Breaking News

ರಾಷ್ಟ್ರೀಯ

ಯಾವೆಲ್ಲ ಸಾಲಕ್ಕೆ ಬ್ಯಾಂಕ್‍ಗಳಿಂದ ವಿನಾಯಿತಿ? ಇಎಂಐ ಮೇಲೆ ಬಡ್ಡಿ ಇರುತ್ತಾ?

ನವದೆಹಲಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೂರು ತಿಂಗಳ ಮಟ್ಟಿಗೆ ಸಾಲದ ಕಂತು ಪಾವತಿಸುವುದಿಂದ ವಿನಾಯಿತಿ ಘೋಷಿಸಿ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಅಧಿಕೃತ ಘೋಷಣೆ ಮಾಡಿವೆ. ಎಸ್‍ಬಿಐ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಯುಕೋ ಬ್ಯಾಂಕ್ ಸೇರಿ 16 ಬ್ಯಾಂಕ್‍ಗಳು ಮೇ 31ರವರೆಗೆ ಸಾಲಗಳ ಮೇಲಿನ ತಿಂಗಳ ಕಂತು ಪಾವತಿಯಿಂದ ವಿನಾಯಿತಿ ಘೋಷಿಸಿವೆ. ಈ ಮೂಲಕ ಶುಕ್ರವಾರವಷ್ಟೇ ಆರ್‌ಬಿಐ ನೀಡಿದ್ದ ಆದೇಶಗಳನ್ನು ಜಾರಿಗೊಳಿಸಿವೆ. …

Read More »

ಮಾಸ್ಕ್ ಯಾರು ಧರಿಸಬೇಕು? ಎಲ್ಲರಿಗೂ ಕಡ್ಡಾಯವಲ್ಲ – ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಈಗ ರಸ್ತೆಗೆ ಇಳಿಯುವ ಮುನ್ನ ಮಾಸ್ಕ್ ಧರಿಸಿರಬೇಕೆಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಕೆಲವು ಸೂಪರ್ ಮಾರ್ಕೆಟ್‍ಗಳಲ್ಲಿ, ದಿನಸಿ ಅಂಗಡಿಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಬಿಡುಗಡೆ ಮಾಡಿ ಯಾರು ಧರಿಸಬೇಕು? ಯಾರು ಮಾಸ್ಕ್ ಧರಿಸಬಾರದು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೇ …

Read More »

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ಡಿಸಿಎಂ …

Read More »

ಬೆಂಗಳೂರು:ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಟ “….

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಡುತ್ತಿರುವ ಘಟನೆ ಬೆಂಗಳೂರು ಹೊರ ವಲಯದ ನೆಲಮಂಗಲದ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಸುಮಾರು ಮೂರು ದಿನಗಳಿಂದ ಊಟ ಸಿಗದೆ ಹಕ್ಕಿಪಿಕ್ಕಿಯ ಜನ ನರಳಾಡುತ್ತಿದ್ದು, ತಾಲೂಕು ಆಡಳಿತ ಇತ್ತ ಗಮನಹರಿಸಿಲ್ಲ. ಕೊರೊನಾ ಭೀತಿಯಿಂದ ದೇಶವನ್ನೇ ಲಾಕ್‍ಡೌನ್ ಮಾಡಿರುವ ಹಿನ್ನಲೆ ದವಸ ಧಾನ್ಯ ಸಿಗದೆ ಜನ ಪರದಾಡುತ್ತಿದ್ದಾರೆ. ಮೂರು ದಿನಗಳಿಂದ ಊಟವಿಲ್ಲದೆ ಹಕ್ಕಿಪಿಕ್ಕಿ ಜನಾಂಗದವರುಪರಿತಪಿಸುತ್ತಿದ್ದರೂ ಈ ಕುಟುಂಬಗಳಿಗೆ …

Read More »

ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮೂವರು …

Read More »

ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ

ಹಾವೇರಿ: ಕೊರೊನ್ ಸಂಬಂಧ ಕಫ್ರ್ಯೂ ಹೆರಿದ್ದರು, ಕೆಲವು ಪುಂಡರು,ಪೊಕರಿಗಳು ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ ಎಂದು ಶಾಸಕ ನೆಹರು ಓಲೇಕಾರ ಸೂಚನೆ ನೀಡಿದರು. ಸೋಮವಾರ ನಗರಸಭೆ ಕಚೇರಿಯಲ್ಲಿ ನಡೆದ ಕೊರೊನ್ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸರು ನಗರದಲ್ಲಿ ಸಂಚರಿಸುವ ಜನರ ಮೇಲೆ ಅನಗತ್ಯವಾಗಿ ಲಾಠಿ ಪ್ರಯೋಗಿಸಬೇಡಿ. ಜನರು ಸುಮ್ಮನೇ ಮನೆಯಿಂದ ಆಚೆ …

Read More »

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ:ರಮೇಶ ಜಾರಕಿಹೊಳಿ ಮನವಿ

ಗೋಕಾಕ್: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಣ ಮಾಡಬೇಕಿದೆ. ನಾವು ಯಾರು ರಾಜಕೀಯ ಮಾಡುವುದು ಬೇಡ. ಸಮಾಜ ರಕ್ಷಿಸುವ ಸಮಯವಾಗಿದೆ. ಆದ ಕಾರಣ ಮನೆಯಿಂದ ಯಾರು ಹೊರ ಬರದಿರಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಗತ್ತಿನಾದ್ಯಂತ ಕೊರೊನಾ ಸೋಂಕು ಹರಡಿದ್ದು,ಎಲ್ಲರನ್ನು ತಲ್ಲಣಗೊಳಿಸಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏಪ್ರೀಲ್ 14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆದ ಕಾರಣ ಜನರು ಮನೆಯಿಂದ ಹೊರಗೆ …

Read More »

ಮನೆ ಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಿ – ಸರ್ಕಾರದಿಂದ ಸೂಚನೆ

ಬೆಂಗಳೂರು: ಹಣ್ಣು, ತರಕಾರಿ ಸರಬರಾಜಿನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ರೈತರಿಂದ ನೇರವಾಗಿ ರೈತರ ಉತ್ಪನ್ನಗಳನ್ನು ಆಯ್ದ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಹಾಪ್ ಕಾಮ್ಸ್ ಸಹಯೋಗದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮೊಬೈಲ್ ವ್ಯಾನ್‍ಗಳ ಮೂಲಕ ಮನೆಮನೆಗೆ ಹಣ್ಣು, ತರಕಾರಿ ಮಾರಾಟ …

Read More »

ಭಾರತದಲ್ಲಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..! ಮಹಾಮಾರಿಗೆ 34 ಮಂದಿ ಬಲಿ..!

ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ …

Read More »

ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ ವೆಂಟಿಲೇಟರ್‌ಗಳ ಸಮಸ್ಯೆ..!

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಚಿಕಿತ್ಸೆ ನೀಡಬೇಕಾದರೆ, ವೆಂಟಿಲೇಟರ್‌ಗಳ ಅಗತ್ಯವಿದೆ. ಆದರೆ, ಸದ್ಯ ವೆಂಟಿಲೇಟರ್‌ಗಳ ಸಂಖ್ಯೆ ಕಡಿಮೆ ಇರುವುದು ಇರುವುದು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ದೇಶದಲ್ಲಿರುವ ಎಲ್ಲಾ ಆಟೋ ಮೇಕರ್ಸ್​ ಕಂಪನಿಗಳಿಗೆ ಕೊರೊನಾ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ವೆಂಟಿಲೇಟರ್​ಗಳ ತಯಾರಿಕೆಗೆ ಮುಂದಾಗುವಂತೆ ಕೇಳಿಕೊಂಡಿದೆ. ಈಗಾಗಲೇ ಆನಂದ್ ಮಹಿಂದ್ರಾ ಮಾಲೀಕತ್ವದ ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ಬೆಂಗಳೂರು ಮೂಲದ ವೆಂಟಿಲೇಟರ್ ರಫ್ತು ಮಾಡುವ …

Read More »