ನ್ಯೂಯಾರ್ಕ್: ಕೊರೊನಾ ವೈರಸ್‍ಗೆ ಅಮೆರಿಕದಲ್ಲಿ ಮತ್ತೊಂದು ಪುಟ್ಟ ಕಂದಮ್ಮ ಬಲಿಯಾಗಿದೆ ಎಂದು ಅಲ್ಲಿನ ರಾಜ್ಯಪಾಲರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅತ್ಯಂತ ಕಿರಿಯ ವಯಸ್ಸಿನ ಕಂದಮ್ಮ ಕೊರೊನಾಗೆ ಬಲಿಯಾದ ಎರಡನೇ ಪ್ರಕರಣ ಇದಾಗಿದೆ. ಈ ಬಗ್ಗೆ ರಾಜ್ಯಪಾಲ ನೆಡ್ ಲ್ಯಾಮಂಟ್ ಟ್ವೀಟ್ ಮಾಡಿದ್ದು, ಕಳೆದ ವಾರ ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಅಲ್ಲದೆ ಕಂದಮ್ಮ ಕೊರೊನಾ ವೈರಸ್‍ಗೆ ಬಲಿಯಾಗಿರುವುದು ದೃಢವಾಗಿದೆ ಎಂದು ಅವರು ವಿವರಿಸಿದ್ದಾರೆ. ಇದೊಂದು …
Read More »ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಓಪನ್
ಕೊರೊನಾ ಭೀತಿ ನಡುವೆ ವಹಿವಾಟು ರಾಮನಗರ: ಕೊರೊನಾ ಪ್ರಕರಣಗಳು ಪತ್ತೆಯಾಗದೆ ನೆಮ್ಮದಿಯಾಗಿದ್ದ ರೇಷ್ಮೆನಗರಿಗೆ ಮುಂದಿನ ದಿನಗಳಲ್ಲಿ ರೇಷ್ಮೆ ಮಾರುಕಟ್ಟೆಯೇ ಕಂಟಕವಾಗಲಿದೆಯೇ ಎಂಬ ಆತಂಕ ಜಿಲ್ಲಾಡಳಿತಕ್ಕೆ ಇದೀಗ ಎದುರಾಗಿದೆ. ಸರ್ಕಾರದ ಆದೇಶದಂತೆ ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲಾಗುತ್ತಿದೆ. ಸಾವಿರಾರು ಜನರು ಒಟ್ಟಿಗೆ ಸೇರುವ ಮಾರುಕಟ್ಟೆಯಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆ ಎಂಬ ಚಿಂತೆ ಜಿಲ್ಲಾಡಳಿತಕ್ಕೆ ಕಾಡುತ್ತಿದೆ. ಇತ್ತ ಮಾರುಕಟ್ಟೆ ಸ್ಥಗಿತಗೊಂಡಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. …
Read More »ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ
ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ …
Read More »ಕೊರೊನಾ ಸೋಂಕು- ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಸಾವು
ಚಂಡೀಗಢ: ಕೊರೊನಾ ಸೋಂಕಿಗೆ ಒಳಗಾಗಿದ್ದ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಅವರು ಇಂದು ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ 62 ವರ್ಷದ ನಿರ್ಮಲ್ ಸಿಂಗ್ ಪಂಜಾಬ್‍ನ ಅಮೃತಸರ್ ನಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಸಿಂಗ್ ಅವರು ಇತ್ತೀಚೆಗೆ ವಿದೇಶದಿಂದ ಮರಳಿದ್ದರು, ಮಾರ್ಚ್ 30ರಂದು ಉಸಿರಾಟದ ತೊಂದರೆ, ತಲೆ ತಿರುಗುವುದರಿಂದಾಗಿ ಗುರು …
Read More »ಚಿಕ್ಕೋಡಿ:ಮದ್ಯ ಸಿಗುತ್ತಿಲ್ಲವೆಂದು ಬಾವಿಗೆ ಹಾರಿ ಪ್ರಾಣ ಬಿಟ್ಟ
ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು …
Read More »ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ
ದೆಹಲಿಯಲ್ಲಿ ನಡೆದ ಸಭೆಗೆ ತಮಿಳುನಾಡು ತತ್ತರ – ನಿನ್ನೆ 50 ಮಂದಿ, ಇಂದು 110 ಜನರಿಗೆ ಸೋಂಕು ದೃಢ ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ ಚೆನ್ನೈ: ಇಂದು ಒಂದೇ 110 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಎಲ್ಲ 110 ಮಂದಿ ದೆಹಲಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದವರು ಎಂದು ತಮಿಳುನಾಡು ಸರ್ಕಾರ ಹೇಳಿದೆ. ಒಂದೇ ದಿನದಲ್ಲಿ 110 ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ …
Read More »“ಇನ್ಸ್‌ಪೆಕ್ಟರ್ ಕಾಲಿಗೆ ಬಿದ್ದು ನಮಸ್ಕರಿಸಿದ ಶಾಸಕ”
ವಿಶಾಖಪಟ್ಟಣಂ: ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಪೊಲೀಸರು ಜನದಡ್ಡನೆ, ವಾಹನಗಳ ಸಂಚಾರ ತಡೆಯುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ ಸೇವೆಗೆ ಆಂಧ್ರಪ್ರದೇಶದ ಶಾಸಕರೊಬ್ಬರು ಫುಲ್ ಫಿದಾ ಆಗಿ ಇನ್ಸ್‌ಪೆಕ್ಟರ್ ಒಬ್ಬರ ಕಾಲಿಗೆ ಮುಟ್ಟಿ ನಮಸ್ಕರಿಸಿದ್ದಾರೆ. ಆಂಧ್ರ ಪ್ರದೇಶದ ಅರಕು ಕ್ಷೇತ್ರದ ಶಾಸಕ ಚೆಟ್ಟಿ ಫಲ್ಗುನಾ ವಿಶಾಖಪಟ್ಟಣಂನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ಕೆಲವರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಶಾಸಕರ …
Read More »ಬೀದರ್:ಲಾಕ್‍ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್
ಬೀದರ್: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು 21 ದಿನಗಳ ಕಾಲ ಲಾಕ್‍ಡೌನ್ ಆಗಿದೆ. ಇದೀಗ ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದು ಓಡಾಡುತ್ತಿದ್ದವರ ಸುಮಾರು 213 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಆದೇಶ ಹೊರಡಿಸಲಾಗಿದೆ. ಆದರೆ ಕಲಂ 144 ಸಿಆರ್‌ಪಿಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಕೊರೊನಾ ವೈರಸ್ ಹರಡದಂತೆ …
Read More »ಬಳ್ಳಾರಿ:ಕುಡುಕರು ಅಬಕಾರಿ ಇಲಾಖೆ ಕಚೇರಿಯಲ್ಲಿ ಇಟ್ಟಿದ್ದ ಮದ್ಯವನ್ನು ಕದ್ದು ಪರಾರಿ
ಬಳ್ಳಾರಿ: ದೇಶಾದ್ಯಂತ ಸಂಪೂರ್ಣ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಎಲ್ಲಿಯೂ ಮದ್ಯ ಸಿಗುತ್ತಿಲ್ಲ. ಹೀಗಾಗಿ ಕೆಲ ಕುಡುಕರು ಅಬಕಾರಿ ಇಲಾಖೆ ಕಚೇರಿಯಲ್ಲಿ ಇಟ್ಟಿದ್ದ ಮದ್ಯವನ್ನು ಕದ್ದು ಪರಾರಿಯಾದ ಘಟನೆ ಜಿಲ್ಲೆಯ ಸಿರಗುಪ್ಪ ನಗರದಲ್ಲಿ ನಡೆದಿದೆ. ಸಿರುಗುಪ್ಪ ನಗರದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದು ಕಚೇರಿಯಲ್ಲಿ ಇಟ್ಟಿದ್ದರು. ಇತ್ತ ಕಳೆದೊಂದು ವಾರದಿಂದ ರಾಜ್ಯದಲ್ಲಿ ಎಲ್ಲಿಯೂ ಮದ್ಯದ ಸಿಗುತ್ತಿಲ್ಲ. ಹೀಗಾಗಿ ಕಳ್ಳರು ಅಬಕಾರಿ ಕಚೇರಿಯಲ್ಲಿದ್ದ ಮದ್ಯದ …
Read More »ಮನಕಲುಕುತ್ತೆ ಮಂಗಳೂರಿನ ಹಸುಗೂಸಿನ ಕಥೆ”……10 ತಿಂಗಳ ಮಗುವಿಗೆ ಕೊರೊನಾ ಚಿಕಿತ್ಸೆ
ಮಂಗಳೂರು: 10 ತಿಂಗಳ ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂದನಿಗಾಗಿ ಅಮ್ಮನ ತ್ಯಾಗದ ಕಥೆ ಮನಕಲಕುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದರೂ, ಕಂದಮ್ಮನಿಗೆ ಎದೆ ಹಾಲು ನೀಡುವುದನ್ನ ತಾಯಿ ನಿಲ್ಲಿಸಿಲ್ಲ. ಕೇರಳಕ್ಕೆ ಹೋದಾಗ ಮಗುವಿಗೆ ಕೊರೊನಾ ಸೋಂಕು ತಗುಲಿತ್ತು. ಐಸೋಲೇಷನ್ ವಾರ್ಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಮ್ಮನ ಎದೆ ಹಾಲು ಕುಡಿದ್ರೆ ಮಾತ್ರ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿದ್ದರೂ ತಾಯಿ …
Read More »
Laxmi News 24×7