ಚಿಕ್ಕೋಡಿ : ಲಾಕ್‍ಡೌನ್ ಇದ್ದರೂ ಮನೆಯಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡರೂ ಕೇಳದೇ ಅನಾವಶ್ಯಕವಾಗಿ ರಸ್ತೆಯಲ್ಲಿ ಅಡ್ಡಾಡಿ ಲಾಕ್‍ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ತೊಲಗಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಹೇರಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರುವ ಮೂಲಕ ಲಾಕ್‍ಡೌನ್ ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರೂ ಕೇಳದ ಹಿನ್ನೆಲೆಯಲ್ಲಿ ಬುಧೂವಾರ ಡಿವೈಎಸ್ಪಿ ಮನೋಜ ನಾಯಿಕ …
Read More »ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್
ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ನ ಹಾಟ್‍ಸ್ಪಾಟ್ ಆಗಿರುವ ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಂದೇ ವೇಳೆ ಮಾಸ್ಕ್ ಧರಿಸದೇ ಹೊರಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜನರು ಧರಿಸುವ ಮಾಸ್ಕ್ ಗಳು ಕೆಮಿಕಲ್ ಇರುವ ಉತ್ತಮ ಗುಣಮಟ್ಟದ್ದು ಆಗಿರಬಹುದು ಅಥವಾ ಮನೆಯಲ್ಲಿ ತಯಾರಿಸಿದ ತೊಳೆಯಬಹುದಾದ ಮಾಸ್ಕ್ ಗಳನ್ನಾದರು ಧರಿಸಬಹುದು. ಆದರೆ ಎಲ್ಲಾ ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ಮತ್ತು ವಾಹನಗಳ ಒಳಗೂ …
Read More »ಯುಪಿ 15 ಜಿಲ್ಲೆಗಳು ಏ.30ರವರೆಗೂ ಲಾಕ್‍ಡೌನ್ – ಮನೆಯಿಂದ ಯಾರೂ ಹೊರಬರುವಂತಿಲ್
ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋ, ನೋಯ್ಡಾ, ಆಗ್ರಾ, ವಾರಣಾಸಿ, ಗಾಜಿಯಾಬಾದ್, ಮೀರತ್ ಸೇರಿದಂತೆ 15 ಜಿಲ್ಲೆಗಳಲ್ಲಿ ಏಪ್ರಿಲ್ 30ರವರೆಗೂ ಲಾಕ್‍ಡೌನ್ ವಿಸ್ತರಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿ, ರಾಜ್ಯದ ಲಕ್ನೋ, ಆಗ್ರಾ, ಗಾಜಿಯಾಬಾದ್, ಗೌತಂಬುದ್ ನಗರ, ಕಾನ್ಪುರ, ವಾರಣಾಸಿ, ಶಾಮ್ಲಿ, ಮೀರತ್, ಬರೇಲಿ, ಬುಲಂದ್‍ಶಹರ್, ಫಿರೋಜಾಬಾದ್, ಮಹಾರಾಜಗಂಜ್, ಸೀತಾಪುರ, ಸಹರಾನ್‍ಪುರ ಹಾಗೂ ಬಸ್ತಿ …
Read More »ಯಾವುದೇ ಕಾರಣಕ್ಕೂ ಲಾಕ್ಡೌನ್ ಅನ್ನು ಹಿಂಪಡೆಯುವುದಿಲ್ಲ:ಮೋದಿ
ನವದೆಹಲಿ ಏ.8. ಇಂದು ವಿಡಿಯೋ ಕಾನ್ಫೆರೆನ್ಸ್ ನಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಸಂವಾದ ನಡೆಸಿದ ಮೋದಿ ಏಪ್ರಿಲ್ 14ರಂದು ದೇಶಾದ್ಯಂತ ಲಾಕ್ಡೌನ್ ರದ್ದುಪಡಿಸುವ ಯಾವುದೇ ಪ್ರಶ್ನೆ ಇಲ್ಲ ಎಂದು ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ತಕ್ಷಣಕ್ಕೆ ಲಾಕ್ಡೌನ್ ಹಿಂಪಡೆಯುವ ಆಲೋಚನೆ ಇಲ್ಲ ಆದರೆ ನಾಗರೀಕರಿಗೆ ಸ್ವಲ್ಪಮಟ್ಟಿನ ರಿಲೀಫ್ ನೀಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸರ್ವ ಪಕ್ಷ ಸಭೆ ಇಂದು ವಿಪಕ್ಷ ನಾಯಕರು ನೀಡಿದ ಸಲಹೆಗಳನ್ನು ಆಲಿಸಿದ ನಂತರ ಯಾವುದೇ …
Read More »ಕರ್ನಾಟಕದ ಕೊರೋನಾ ಹಾಟ್‌ಸ್ಪಾಟ್‌ಗಳಲ್ಲಿ ಕನಿಷ್ಠ 2 ವಾರ ಲಾಕ್‍ಡೌನ್ ಮುಂದುವರಿಕೆ..
ಬೆಂಗಳೂರು : ಲಾಕ್ ಡೌನ್ ತೆರವುಗೊಳಿಸುವ ಸಂಬಂಧ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಹೇಳಿದೆ. ಆದರೆ, ಕೋವಿಡ್-19 ಹಾಟ್ ಸ್ಪಾಟ್ ಗಳಲ್ಲಿ ಕನಿಷ್ಠ ಎರಡು ವಾರಗಳವರೆಗೆ ವಿಸ್ತರಿಸುವ ಕಡೆಗೆ ಒಲವು ವ್ಯಕ್ತಪಡಿಸಿದೆ. ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಮತ್ತೊಂದಿಷ್ಟು ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸುವ ಅಗತ್ಯತೆ ಬಗ್ಗೆ ಎದುರು ನೋಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ …
Read More »ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪಂಚ ಸಲಹೆ
ನವದೆಹಲಿ: ದೇಶಾದ್ಯಂತ ಹದ್ದು ಮೀರುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಪಕ್ಷ ನಾಯಕರ ಸಲಹೆ ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ, ಇವತ್ತು ಪ್ರಧಾನಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರ ಶೇ.30ರಷ್ಟು ಸಂಬಳ ಕಡಿತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಟದ ಆರ್ಥಿಕ ಕ್ರೋಢೀಕರಣಕ್ಕಾಗಿ ಐದು ಸಲಹೆ ನೀಡಿದ್ದಾರೆ. ಪ್ರಧಾನಿಗೆ ಸೋನಿಯಾ ‘ಪಂಚ’ ಸಲಹೆ: ಸಲಹೆ …
Read More »ಅಧಿಕಾರಿಗಳ ದಾಳಿ – ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಜಾಲ ಪತ್ತೆ
ಶಿವಮೊಗ್ಗ: ಕೊರೊನಾ ಭೀತಿಯಿಂದ ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಸಾಯಬಾರದು ಎಂಬ ಕಾರಣದಿಂದ ರಾಜ್ಯ ಸರ್ಕಾರ ಕಳೆದ ಎರಡು ದಿನಗಳಿಂದ ಎರಡು ತಿಂಗಳಿನದ್ದು ಪಡಿತರ ಅಕ್ಕಿ, ಗೋಧಿ ವಿತರಿಸುತ್ತಿದೆ. ಆದರೆ ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡ ದಂಧೆಕೋರರು ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿ ಮೇರೆಗೆ ನಗರದ ಹೊರ ವಲಯದ ಕಲ್ಲೂರು ಬಳಿಯ ಫಾರಂ ಹೌಸ್‍ವೊಂದರ …
Read More »ಫುಲ್ ಸೈಲೆಂಟ್ ಆದ ಬಿಜೆಪಿ ಚಾಣಕ್ಯ-ಮುಖ್ಯ ವಾಹಿನಿಯಲ್ಲಿಲ್ಲ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಇಡೀ ದೇಶ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದೆ. ಈ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶದ ಜನರನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮೂರು ಬಾರಿ ಮಾತನಾಡಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಈ ನಡುವೆ ನಾಪತ್ತೆಯಾಗಿದ್ದಾರೆ. ಕೊರೊನಾ ಸೋಂಕು ದೇಶವನ್ನು ಕಿತ್ತು ತಿನ್ನುತ್ತಿದೆ. ಭಾರತ ಲಾಕ್‍ಡೌನ್ ಆದ್ರೂ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರ್ತಿಲ್ಲ. ಈ ನಡುವೆ ಲಾಕ್ …
Read More »ಕೆಟ್ಟ ದಾಖಲೆ ಬರೆದ ‘ಮಹಾ’- 1 ಸಾವಿರ ಸೋಂಕಿತರ ಗಡಿ ದಾಟಿದ ಮೊದಲ ರಾಜ್
ಮುಂಬೈ: ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆ ಒಂದು ಸಾವಿರ ಸೋಂಕಿತರ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನದಲ್ಲಿ 150 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,018ಕ್ಕೆ ಕಂಡಿದೆ. ದೇಶದಲ್ಲಿ ಈವರೆಗೂ ಯಾವುದೇ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಒಂದು …
Read More »ನಿಯತಿ ಫೌಂಡೇಶನ್ ಸಂಸ್ಥಾಪಕಿ ಡಾ. ಸೋನಾಲಿ ಸರ್ನೊಬತ್ ಕಾರ್ಯನಿರತ ಪತ್ರಕರ್ತರಿಗೆ ಮಾಸ್ಕ್ ವಿತರಿಸಿ ಬಳಿಕ ಮಾತನಾಡಿದರು.
ಬೆಳಗಾವಿ: ಮಾಹಾಮಾರಿ ಕೊರೊನಾ ಸೋಂಕಿಗೆ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಇಂಥಹ ಪರಿಸ್ಥಿತಿಯಲ್ಲಿಯೂ ಅಗತ್ಯ ಸೇವೆ ಸಲ್ಲಿಸುತ್ತಿರುವ ವೈದ್ಯರು, ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ನಿಯತಿ ಫೌಂಡೇಶನ್ ಸಂಸ್ಥಾಪಕಿ ಡಾ. ಸೋನಾಲಿ ಸರ್ನೊಬತ್ ಬಣ್ಣಿಸಿದರು. ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಭಾ ಭವನದಲ್ಲಿ ನಿಯತಿ ಫೌಂಡೇಶನ್ ಹಾಗೂ ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಕಾರ್ಯನಿರತ ಪತ್ರಕರ್ತರಿಗೆ ಮಾಸ್ಕ್ ವಿತರಿಸಿ ಬಳಿಕ ಮಾತನಾಡಿದರು. ಮಾರಕ ಕೊರೊನಾ ಸೋಂಕು ಭೀತಿ …
Read More »
Laxmi News 24×7