ಬೆಂಗಳೂರು: ಸಿನಿಮಾ ತಾರೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಗೊಳಿಸುವುದನ್ನು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಇದಕ್ಕಾಗಿ ಹಲವು ನಟಿಯರು ಮುಜುಗರಕ್ಕೆ ಈಡಾಗಿರುವುದೂ ಉಂಟು. ಇದೀಗ ನಟ ಸಾರ್ವಭೌಮ ಬೆಡಗಿ ಸಹ ಇಂತಹದ್ದೇ ಕಷ್ಟಕ್ಕೆ ಸಿಲುಕಿಕೊಂಡಿದ್ದು, ಬೇರೆ ಯುವತಿಯ ದೇಹಕ್ಕೆ ಅನುಪಮಾ ಪರಮೇಶ್ವರನ್ ಮುಖವನ್ನು ಜೋಡಿಸಲಾಗಿದೆ ಇದನ್ನು ಕಂಡ ಅವರು ಆಶ್ಚರ್ಯಕ್ಕೊಳಗಾಗಿದ್ದಾರೆ. ಇಂಟರ್ನೆಟ್ ಜಾಲಾಡಿದರೆ ನೈಜ ಫೋಟೋಗಳಿಗಿಂತ ಫೇಕ್, ಎಡಿಟೆಡ್, ಮಾರ್ಫ್ ಮಾಡಿದ ಫೋಟೋಗಳು ಕಾಣುವುದೇ ಹೆಚ್ಚು. ಅದರಲ್ಲೂ ನಟ, ನಟಿಯರ ಫೋಟೋಗಳನ್ನು …
Read More »ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …
Read More »ಇನ್ಫೋಸಿಸ್ ಫೌಂಡೇಶನ್‍ನಿಂದ 220ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರದ ಕಿಟ್
ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಭಾನುವಾರ 220ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್‍ಸಿಎಫ್‍ಸಿ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220ಕ್ಕೂ ಹೆಚ್ಚು ಕಾರ್ಮಿಕರು, ಲಾರಿ ಚಾಲಕರು, ಕ್ಲೀನರ್‌ಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಇಸ್ಕಾನ್‍ನ ಸಾಯಿನಾಥ್ ವಿತರಿಸಿದರು ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಪ್ರತಿ ಕಿಟ್‍ನಲ್ಲಿ 5 ಕೆ.ಜಿ. ಅಕ್ಕಿ, …
Read More »ರಾಯಬಾಗದ ಕ್ಯಾನ್ಸರ್ ಪೀಡಿತ ಮಹಿಳೆ ಸಮಸ್ಯೆಗೆ ತುರ್ತು ಸ್ಪಂದನೆ: ಬಿ.ಎಸ್.ಯಡಿಯೂರಪ್
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕ್ಯಾನ್ಸರ್ ರೋಗಿಯೊಬ್ಬರಿಗೆ ವ್ಯವಸ್ಥೆಯಾಗಿದ್ದ ಆಪರೇಶನ್ ರದ್ದಾಗಿತ್ತು. ಈ ಕುರಿತು ರೋಗಿಯ ಸಂಬಂಧಿಯೊಬ್ಬರಿಂದ ಬಂದ ಮಾಹಿತಿ ಆಧರಿಸಿ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸೋಮವಾರವೇ ಆಪರೇಶನ್ ಗೆ ವ್ಯವಸ್ಥೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಶಿರಗೂರ ಗ್ರಾಮದ ಬಾಹುಸಾಬ ಲಕ್ಷ್ಮಣ್ ಕಾಂಬಳೆ ಎನ್ನುವವರು ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದರು. “ನಮ್ಮ ಮನೆಯ ಹಿರಿಯ ಮಹಿಳೆ ಕಮಲವ್ವ ಹಿಡಕಲ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. …
Read More »ಲಾಕ್‍ಡೌನ್ ಎಫೆಕ್ಟ್: ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ಪೋಷಕರ ಪರದಾಟ
ಚಾಮರಾಜನಗರ: ಲಾಕ್‍ಡೌನ್ ಪರಿಣಾಮ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗದೆ ಹೆತ್ತವರು ಸಂಕಟ ಪಡುತ್ತಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆದಿದೆ. ಕೂಲಿಗಾಗಿ ಬಂದ ಧಾರವಾಡ ಮೂಲದ 14 ವಲಸೆ ಕಾರ್ಮಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರ ಕಷ್ಟ ಹೇಳತೀರದಾಗಿದೆ. ಈ ಪೈಕಿ ಗುರುನಾಥ್ ಮತ್ತು ತುಳಸಮ್ಮನ ಅವರ ಚಿಕ್ಕ ಮಗುವಿನ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಹೆತ್ತವರು ಒದ್ದಾಡುತ್ತಿದ್ದಾರೆ. ಗುರುನಾಥ್ ದಂಪತಿ ಧಾರವಾಡ ಜಿಲ್ಲೆ ಕುಂಬಾರಕೊಪ್ಪ ಗ್ರಾಮದವರಾಗಿದ್ದು, ಕೊಳ್ಳೇಗಾಲದ ಚೆಸ್ಕಾಂ ಕಟ್ಟಡ ನಿರ್ಮಾಣಕ್ಕೆ ಬಂದಿದ್ದಾರೆ. …
Read More »ಲಾಕ್‍ಡೌನ್ ನಡುವೆ ಮದ್ಯ ಮಾರಾಟಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಮೂವರು…….
ರಾಮನಗರ: ಹೆಮ್ಮಾರಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ರಾಮನಗರ ಜಿಲ್ಲೆಯಾದ್ಯಂತ ಕಾಳಸಂತೆಯಲ್ಲಿ ಮಾರಾಟ ಹಾಗೂ ದಾಸ್ತಾನು ಮಾಡಿಕೊಂಡಿದ್ದ ಮೂರು ಕಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲೂ ರಾಮನಗರ ತಾಲೂಕಿನ ಕುಂಬಾಪುರ ಗೇಟ್‍ನಲ್ಲಿನ ಬ್ಲೂ ಸ್ಟಾರ್ ಡಾಬಾ, ಲಕ್ಷ್ಮೀಪುರ, ಬಸವನ ಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಲಾಗಿತ್ತು. ಎಣ್ಣೆ ಖರೀದಿ ಬರುವ ಮದ್ಯ ಪ್ರಿಯರಿಗೆ, ಎರಡು …
Read More »ಚೀನಾದ ಬ್ಯಾಂಕ್‍ವೊಂದು ಎಚ್‍ಡಿಎಫ್‍ಸಿ ಬ್ಯಾಂಕ್‍ನ ಶೇ.1.01 ಷೇರು ಖರೀದಿಸಿದೆ.
ಮುಂಬೈ: ಭಾರತೀಯ ಬ್ಯಾಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದ್ದು, ಚೀನಾದ ಬ್ಯಾಂಕ್‍ವೊಂದು ಎಚ್‍ಡಿಎಫ್‍ಸಿ ಬ್ಯಾಂಕ್‍ನ ಶೇ.1.01 ಷೇರು ಖರೀದಿಸಿದೆ. ಪೀಪಲ್ಸ್ ಬ್ಯಾಂಕ್ ಆಫ್ ಚೀನಾ (ಪಿಬಿಒಸಿ)ಯು ಎಚ್‍ಡಿಎಫ್‍ಸಿ ಬ್ಯಾಂಕ್ ಶೇಕಡಾ 1.01 ಪಾಲನ್ನು ಪಡೆದುಕೊಂಡಿದೆ. ಮಾರ್ಚ್ ಅಂತ್ಯದ ತ್ರೈಮಾಸಿಕದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಚೀನಾ ಎಚ್‍ಡಿಎಫ್‍ಸಿಯಲ್ಲಿ ಸುಮಾರು 1.75 ಕೋಟಿ ಷೇರುಗಳನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಕಂಪನಿ ಬಾಂಬೆ ಸ್ಟಾಕ್ ಎಕ್ಸ್‍ಚೇಂಜ್ (ಬಿಎಸ್‍ಇ) ತಿಳಿಸಿದೆ. ಕೊರೊನಾ ವೈರಸ್ ಬಿಕ್ಕಟ್ಟಿನಿಂದಾಗಿ ಕಳೆದ ಒಂದು …
Read More »ಆಟಗಾರರನ್ನು ಎಲ್ಲಿಂದ ತರುತ್ತೀರಿ? ಐಪಿಎಲ್ ಮರೆತುಬಿಡಿ – ದಾದಾ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿ ಶೀಘ್ರದಲ್ಲೇ ಪ್ರಾರಂಭವಾಗುವ ಸಾಧ್ಯತೆಗಳಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಸಿಸಿಐ ಪದಾಧಿಕಾರಿಗಳೊಂದಿಗೆ ಮಾತನಾಡಿದ ನಂತರ ಐಪಿಎಲ್ ಅನ್ನು ಮತ್ತಷ್ಟು ಮುಂದೂಡಲಾಗುತ್ತದೆಯೇ ಎಂಬ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಾಗುತ್ತದೆ. ಆದರೆ ಪ್ರಾಯೋಗಿಕವಾಗಿ ಹೇಳುವುದಾದರೆ, ಕೊರೊನಾ ವೈರಸ್‍ನಿಂದಾಗಿ ಪ್ರಪಂಚದ ಎಲ್ಲೆಡೆ ಜೀವನವು ಸ್ಥಗಿತಗೊಂಡಿರುವಾಗ ಕ್ರೀಡೆಯಲ್ಲಿ ಭವಿಷ್ಯ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಕೊರೊನಾ ವೈರಸ್‍ನಿಂದ ಉಂಟಾಗಿರುವ …
Read More »“ಕೊರೋನಾ ಹರಡುವದಂತೆ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ”
ಬೆಳಗಾವಿ:ಕೊರೋನಾ ಹರಡುವದಂತೆ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ ಆಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದ ಗೃಹ ಕಚೇರಿಯಲ್ಲಿ ಮಾತನಾಡಿ ಪಡಿತರ ವಿತರಣೆಯಲ್ಲಿ ಜನರಿಗೆ ತೊಂದರೆಯಾಗುತ್ತಿರುವುದು ನಿಜವಾಗಿದೆ.ಬೇರೆ ಜಿಲ್ಲೆಗಳಿಂದ ವಲಸೆ ಬಂದವರಿಗೆ ರೇಷನ ನೀಡಲು ನಿರಾಕರಿಸಲಾಗುತ್ತಿದೆ. ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದರು. ದುಡಿಯುವ ಕೂಲಿ ಕಾರ್ಮಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಮತ್ತೆ ಹದಿನೈದು ದಿನ …
Read More »ತಬ್ಲಿಘಿ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು – ಸಿಟಿ ರವಿ
ಬೆಂಗಳೂರು: ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು ಎಂದು ಕನ್ನಡ ಮತ್ತು ಸಂಸ್ಕøತಿ ಖಾತೆಯ ಸಚಿವ ಸಿಟಿ ರವಿ ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ವಿಚಾರಕ್ಕೆ, ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ …
Read More »
Laxmi News 24×7