Breaking News

ರಾಷ್ಟ್ರೀಯ

ಲಾಕ್‍ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ.: ಅಶ್ವತ್ಥನಾರಾಯಣ್

ಬೆಂಗಳೂರು, ಏ.17- ಲಾಕ್‍ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಐಟಿ, ಬಿಟಿ ಉದ್ದಿಮೆಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಯಥಾ ಪ್ರಕಾರ ಇರುತ್ತದೆ. ಇದು ಎಷ್ಟು ದಿನ ಅನ್ನೋದು ಗೊತ್ತಿಲ್ಲ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಕೆಲಸ ಕಾರ್ಯ ಆರಂಭಿಸಬೇಕಿದೆ ಎಂದು ಹೇಳಿದ್ದಾರೆ. ಐಟಿ ನೌಕರರ ಓಡಾಟಕ್ಕೆ ಪಾಸ್ ಅಗತ್ಯ ಉದ್ಭವ …

Read More »

ಬೆಂಗಳೂರಿಗರೇ ಹುಷಾರ್, ಹೊಸಬರಿಗೆ ಮನೆ ಬಾಡಿಗೆ ಕೊಡಬೇಡಿ..!

ಬೆಂಗಳೂರು,ಏ.17-ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಿರುವ ಬಿಬಿಎಂಪಿ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಮನೆ ಖಾಲಿ ಮಾಡಿಕೊಂಡು ಬೇರೆ ವಾರ್ಡ್‍ಗಳಿಗೆ ತೆರಳುತ್ತಿರುವುದು ಸಾಬೀತಾದ ನಂತರ ಬಿಬಿಎಂಪಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಹೊಸಬರು ಮನೆ ಕೇಳಿಕೊಂಡು ಬಂದರೆ ಬಾಡಿಗೆ ನೀಡಬೇಡಿ. ಒಂದು ವೇಳೆ ನಿಮ್ಮ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ …

Read More »

ಮೈಸೂರು:ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢ ಸ್ಟ್ರಿಕ್ಟ್ ರೂಲ್ಸ್ ಜಾರಿ

ಮೈಸೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೇರಿದೆ. ಹೀಗಾಗಿ ಇಂದಿನಿಂದ ಸ್ಟ್ರಿಕ್ಟ್ ರೂಲ್ಸ್ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಹಾಟ್‍ಸ್ಪಾಟ್‍ಗಳ ಪಟ್ಟಿಯಲ್ಲಿ ಮೈಸೂರು ಕೂಡ ಇದೆ. ಈಗಾಗಲೇ ನಂಜನಗೂಡಿನ ಔಷಧಿ ಕಂಪನಿ ನೌಕರನಿಂದಾಗಿ ಇಡೀ ಮೈಸೂರು ರೆಡ್‍ಝೋನ್‍ನಲ್ಲಿದೆ. 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಅನ್ನೋ ಸಮಾಧಾನ ಮೂಡಿದ ಬೆನ್ನಲ್ಲೇ …

Read More »

55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ

ಕೋಲಾರ: ಜಿಲ್ಲೆಯ ಮಾಲೂರಲ್ಲಿ 55 ಸಾವಿರ ಕುಟುಂಬಗಳಿಗೆ ದಿನಸಿ, ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಅಲ್ಲದೆ ರೈತರ ತೋಟಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿ, ಧೈರ್ಯ ತುಂಬಿದರು. ಸಂಕಷ್ಟದಲ್ಲಿರುವ ರೈತರ ತೋಟಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಕೇಳುವುದರ ಜೊತೆಗೆ ಅವರು ಬೆಳೆದಿರುವ ತರಕಾರಿ ಖರೀದಿ ಮಾಡಿ ಜನರಿಗೆ ಹಂಚಲು ಕಾಂಗ್ರೆಸ್ ಮುಂದಾಗಿದೆ. ಎಲೆಕೋಸು, ಕ್ಯಾರೆಟ್, ಟೊಮ್ಯಾಟೋ, ಕ್ಯಾಪ್ಸಿಕಂ ತೋಟಗಳಿಗೆ ಡಿಕೆಶಿ ಭೇಟಿ ನೀಡಿದರು. ಅಲ್ಲದೆ …

Read More »

ಕೊರೊನಾ ಪೋಸ್ಟ್‌ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್

ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‍ಬುಕ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್‌ಗಳು ಫೇಸ್‍ಬುಕ್, ವ್ಯಾಟ್ಸಪ್ ಇನ್‍ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ …

Read More »

ಅದ್ಧೂರಿ ಮದುವೆಗೂ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ,ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಸರಳವಾಗಿ ನಡೆಯುತ್ತಿದೆ

ರಾಮನಗರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಗೂ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಸರಳವಾಗಿ ನಡೆಯುತ್ತಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್‍ಡಿಕೆ ಫಾರ್ಮ್‍ಹೌಸ್‍ನಲ್ಲಿ ವಿವಾಹ ನಡೆಯುತ್ತಿದ್ದು, ಪೂರ್ವ ನಿಗದಿಯಾಗಿದ್ದ ದಿನಾಂಕದಂದೇ ಮದುವೆ ನಡೆಯುತ್ತಿದೆ. ಎರಡು ಕುಟುಂಬದವರು ಹಾಗೂ ಕೆಲವು ಆಪ್ತರ ಸಮ್ಮುಖದಲ್ಲಿ ವಿವಾಹ ನಡೆಯಲಿದ್ದು, ನಿಖಿಲ್ ಮತ್ತು ರೇವತಿ ವಿವಾಹ ಬೆಳಗ್ಗೆ 9.30ರಿಂದ …

Read More »

ಬದಾಮಿ:ಪೊಲೀಸ್ ರ ಮೇಲೆ ಹಲ್ಲೆ ಮಾಡಿದ 5ಜನರ್ ಮೇಲೆ F.I.R.

 ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ‌. . ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು …

Read More »

ಆಸ್ಪತ್ರೆಯಲ್ಲಿ ಶವಗಳ ರಾಶಿ, ವಿಧಿಯಾಟ ಇದೇ ಅಲ್ಲವೇ..? ವಿಶ್ವದ ದೊಡ್ಡಣ್ಣನಿಗೆ ಕೊರೊನಾ ವಕ್ಕಿರಿಸಿ ತಲೆತಿರುಗಿಸಿದೆ

ನ್ಯೂಯಾರ್ಕ್,- ಸಾವು ಹೇಗೆ ಬರುತ್ತದೋ ಗೊತ್ತಾಗದೇ ಇಲ್ಲ. ಆದರೆ ಶವ ಸಂಸ್ಕಾರ ಮಾಡಲು ಆಗದಂತಹ ದಿನಗಳೂ ಬರುತ್ತದೆ ಎಂಬುದನ್ನು ಕೊರೊನಾ ತೋರಿಸುತ್ತಿದೆ. ಶ್ರೀಮಂತ-ಬಡವ ಎಂಬುದಿಲ್ಲ ಎಂಬುದಕ್ಕೆ ಉದಾಹರಣೆ ನ್ಯೂಯಾರ್ಕ್‍ನಲ್ಲಿ ವರದಿಯಾಗಿದೆ. ವಿಶ್ವದ ಶ್ರೀಮಂತ, ಶಕ್ತಿಯುತ ರಾಷ್ಟ್ರವಾಗಿರುವ ಅಮೆರಿಕ ಕೊರೊನಾ ಹೊಡೆತಕ್ಕೆ ತತ್ತರಿಸಿದೆ. ದಿನೇ ದಿನೇ ಸಾವಿನ ಸಂಖ್ಯೆ ಏರುತ್ತಿದೆ. ಸೋಂಕಿತರು ಲಕ್ಷಗಟ್ಟಲೇ ಏರುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆನಗರ ನ್ಯೂಜರ್ಸಿ ರಾಜ್ಯದ ಸಣ್ಣನಗರ ಸೂಸೆಕ್ಸ್ ಎಂಬಲ್ಲಿ ಆಸ್ಪತ್ರೆಯೇ ಶವಾಗಾರವಾಗಿದೆ…! ಇದನ್ನು ಊಹಿಸಿದರೆ …

Read More »

ಎಸ್.ಎಸ್.ಎಲ್.ಸಿ ವೇಳಾಪಟ್ಟಿ ಪ್ರಕಟಿಸಿಲ್ಲ : ಸಚಿವ ಸುರೇಶ್‌ಕುಮಾರ್ ಸ್ಪಷ್ಟನೆ

ಬೆಂಗಳೂರು : ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ. ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು …

Read More »

ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನಕ್ಕಾಗಿ ನೀರಾವರಿ ಆಯೋಗ ಸ್ಥಾಪನೆ

ಬೆಂಗಳೂರು : ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ‌ ಮಾತನಾಡಿದ ಸಚಿವರು, ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ …

Read More »