Breaking News

ರಾಷ್ಟ್ರೀಯ

ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ದೆಹಲಿ ಸಿಎಂ ಕೇಜ್ರಿವಾಲ್, ಕೆ.ಕವಿತಾಗೆ ಜೈಲೇ ಗತಿ : ಸೆ.2 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ! ನವದೆಹಲಿ: ದೆಹಲಿಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 2 ರವರೆಗೆ ವಿಸ್ತರಿಸಲಾಗಿದೆ. ರೂಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ಇಬ್ಬರೂ ನಾಯಕರ ಕಸ್ಟಡಿಯನ್ನು ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್, ಕೆ ಕವಿತಾ ವಿಡಿಯೋ …

Read More »

ಸ್ವಾತಂತ್ರೋತ್ಸವ ಸಂಭ್ರಮ : ಕರ್ನಾಟಕದ ಇಬ್ಬರು ವಿದ್ಯಾರ್ಥಿಗಗಳಿಗೆ ಪ್ರಧಾನಿ ಆಹ್ವಾನ

ನವದೆಹಲಿ,ಆ.13- ದೇಶದ 78ನೇಸ್ವಾತಂತ್ರೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳನ್ನು ಪ್ರಧಾನಿ ಕಾರ್ಯಾಲಯ ಅತಿಥಿಗಳನ್ನಾಗಿ ಆಹ್ವಾನಿಸಿದೆ. ಕರ್ನಾಟಕದ ಗದಗ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕದ ವಿದ್ಯಾರ್ಥಿಗಳಾದ ಸತೀಶ್‌ ಕನ್ನೇರ್‌ ಹಾಗೂ ಆದಿತ್ಯ ಕೊರವರ ಅವರನ್ನು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಮಂತ್ರಣ ನೀಡಲಾಗಿದೆ. ಕೇಂದ್ರ ಸರ್ಕಾರದ ಮೇರಿ ಮಾಟಿ, ಮೇರಾ ದೇಶ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕ ಯಶಸ್ವಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ, …

Read More »

ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರು,ಆ.13- ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಬಿಬಿಎಂಪಿ ಮುಂದಾಗಿದೆ.ಇನ್ನು ಮುಂದೆ ಟಚ್‌ ಸ್ಕ್ರೀನ್‌ ಮೂಲಕ ತಿಂಡಿ ಬುಕ್ಕಿಂಗ್‌ ಮಾಡಲು ಇಂದಿರಾ ಕ್ಯಾಂಟಿನ್‌ಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ರಾಜರಾಜೇಶ್ವರಿನಗರ ವಲಯದ 11 ಕ್ಯಾಂಟೀನ್‌ಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ. ಸಾಧಕ ಬಾಧಕ ಅಧ್ಯಯನದ ಬಳಿಕ 169 ಇಂದಿರಾ ಕ್ಯಾಂಟೀನ್‌ ಗೂ ಡಿಜಿಟಲ್‌ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಎಷ್ಟು ತಿಂಡಿ, ಎಷ್ಟು ಊಟ ಖರ್ಚಾಯ್ತು? ಗುಣಮಟ್ಟ …

Read More »

ವಿಜಯಪುರ: ಬಾಂಗ್ಲಾ ಹಿಂದೂಗಳಿಗೆ ರಕ್ಷಣೆ ನೀಡಿ

ವಿಜಯಪುರ(ದೇವನಹಳ್ಳಿ): ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾತ್ಮಕ ಅಕ್ರಮಣ ಕೊನೆಗೊಳ್ಳಿಸಿ, ಅವರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಸೋಮವಾರ ಹಿಂದೂ ಹಿತರಕ್ಷಣಾ ಸಮಿತಿಯ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.   ಪಟ್ಟಣದ ಶಿವಗಣೇಶ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಸಮಿತಿ ಸದಸ್ಯರು ಮೌನ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. …

Read More »

ಮುಳಬಾಗಿಲು: ಅರ್ಧಕ್ಕೆ ನಿಂತ ಮುಷ್ಟೂರು ಪಂಚಾಯಿತಿ ಕಟ್ಟಡ ಕಾಮಗಾರಿ

ಮುಳಬಾಗಿಲು: ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡ ಕಾಮಗಾರಿಯು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಕಟ್ಟಡದ ಮೇಲೆ ನಾನಾ ಬಗೆಯ ಬಳ್ಳಿಗಳು ಹರಡಿಕೊಂಡಿವೆ. ಅಲ್ಲದೆ, ಕಟ್ಟಡ ಸುತ್ತಲಿನ ಆವರಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ. ಮುಷ್ಟೂರು ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆ ₹21 ಲಕ್ಷ ವೆಚ್ಚದಲ್ಲಿ ಆಗಿನ ಶಾಸಕ ಎಚ್.ನಾಗೇಶ್, ಪಂಚಾಯಿತಿ ಕಾರ್ಯಾಲಯದ ಕಾಮಗಾರಿಗೆ ಚಾಲನೆ ನೀಡಿದ್ದರು. ತಮ್ಮ ಅಧಿಕಾರದ ಅವಧಿಯಲ್ಲೇ ಕಟ್ಟಡ ಉದ್ಘಾಟನೆ ಮಾಡಬೇಕು ಎಂಬ ಕಾರಣಕ್ಕೆ ತರಾತುರಿಯಲ್ಲಿ ಕಟ್ಟಡದ ಒಳಗೆ …

Read More »

ಸಂತ್ರಸ್ತರೊಂದಿಗೆ ಸರ್ಕಾರವಿದೆ: ಸಚಿವ ತಿಮ್ಮಾಪುರ

ಮುಧೋಳ: ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು ರೈತರು ಹಾಗೂ ಸಂತ್ರಸ್ತರು‌ ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮನವಿ ಮಾಡಿದ್ದಾರೆ. ‘ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೈತರಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ‌ ಕುರಿತು ಚರ್ಚಿಸುವ ಸಲುವಾಗಿ …

Read More »

ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರದಿಂದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಹಾಗೂ ವಿವಿಧ ರಂಗಾಯಣಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡಿ ಆದೇಶಿಸಿದ್ದಾರೆ. ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಘೋಷಣೆ ಮಾಡಿದ …

Read More »

ಗುಲಬರ್ಗಾ ವಿವಿ ಘಟಿಕೋತ್ಸವ: ರೈತನ ಮಗಳಿಗೆ 13 ಚಿನ್ನದ ಪದಕ

ಕಲಬುರಗಿ: ಗ್ರಾಮೀಣ ಭಾಗದ ಕೃಷಿ ಕುಟುಂಬದಿಂದ ಬಂದ ಆನಂದಮ್ಮ ಅವರು ಕನ್ನಡ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ ಗ್ರಾಮದ ರೈತ ದೇವಿಂದ್ರಪ್ಪ ಅವರ ಪುತ್ರಿ ಆನಂದಮ್ಮ. ಗುಲಬರ್ಗಾ ವಿವಿಯ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ 42ನೇ ಘಟಿಕೋತ್ಸವದಲ್ಲಿ ಮಗಳು ಚಿನ್ನದ ಪದಕ ಮತ್ತು ಪದವಿ ಪಡೆಯುವುದನ್ನು ಕೃಷಿಕರಾದ ದೇವಿಂದ್ರಪ್ಪ ಅವರು ಕುಟುಂಬ ಸಮೇತ ಬಂದು ಕಣ್ತುಂಬಿಕೊಂಡರು. ಜೇವರ್ಗಿ ತಾಲ್ಲೂಕಿನ ಯನಗುಂಟಿ ಸರ್ಕಾರಿ ಶಾಲೆಯ …

Read More »

ನೀರಜ್ ಚೋಪ್ರಾ ಮತ್ತು ಮನು ಭಾಕರ್ ಮದುವೆ?

ಮನು ಭಾಕರ್ ಮತ್ತು ನೀರಜ್ ಚೋಪ್ರಾ ಭಾರತದ ಹೆಮ್ಮೆಯ ಕ್ರೀಡಾಪಟುಗಳು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮನು ಭಾಕೆರ್ ಎರಡು ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತದ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಕಳೆದ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಬಾರಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮನು ಭಾಕರ್ ಶೂಟಿಂಗ್‌ನಲ್ಲಿ ಎರಡು ಪದಕ ಗೆದ್ದರೆ, ನೀರಜ್ …

Read More »

ಸಿದ್ದರಾಮೇಶ್ವರ ಅಜ್ಜ ನಿಧನ

ಹರಪನಹಳ್ಳಿ (ವಿಜಯನಗರ ಜಿಲ್ಲೆ): ಬಸವತತ್ವ ಪ್ರಚಾರಕ್ಕೆ ಲೋಕ ಸಂಚಾರ ಕೈಗೊಂಡು ಬಸವ ಕಲ್ಯಾಣದಲ್ಲಿ ನೆಲೆಸಿ, ಸ್ವಗ್ರಾಮ ತಾಲ್ಲೂಕಿನ ಮತ್ತಿಹಳ್ಳಿಗೆ ಮರಳಿದ್ದ ಶತಾಯುಷಿ ಶಿವರಾಮಪ್ಪ(104) ಸೋಮವಾರ ನಿಧನರಾದರು. ಅವರಿಗೆ ಮೂವರು ಪುತ್ರರು ಇದ್ದಾರೆ. 50 ವರ್ಷಗಳ ಹಿಂದೆ ಶಿವರಾಮಪ್ಪ ಅವರು ಬಸವ ತತ್ವ ಪ್ರಚಾರಕ್ಕಾಗಿ ಊರು ತೊರೆದು, ಬಸವಕಲ್ಯಾಣದಲ್ಲಿ ನೆಲೆಸಿ ‘ಸಿದ್ದರಾಮೇಶ್ವರ ಅಜ್ಜ’ ಎಂದು ಪ್ರಸಿದ್ಧಿ ಪಡೆದಿದ್ದರು. ಬಸವಕಲ್ಯಾಣದ ಅನುಭವ ಮಂಟಪದ ಸಂಚಾಲಕರಾಗಿದ್ದರು. ‘ಅಂತ್ಯಕ್ರಿಯೆ ಅವರ ಸ್ವಗ್ರಾಮ ಮತ್ತಿಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 12 …

Read More »