ಬೆಂಗಳೂರು: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ ಪತ್ನಿ, ರಾಜ್ಯಸಭಾ ಸಂಸೆ ಸುಧಾಮೂರ್ತಿ ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಗೆ ಸುದ್ದಿಯಲ್ಲಿರುತ್ತಾರೆ. ಪ್ರಸಿದ್ಧ ಬರಹಗಾರರು ಆದ ಸುಧಾಮೂರ್ತಿ ಅವರು ಬಹುಪಾಲು ಸಮಯ ಸಮಾಜಸೇವೆಯಲ್ಲಿ ತೊಡಗಿರುತ್ತಾರೆ. ಇಂದು (ಆಗಸ್ಟ್ 19) ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಅಣ್ಣ-ತಂಗಿಯರ ಈ ಪವಿತ್ರ ಹಬ್ಬದ ಕುರಿತು ಸುಧಾಮೂರ್ತಿ ಅವರು ಹೇಳಿರುವ ಮಾತುಗಳು ಜಾಲತಾಣದಲ್ಲಿ ವೈರಲ್ ಆಗುತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಸುಧಾಮೂರ್ತಿ ಅವರು ರಕ್ಷಾಬಂಧನ ಆಚರಣೆಯ ಮೂಲವನ್ನು …
Read More »ಆಗಸ್ಟ್ 21ಕ್ಕೆ ಭಾರತ್ ಬಂದ್: ?ದೇಶಾದ್ಯಂತ ಪ್ರತಿಭಟನೆ ಕಾರಣ ಯಾವ ಸೇವೆ ಅಲಭ್ಯ?
ನವದೆಹಲಿ:ಆಗಸ್ಟ್ 21, 2024 ರ ಬುಧವಾರ ಭಾರತ್ ಬಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಚರ್ಚೆ ಭರದಿಂದ ಸಾಗಿದೆ. ‘#21_August_Bharat_Bandh’ ಹ್ಯಾಶ್ ಟ್ಯಾಗ್ ಪ್ರಸ್ತುತ ಟ್ರೆಂಡಿಂಗ್ ನಲ್ಲಿದೆ. ಈ ಹ್ಯಾಶ್ ಟ್ಯಾಗ್ ನೊಂದಿಗೆ ಎಕ್ಸ್ ನಲ್ಲಿ 15.4 ಸಾವಿರ ಪೋಸ್ಟ್ ಗಳನ್ನು ಪೋಸ್ಟ್ ಮಾಡಲಾಗಿದೆ. ಭಾರತ್ ಬಂದ್ ಹಿಂದಿನ ಕಾರಣ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ …
Read More »ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ, ಸಿಎಂ ಪರ ಶಕ್ತಿ ಪ್ರದರ್ಶನ
ಬೆಂಗಳೂರು: ಮುಡಾ ಪ್ರಕರಣ ದಲ್ಲಿ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಿಎಂ ಪರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಆ. 22ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ, “ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ಪ್ರಮಾದ ಮಾಡಿಲ್ಲ. ಆದರೂ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿದೆ. ಈ ಸಂದರ್ಭದಲ್ಲಿ ಸರಕಾರ ಮತ್ತು ಪಕ್ಷ ಒಗ್ಗಟ್ಟು ಪ್ರದರ್ಶಿಸಬೇಕು. ಜತೆಗೆ …
Read More »2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ
2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಹೊರಹಾಕಿದರು. ಬೆಳಗಾವಿಯಲ್ಲಿಮಾತನಾಡಿದ ಅವರು, ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೀರಿ. ಆದರೆ ಈ ಸರ್ಕಾರದಲ್ಲಿ ಯಾಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ವಿರುದ್ದ …
Read More »ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿ 14 ವರ್ಷದ ಬಳಿಕ ಮತ್ತೆ ಬಂಧನ !
ಕೊಪ್ಪಳ: ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದ ಬಂಧಿಯಾಗಿ 2010 ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ ಇಲಕಲ್ ಮೂಲದ ನಿವಾಸಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಎಂಬ ಖೈದಿಯನ್ನು ಜಿಲ್ಲಾ ಪೊಲೀಸರು ಬರೊಬ್ಬರಿ 14 ವರ್ಷಗಳ ಬಳಿಕ ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ವಿಚಾರಣಾ ಖೈದಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಇಲಕಲ್ ನಿವಾಸಿಯಾಗಿದ್ದ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ದ 2009ರಲ್ಲಿ ಕೇಸ್ ದಾಖಲಾಗಿತ್ತು. ಈತನನ್ನು ಕೊಪ್ಪಳ …
Read More »ಕೆರಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ “ಕಾಂತಾರ’ ಕಳೆ!
ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಯ ಸಂಚಲನ ಸೃಷ್ಟಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾನು ಕಲಿತ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ದತ್ತು ಪಡೆದು ಅದಕ್ಕೆ ಹೊಸ ಕಳೆ ನೀಡಿದ್ದಾರೆ. ಕಾಂತಾರ ಚಿತ್ರದ ನಟನೆಗಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿರುವ ಅವರು ಕಳೆದ ಸ್ವಾತಂತ್ರ್ಯೋತ್ಸವ ದಿನದಂದೂ ಶಾಲೆಗೆ ಭೇಟಿ ನೀಡಿದ್ದರು. …
Read More »ರಸ್ತೆಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಜರುಗಿಸಿ:ಮೊಹಮ್ಮದ್ ರೋಷನ್
ಬೆಳಗಾವಿ: ‘ನಗರದಲ್ಲಿ ಕೈಗಾರಿಕೆಯವರು ರಸ್ತೆ ಬದಿ ತ್ಯಾಜ್ಯ ಎಸೆಯುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೈಗಾರಿಕೆ ಇಲಾಖೆಯ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಕಾರ್ಖಾನೆಗಳ ತ್ಯಾಜ್ಯವನ್ನು ಮರುಬಳಕೆ ಮಾಡಲು ಅವಕಾಶವಿಲ್ಲ. ಹಾಗಾಗಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಅನ್ವಯ, ತ್ಯಾಜ್ಯ ವಿಲೇವಾರಿಗೆ …
Read More »ಅನುದಾನ ಹಂಚಿಕೆ ತಾರತಮ್ಯ: ಆಕ್ರೋಶ
ಬೆಳಗಾವಿ: ಮಹಾನಗರ ಪಾಲಿಕೆಯ ಬಜೆಟ್‌ನಲ್ಲಿ ಎಲ್ಲ 58 ವಾರ್ಡ್‌ಗಳಿಗೂ ಅನುದಾನ ಸರಿಯಾಗಿ ಹಂಚಿಕೆ ಆಗಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ನಾಯಕರು, ಆಡಳಿತಾರೂಢ ಪಕ್ಷವನ್ನು ತರಾಟೆ ತೆಗೆದುಕೊಂಡರು. ಆಯ್ದ 37 ವಾರ್ಡ್ ಸದಸ್ಯರಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದೂ ಆಕ್ಷೇಪ ವ್ಯಕ್ತಪಡಿಸಿದರು. ಮೇಯರ್ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಶನಿವಾರ ನಡೆದ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಕೆಲಕಾಲ ಬಿಸಿ ಚರ್ಚೆ …
Read More »ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 17: ಮುಡಾ ಹಗರಣದಲ್ಲಿ (muda) ಸಿಎಂ ಸಿದ್ದರಾಮಯ್ಯ(Siddaramaiah)ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಸದ್ಯ ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ್ದು, ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ …
Read More »ಖಾಸಗಿ ಶಾಲೆಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆ;
ಸರ್ಕಾರಿ ಶಾಲೆಗಳು ಬದಲಾಗುತ್ತಿವೆ. ಖಾಸಗಿ ಶಾಲೆಗಳ ಅಬ್ಬರದ ನಡುವೆಯೋ ಸರ್ಕಾರಿ ಶಾಲೆಗಳು ಪೈಪೋಟಿ ನೀಡುತ್ತಿವೆ. ಇದಕ್ಕೆ ವಿಜಯಪುರದ ಸರ್ಕಾರಿ ಶಾಲೆಗಳು ಉದಾಹರಣೆಯಾಗಿದೆ. ಯಾಕೆ ಅಂತೀರಾ? ಈ ಸ್ಟೋರಿ ಓದಿ.ಸರ್ಕಾರಿ ಶಾಲೆಗಳು ಅಂದರೆ ಸಾಕು ಜನರಿಗೆ ಅಸಡ್ಯ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಕಲಿಸೋರು ಇಲ್ಲ. ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವುದು ಪೋಷಕರ ಮಾತು. ಇದಕ್ಕೆ ತದ್ವಿರುದ್ಧವಾಗಿ ಬದಲಾಗುತ್ತಿವೆ ವಿಜಯಪುರದ ಸರ್ಕಾರಿ ಶಾಲೆಗಳು. ಅದರಲ್ಲೂ ವಿಜಯಪುರದ ಇಬ್ರಾಹಿಂಪುರದ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ …
Read More »