ಸಾತಪುತೆ ಔಷಧಿ ಅಂಗಡಿಯಲ್ಲಿ ಕೊರೋನಾ ಹೆಸರಲ್ಲಿ ಜನರ ಕಣ್ಣಿಗೆ ಮಣ್ಣೇರಿಸುವ ಕೆಲಸ
Read More »ಬೆಂಗಳೂರು: ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು.: ಬಸವರಾಜ್ ಬೊಮ್ಮಾಯಿ
ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು. ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು. ಯಾವುದೇ …
Read More »ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಗೆ ಸುಳ್ಳು ಸುದ್ದಿ ಎಂದ ಕೇಂದ್ರ : ರಾಜೀವ್ ಗೌಬಾ ಸ್ಪಷ್ಟನೆ
ನವದೆಹಲಿ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ 21 ದಿನಗಳ ಕಾಲ ಅಂದರೆ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ನಡುವೆ ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಾಜೀವ್ ಗೌಬಾ, ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹಾಗೆಯೇ …
Read More »ಮೆಡಿಕಲ್ ಶಾಪ್ ಮತ್ತು ಖಾಸಗಿ ಕ್ಲಿನಿಕ್ ಮುಚ್ಚಿದರೆ ಪರವಾನಿಗೆ ರದ್ದು : ಬಿ.ಸಿ.ಪಾಟೀಲ್
ಹಾವೇರಿ, ಮಾ. 30:ಕೊರೊನಾದಂತಹ ಮಾರಕ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಡೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಸರ್ಕಾರದ ನೊಟೀಸ್‌ಗೂ ಬೆಲೆಕೊಡದೇ ಯಾರಾದರೂ ವೈದ್ಯರು ಆಸ್ಪತ್ರೆ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಪರವಾನಿಗೆ ರದ್ದುಪಡಿಸಲಾಗುವುದು.ಸೋಮವಾರ ಜಿಲ್ಲೆಯ ಹಿರೇಕೆರೂರು ನಗರ, ರಾಣೆಬೆನ್ನೂರು, …
Read More »ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…
ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, …
Read More »ಸ್ವಗ್ರಾಮಗಳತ್ತ ಕಾರ್ಮಿಕರ ವಲಸೆ : ಬೆಂಗಳೂರಲ್ಲೂ ದೆಹಲಿ ಪರಿಸ್ಥಿತಿ ನಿರ್ಮಾಣವಾಗದಂತೆ ಇಚ್ಛೆತ್ತ ಜಿಲ್ಲಾಡಳಿತ
ಬೆಂಗಳೂರು, ಮಾ.28- ದೆಹಲಿಯಲ್ಲಿ ಕಾರ್ಮಿಕರು ಸಾಮೂಹಿಕವಾಗಿ ವಲಸೆ ಹೋಗುತ್ತಿರುವ ದೃಶ್ಯಗಳು ಕರಳು ಕಿವುಚುತ್ತಿವೆ. ಬೆಂಗಳೂರಿನಲ್ಲೂ ಆ ರೀತಿಯ ಸನ್ನಿವೇಶ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಜಿಲ್ಲಾಡಳಿತ ಕೂಲಿ ಕಾರ್ಮಿಕರಿಗೆ ತಾತ್ಕಾಲಿಕ ವಾಸ್ತವ್ಯದ ವ್ಯವಸ್ಥೆ ಮಾಡುತ್ತಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮತ್ತವರ ತಂಡ ನಿನ್ನೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಥಮ ಹಂತದಲ್ಲಿ ಬೆಂಗಳೂರಿನ ಹೊರ ವಲಯದಲ್ಲಿರುವ ಮೂರು ಅಪಾರ್ಟ್ ಮೆಂಟ್ ಮತ್ತು ಎರಡು ಹಾಸ್ಟೇಲ್ ಗಳನ್ನು ಗುರುತಿಸಿದೆ. ಹೊಸದಾಗಿ ನಿರ್ಮಿಸಲಾದ ಅಪಾರ್ಟ್ …
Read More »ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ…….
ಮುಂಬೈ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪುಣೆಯ ನಾಯ್ಡು ಆಸ್ಪತ್ರೆಯ ದಾದಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಆಸ್ಪತ್ರೆಯ ಸಿಬ್ಬಂದಿ ಮಾಡಿದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಶುಕ್ರವಾರ ಸಂಜೆ ಪ್ರಧಾನಿ ಕಚೇರಿಯಿಂದ ನರ್ಸ್ ಛಾಯ ಜಗ್ತಾಪ್ ಅವರಿಗೆ ಕರೆ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ. ಕರೆ ಮಾಡಿ ಮರಾಠಿಯಲ್ಲಿ ಮಾತನಾಡಿದ ಮೋದಿ ಅವರು, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ. …
Read More »ಚೆನ್ನೈ:ಕ್ವಾರಂಟೈನ್‍ನಲ್ಲಿದ್ದು ಹುಚ್ಚನಾದ – ಮನೆಯಿಂದ ಬೆತ್ತಲಾಗಿ ಓಡಿ ವೃದ್ಧೆಯ ಕತ್ತು ಕಚ್ಚಿ ಕೊಂದ
ಚೆನ್ನೈ: ವಿದೇಶದಿಂದ ಭಾರತಕ್ಕೆ ಬಂದು ಹೋಂ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯೋರ್ವ ಮನೆಯಲ್ಲಿಯಿದ್ದು ಹುಚ್ಚನಾಗಿ, ರಾತ್ರಿ ಮನೆಯಿಂದ ಬೆತ್ತಲಾಗಿ ಓಡಿ ಹೋಗಿ ವೃದ್ಧೆಯೊಬ್ಬರ ಕತ್ತು ಕಚ್ಚಿ ಕೊಲೆಮಾಡಿದ ಭಯಾನಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಥೇನಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಥೇನಿ ನಿವಾಸಿ ನಾಟ್ಚಿಯಮ್ಮಾಲ್(90) ಮೃತ ದುರ್ಧೈವಿ. ಕೆಲವು ದಿನಗಳ ಹಿಂದೆ ಶ್ರೀಲಂಕಾದಿಂದ ಭಾರತಕ್ಕೆ ವಾಪಾಸ್ ಬಂದಿದ್ದ ವ್ಯಕ್ತಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಮನೆಯಲ್ಲೇ ಇದ್ದು ಇದ್ದು ಆತ ಮಾನಸಿಕವಾಗಿ …
Read More »ಕೊರೊನಾ ವಿರುದ್ಧ ಹೋರಾಡಲು ಸಂಭಾವ್ಯ ಲಸಿಕೆ ಅಭಿವೃದ್ಧಿಪಡಿಸಿದ ಹೈದರಾಬಾದ್ ವಿವಿ
ಹೈದರಾಬಾದ್: ವಿಶ್ವವ್ಯಾಪಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಹೈದರಾಬಾದ್‍ನ ವಿಶ್ವವಿದ್ಯಾಲಯ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಗೊಳಿಸಿದೆ. ಸ್ಕೂಲ್ ಆಫ್ ಲೈಫ್ ಸೈನ್ಸ್ ಜೀವ ರಾಸಾಯನಿಕ ವಿಭಾಗದ ಅಧ್ಯಾಪಕಿ ಡಾ. ಸೀಮಾ ಮಿಶ್ರಾ ಅವರು ‘ಟಿ ಸೆಲ್ ಎಪಿಟೋಪ್ಸ್’ ಎಂಬ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಹೈದರಾಬಾದ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಈ ಲಸಿಕೆಯನ್ನು ಕೊರೊನಾ ವೈರಸ್ ವಿರುದ್ಧ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದೆ. ಪ್ರಾಧ್ಯಾಪಕಿ ಡಾ. ಸೀಮಾ …
Read More »ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್‍ಡೌನ್‍ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …
Read More »
Laxmi News 24×7