Breaking News

ರಾಷ್ಟ್ರೀಯ

ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ,”ಮಾಹಿತಿ ನೀಡಿದವರ ಹೆಸರ ಗೌಪ್”ಯ

ಲಕ್ನೋ: ತಬ್ಲಿಘಿ ಜಮಾತ್‍ಗೆ ತೆರಳಿ ಇನ್ನೂ ಪತ್ತೆಯಾಗದವರನ್ನು ಹುಡುಕಿಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಉತ್ತರ ಪ್ರದೇಶದ ಪೊಲೀಸರು ಪ್ರಕಟಿಸಿದ್ದಾರೆ. ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರು ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ನಡೆಸಬೇಕೆಂದು ಎಲ್ಲ ಸರ್ಕಾರಗಳು ಸೂಚನೆ ನೀಡುತ್ತಿವೆ. ಆದರೂ ಈ ಕಾರ್ಯಕ್ರಮಕ್ಕೆ ತೆರಳಿದ ಹಲವು ಮಂದಿ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಜಂಗಢದ ಪೊಲೀಸರು ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಬಹಳ ಸಂಖ್ಯೆಯಲ್ಲಿ ಜಮಾತ್ …

Read More »

ಮೀನುಗಾರಿಕೆಗೆ ವಿನಾಯಿತಿ- ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ

ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಆದರೆ ಕೆಲವು ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಈ ಪಟ್ಟಿಯಲ್ಲಿ ಮೀನುಗಾರಿಕೆ ಸಹ ಇದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಲಿದೆ. ಜನಸಂದಣಿ ಇಲ್ಲದ …

Read More »

ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು

ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …

Read More »

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …

Read More »

ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ

ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್‍ಡೌನ್ ವಿಸ್ತರಿಸಿದ ರಾಜ್ಯವಾಗಿದೆ. ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್‍ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿ …

Read More »

ರಾಜ್ಯ ಸರಕಾರ ಬೆಳೆ ಸಾಲ ಸಮಸ್ಯೆಯನ್ನು ಬಗೆಹರಿಸಬೇಕು

ರಾಜ್ಯ ಸರಕಾರ ಬೆಳೆ ಸಾಲ ಸಮಸ್ಯೆಯನ್ನು ಬಗೆಹರಿಸಬೇಕು ಬೆಳಗಾವಿ: ಕೊರೋನಾ ಮಹಾಮಾರಿಯಿಂದಾಗಿ ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಮತ್ತು ಕೃಷಿ ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಎದುರಾಗಿರುವ ಬೆಳೆ ಸಾಲ ಮರುಪಾವತಿ ಸಮಸ್ಯೆಯನ್ನು ರಾಜ್ಯ ಸರಕಾರ ತಕ್ಷಣ ಬಗೆಹರಿಸಬೇಕು ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ. …

Read More »

“ಸಿಎಂ ರಿಲೀಫ್ ಫಂಡ್‍ಗೆ ಒಟ್ಟು 1.80 ಕೋಟಿ ರೂ. ಜಮೆ” ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ 215 ಜನರಿಗೆ ಕೊರೊನಾ- 39 ಜನ ಡಿಸ್ಚಾರ್ಜ್ – ಬೆಂಗ್ಳೂರಿನಲ್ಲಿ ಇಂದಿನಿಂದ ಒಂದು ತಿಂಗ್ಳು ಕಠಿಣ ಕ್ರಮ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಈವರೆಗೂ 1.80 ಕೋಟಿ ರೂ. ಜಮೆ ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಈವರೆಗೂ 1.80 ಕೋಟಿ ರೂ. ಜಮೆಯಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 215ಕ್ಕೆ …

Read More »

ಬೆಂಗಳೂರು,:ಮೊಬೈಲ್ ಸ್ಯಾನಿಟೈಸರ್ ಬಸ್ ‘ಸಾರಿಗೆ ಸಂಜೀವಿನಿ’ಗೆ ಚಾಲನೆ

ಬೆಂಗಳೂರು, ಏ.11- ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್ ಅವರು ಚಾಲನೆ ನೀಡಿದರು. ಕೆಎಸ್‍ಆರ್‍ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ -2ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ. ಹತ್ತು ವರ್ಷದ ಹಳೆಯ ಬಸ್‍ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್‍ಆರ್‍ಟಿಸಿ , ಸುಮಾರು …

Read More »

” ಕೊಪ್ಪಳ:ಅಂಜನಾದ್ರಿ ಬೆಟ್ಟದಲ್ಲಿ ಆಹಾರ, ನೀರಿಗಾಗಿ ಮಂಗಗಳ ನರಳಾಟ”

ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್ ವಿಶ್ವದ ಮನುಕುಲವನ್ನೇ ಬೆಚ್ಚಿ ಬೀಳಿಸಿದ್ದಲ್ಲದೇ ಮೂಕ ಪ್ರಾಣಿಗಳನ್ನು ಕಂಗಾಲಾಗಿಸಿದೆ. ಕೊರೊನಾ ಭೀತಿಯಿಂದ ದೇಶವನ್ನು ಲಾಕ್‍ಡೌನ್ ಮಾಡಿ ಜನರಿಗೆ ಅಗತ್ಯ ವಸ್ತು, ಆಹಾರ ಒದಗಿಸುವ ಪ್ರಯತ್ನವೆನೋ ನಡೆಯುತ್ತಿದೆ. ಆದರೆ ಲಾಕ್‍ಡೌನಿಂದ ಆಹಾರ ಸಿಗದೇ ಮೂಕ ಪ್ರಾಣಿಗಳು ನರಳುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿರುವ ಆಂಜನೇಯ ಹುಟ್ಟಿದ ಸ್ಥಳ ಎಂದೇ ಪ್ರಖ್ಯಾತಿ ಪಡೆದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಸಾವಿರಾರು ಮಂಗಗಳು ನಿತ್ಯ ಆಹಾರಕ್ಕಾಗಿ ಪರದಾಡುವಂತಾಗಿದೆ. ಲಾಕ್‍ಡೌನ್‍ನಿಂದಾಗಿ ಕಳೆದ ಒಂದು …

Read More »