನವಿ ಮಾಡಿ, ಬುದ್ಧಿ ಹೇಳಿದರೂ ಜನರು ಕೇಳುತ್ತಿಲ್ಲ. ಸುಖಾಸುಮ್ಮನೇ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ಪರಿಣಾಮವೇ ರಾಜ್ಯದಲ್ಲಿನ ಕೊರೊನಾ ಲಿಸ್ಟ್ ನಲ್ಲಿ ಬೆಂಗಳೂರು …

Read More »

ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ

ನವದೆಹಲಿ: ಲಾಕ್‍ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್‍ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …

Read More »

ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?

ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್‍ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …

Read More »

5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ

ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್‍ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …

Read More »