Breaking News

ರಾಷ್ಟ್ರೀಯ

ಕೊರೊನಾಗೆ ಹೆದರಿದ ಕೈದಿಗಳು – ತಪಾಸಣೆ ಮಾಡುವಂತೆ ಆಗ್ರಹಿಸಿ ಉಪವಾಸ

ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೇ ಭಯಪಡಿಸಿದೆ. ಇದೀಗ ಜೈಲಿನಲ್ಲಿರುವ ಕೈದಿಗಳು ಕೂಡ ತಮಗೆಲ್ಲಿ ಕೊರೊನಾ ಬರುತ್ತೋ ಅಂತ ಹೆದರಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಪ್ರತಿದಿನ ಬರುವ ವಿಚಾರಾಣಾಧೀನ ಕೈದಿಗಳನ್ನು ತಪಾಸಣೆ ಮಾಡಿ ನಂತರ ಕಾರಾಗೃಹಕ್ಕೆ ಎಂಟ್ರಿ ನೀಡಬೇಕು. ಅಲ್ಲದೇ ಬ್ಯಾರಕ್‍ಗಳಲ್ಲಿ ಮಿತಿಗಿಂತ ಹೆಚ್ಚಿರುವ ಕೈದಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಉಪವಾಸ ಸತ್ಯಾಗ್ರಹ ಮಾಡಿ ಪ್ರತಿಭಟಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ …

Read More »

2 ವರ್ಷದ ಮಗು ಸೇರಿ ಒಂದೇ ಕುಟುಂಬದ 25 ಮಂದಿಗೆ ಕೊರೊನಾ

ಮುಂಬೈ: 2 ವರ್ಷದ ಗಂಡು ಮಗು ಸೇರಿ ಒಂದೇ ಕುಟುಂಬದ 25 ಜನರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಈ ಕುಟುಂಬದ ನಾಲ್ಕು ಜನರು ಸೌದಿ ಅರೇಬಿಯಾದ ಹಜ್ ಯಾತ್ರೆಗೆ ಹೋಗಿ ವಾಪಸ್ ಆಗಿದ್ದರು. ಈ ನಾಲ್ವರಿಗೆ ಮಾರ್ಚ್ 19ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ಆಗ ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ನಾಲ್ವರನ್ನು ಮಾರ್ಚ್ 19ರಂದು …

Read More »

ಹೋಮ್ ಕ್ವಾರಂಟೈನ್‍ನಲ್ಲಿರೋರು ಫೋಟೋ ಕಳಿಸಿಲ್ಲ ಅಂದ್ರೆ ಮನೆಗೆ ಬರ್ತಾರೆ ಅಧಿಕಾರಿಗಳು

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಸರ್ಕಾರ ಏನೇ ಕಠಿಣ ಕ್ರಮ ತೆಗೆದುಕೊಂಡು ಜನರು ಮನೆಯಿಂದ ಹೊರ ಬಂದು ಓಡಾಡುತ್ತಿದ್ದಾರೆ. ಆದ್ದರಿಂದ ಕೊರೊನಾ ಹಬ್ಬುವಿಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೋಮ್ ಕ್ವಾರಂಟೈನ್‍ನಲ್ಲಿರುವವರ ಮೇಲೆ ನಿಗಾ ಬಿಗಿಗೊಳಿಸಿದೆ. ಈಗಾಗಲೇ ಕ್ವಾರಂಟೈನ್‍ನಲ್ಲಿರುವವರು ಕೊರೊನಾ ವಾಚ್ ಮೊಬೈಲ್ ಆಪ್ ಡೌನ್‍ಲೋಡ್ ಮಾಡಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಇದೀಗ ಪ್ರತಿ ಗಂಟೆಗೆ ಒಮ್ಮೆ ತಮ್ಮ ಫೋಟೋಗಳನ್ನು ಈ ಆಪ್‍ನಲ್ಲಿ ಅಪ್ಲೋಡ್ ಮಾಡುವಂತೆ ಸರ್ಕಾರ …

Read More »

92 ಹೊಸ ಕೊರೊನಾ ಪ್ರಕರಣ, ಭಾರತದಲ್ಲಿ 1071ಕ್ಕೆ ಏರಿಕೆ

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 92 ಪ್ರಕರಣಗಳು ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 1071ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಅಗರ್‍ವಾಲ್ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿಯವರೆಗೆ ಕೊರೊನಾ ಸ್ಥಳೀಯವಾಗಿ ಹರಡುತ್ತಿದೆಯೇ ಹೊರತು ಸಮುದಾಯಕ್ಕೆ ಬಂದಿಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿ ಇಂದು 5 ಪ್ರಕರಣ ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ …

Read More »

ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಕುರಿ ಮೇಯಿಸಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. “ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು …

Read More »

ಲಾಕ್‍ಡೌನ್ ನಿರ್ಧಾರದಿಂದ ಕೊರೊನಾ ನಿಯಂತ್ರಣವಾಗುತ್ತಾ? ಗ್ರಾಫ್ ಏನು ಹೇಳುತ್ತೆ?

ಬೆಂಗಳೂರು: 21 ದಿನಗಳ ಲಾಕ್‍ಡೌನ್ ನಿಂದ ಕೊರೊನಾ ನಿಯಂತ್ರಿಸಬಹುದೇ? ಕೊರೊನಾ ನಿಯಂತ್ರಣವಾಗದೇ ಇದ್ದರೆ ಮತ್ತೆ ಲಾಕ್‍ಡೌನ್ ಇರುತ್ತಾ ಈ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಣ್ಣ ಶುಭ ಸುದ್ದಿ ಸಿಕ್ಕಿದೆ. ಎರಡು ದಿನಗಳಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗಿದೆ. ಸಾಧಾರಣವಾಗಿ ಕೊರೊನಾ ಕಂಡು ಬಂದ ಮೊದಲ ಎರಡು ವಾರದಲ್ಲಿ ಹರಡುವ ತೀವ್ರತೆ ಕಡಿಮೆ ಇರುತ್ತದೆ. ಮೂರು, ನಾಲ್ಕು ವಾರದಲ್ಲಿ ಸಂಖ್ಯೆ ದುಪ್ಪಟ್ಟು ಆಗುತ್ತದೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಏರುತ್ತಲೇ ಹೋಗುತ್ತದೆ. ಶುಭ …

Read More »

ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ

ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ

Read More »

ಬೆಂಗಳೂರು: ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು.: ಬಸವರಾಜ್ ಬೊಮ್ಮಾಯಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು. ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು. ಯಾವುದೇ …

Read More »

ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಗೆ ಸುಳ್ಳು ಸುದ್ದಿ ಎಂದ ಕೇಂದ್ರ : ರಾಜೀವ್ ಗೌಬಾ ಸ್ಪಷ್ಟನೆ

ನವದೆಹಲಿ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ 21 ದಿನಗಳ ಕಾಲ ಅಂದರೆ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ನಡುವೆ ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಾಜೀವ್ ಗೌಬಾ, ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹಾಗೆಯೇ …

Read More »

ಮೆಡಿಕಲ್ ಶಾಪ್‌ ಮತ್ತು ಖಾಸಗಿ ಕ್ಲಿನಿಕ್ ಮುಚ್ಚಿದರೆ ಪರವಾನಿಗೆ ರದ್ದು : ಬಿ.ಸಿ.ಪಾಟೀಲ್

ಹಾವೇರಿ, ಮಾ‌. 30:ಕೊರೊನಾ‌ದಂತಹ ಮಾರಕ‌ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಡೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಸರ್ಕಾರದ ನೊಟೀಸ್‌ಗೂ ಬೆಲೆಕೊಡದೇ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಿಗೆ ರದ್ದುಪಡಿಸಲಾಗುವುದು.ಸೋಮವಾರ ಜಿಲ್ಲೆಯ ಹಿರೇಕೆರೂರು ನಗರ,‌ ರಾಣೆಬೆನ್ನೂರು, …

Read More »