Breaking News

ರಾಷ್ಟ್ರೀಯ

ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM

ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು BJP ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. …

Read More »

ಜುಲೈ ವೇಳೆಗೆ ಬ್ಯಾಂಕ್ ಸಾಲದ ಬೆಳವಣಿಗೆ ಶೇ.15.1ಕ್ಕೆ ಏರಿಕೆ: RBI

ನವದೆಹಲಿ:ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಮರುಹಂಚಿಕೆ 2024 ರ ಜುಲೈನಲ್ಲಿ ಶೇಕಡಾ 18.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 21.55 ಲಕ್ಷ ಕೋಟಿರೂ.ಗೆತಲುಪಿದೆ ಎಂದು ಆರ್ಬಿಐ ತಿಳಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಆಹಾರೇತರ ಬ್ಯಾಂಕ್ ಸಾಲವು ಜುಲೈ 2024 ರ ವೇಳೆಗೆ ಶೇಕಡಾ 15.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 162.92 ಲಕ್ಷ ಕೋಟಿರೂ.ಗೆತಲುಪಿದೆ.   ಆದಾಗ್ಯೂ, ಬ್ಯಾಂಕುಗಳ ಠೇವಣಿ ಬೆಳವಣಿಗೆಯು ಶೇಕಡಾ 11.3 ರಷ್ಟು ಹಿಂದುಳಿದು …

Read More »

ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ್ ನಿಧನ

ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲೆನಾಡು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಶ್ರೀನಿವಾಸ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ಮತ್ತು ಕಾನೂನಿನ ಶಿಕ್ಷಣವನ್ನು ಮುಗಿಸಿದ ನಂತರ ಕಾನೂನು ವೃತ್ತಿಯನ್ನು ಪ್ರಾರಂಭಿಸಿದರು. ರಾಜಕೀಯಕ್ಕೆ ಬರುವ ಮುನ್ನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಶ್ರೀನಿವಾಸ ಅವರು ಮೈಸೂರು ವಿಧಾನಸಭೆಯ ಮಾಜಿ ಸದಸ್ಯರಾದ ಕಾನುಗೋಡು ಹರಿಯಪ್ಪನವರ್ …

Read More »

ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?

ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ. ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮಂಜುನಾಥ್ ಕೋಟುಮಚಗಿಯಲ್ಲಿ …

Read More »

ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ

ಬೆಂಗಳೂರು ಆಗಸ್ಟ್‌ 30: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ …

Read More »

ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. …

Read More »

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್‌ಐಆರ್ ಗೆ ತಡೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದನ್ನು ಬಿಜೆಪಿ ರಾಜ್ಯ …

Read More »

ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ. ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ …

Read More »

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ!

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ! ಬೆಂಗಳೂರು ಆಗಸ್ಟ್ 30: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶದ್‌ಗೆ ರಾಜಾತಿಥ್ಯ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಭಾವಿ ಸಚಿವರೊಬ್ಬರಿಗೆ ತರಾಟೆ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಜೈಲಿನಲ್ಲಿ ದರ್ಶನ್‌ಗೆ ಐಶಾರಾಮಿ ವ್ಯವಸ್ಥೆ ನೀಡಿರುವುದರ ಹಿಂದೆ ಸಚಿವರೊಬ್ಬರ ಕೈವಾಡವಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆ ಸಿಎಂ ಗರಂ ಆಗಿದ್ದು, ಆ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ‘ನೋಡಪ್ಪ ಇಂತಹ ವಿಚಾರಕ್ಕೆ …

Read More »

ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ’

ಗುಳೇದಗುಡ್ಡ: ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಮೂಲಕ ಕಟ್ಟಡ ಸೇರಿದಂತೆ ಇತರೆ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.   ಪಟ್ಟಣದ ಹೊಸಪೇಟೆ ಸಂಗನಬಸವೇಶ್ವರ ನಗರದಲ್ಲಿ ‌ಗುರುವಾರ ಲಕ್ಷ್ಮಿ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅವುಗಳು ನೈಜ ಕಟ್ಟಡ ಕಾರ್ಮಿಕರಿಗೆ …

Read More »