Breaking News

ರಾಷ್ಟ್ರೀಯ

ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿದೆ: ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ

ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು. ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ವಿಚಾರಕ್ಕೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಥಮಿಕ ಸಾಕ್ಷ್ಯಗಳು ಇಲ್ಲದೇ ಎಸ್ಐಟಿ ರಚನೆ ಮಾಡಿದರು. ಸರಿ ತಪ್ಪು ಎಂಬುದು ತನಿಖೆ ಆಗಲಿ. 13 ಸ್ಥಳಗಳಲ್ಲಿ …

Read More »

ಮಹಾರಾಷ್ಟ್ರ ಚುನಾವಣೆಯಲ್ಲಿ ‘ಗೆಲುವಿನ ಗ್ಯಾರಂಟಿ’ ನೀಡಿದ್ದ ಅನಾಮಿಕರು: ಶರದ್​ ಪವಾರ್

ನಾಗ್ಪುರ (ಮಹಾರಾಷ್ಟ್ರ) : ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮತಗಳ್ಳತನ ಆರೋಪ ಮಾಡುತ್ತಿರುವ ನಡುವೆ, I.N.D.I.A ಕೂಟದ ಭಾಗವಾದ ನ್ಯಾಷನಲ್​ ಕಾಂಗ್ರೆಸ್​ ಪಕ್ಷದ (ಎಸ್​ಪಿ) ಮುಖ್ಯಸ್ಥ ಶರದ್​ ಪವಾರ್​ ಅವರು ಮತ್ತೊಂದು ಅಚ್ಚರಿಯ ಅಂಶವನ್ನು ಬಹಿರಂಗಪಡಿಸಿದ್ದಾರೆ. 2024 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮನ್ನು ಭೇಟಿಯಾಗಿ, 288 ಕ್ಷೇತ್ರಗಳ ಪೈಕಿ 160 ಸ್ಥಾನ ಗೆಲ್ಲಿಸಿಕೊಡುವುದಾಗಿ ‘ಗ್ಯಾರಂಟಿ’ ನೀಡಿದ್ದರು ಎಂದು ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಮತ್ತೊಂದು …

Read More »

ಬಾಗಲಕೋಟೆ ಸಹಪಾಠಿಗಳಿಂದ ರ್ಯಾಗಿಂಗ್​ ಆರೋಪ: ಯುವತಿ ಆತ್ಮಹತ್ಯೆ

ಬಾಗಲಕೋಟೆ: ಸಹಪಾಠಿಗಳ ರ್ಯಾಗಿಂಗ್​​ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ಅಂಜಲಿ ಮುಂಡಾಸ (21) ಮೃತ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ತಾನು ಸಹಪಾಠಿಗಳು ನೀಡುತ್ತಿದ್ದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಡೆತ್​​ನೋಟ್​ನಲ್ಲಿ ಬರೆದಿದ್ದಾರೆ. ಜೊತೆಗೆ ತನಗೆ ರ್ಯಾಗಿಂಗ್​ ಮಾಡಿದ ತನ್ನಿಬ್ಬರು ಸಹಪಾಠಿಗಳ ಹೆಸರು, ಅವರ ವಿಳಾಸವನ್ನು ಅದರಲ್ಲಿ ನಮೂದಿಸಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸಿ ಎಂದೂ …

Read More »

ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು: ಆದರೂ ಈ ಆನೆಗಳಿಗೆ ನಡೆಯಲಿದೆ ತಾಲೀಮು

ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವೇ ಆಗಲಿದ್ದು, ಈ ಬಾರಿಯೂ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದ್ದಾನೆ. ಆರನೇ ಬಾರಿ ಅಂಬಾರಿ ಹೊರಲು ಅಭಿಮನ್ಯು ಸನ್ನದ್ಧ: 2025ರ ದಸರಾ ಮಹೋತ್ಸವದ ವಿಜಯ ದಶಮಿಯಲ್ಲಿ ಅಭಿಮನ್ಯು 750 ಕೆ‌.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದರೆ, ಒಟ್ಟು 6 ಬಾರಿ ಅಂಬಾರಿ ಹೊತ್ತಂತಾಗುತ್ತದೆ. ಅಭಿಮನ್ಯುವಿಗೆ ಅಂಬಾರಿ ತಾಲೀಮು ನಡೆಸುವಂತೆ ಉಳಿದ ಆನೆಗಳಾದ ಮಹೇಂದ್ರ, ಧನಂಜಯ, ಏಕಲವ್ಯ, ಪ್ರಶಾಂತ ಆನೆಗಳಿಗೂ …

Read More »

ಜಮಖಂಡಿಯಲ್ಲಿ ಚಿರತೆ ಪತ್ತೆ!!! ಗ್ರಾಮಸ್ಥರಲ್ಲಿ ಮೂಡಿದ ಆತಂಕ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೆಡಿ ಜಂಬಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಓಡಾಟ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಠಿಸಿದೆ. ಕಳೆದ ಎರಡು ದಿನಗಳಲ್ಲಿ ಗ್ರಾಮದ ಹಲವೆಡೆ ಮೇಕೆ, ನಾಯಿ ಗಳ ಮೇಲೆ ದಾಳಿ ನಡೆಸಿದ ಈ ಚಿರತೆ, ಕೆಲವನ್ನು ಎಳೆದೊಯ್ದು, ಅರ್ದಂಮರ್ದಾ ತಿಂದ ಘಟನೆಗಳು ಗ್ರಾಮದಲ್ಲಿ ಭಯದ ವಾತಾವರಣವನ್ನು ನಿರ್ಮಿಸಿವೆ. ಬಿರಾದಾರ್ ವಸ್ತಿಯ ತೋಟದ ಸುತ್ತಲಿನ ಭಾಗದಲ್ಲಿ ಮೇಕೆಗಳ ಕಳೆಬರಹಗಳು ಪತ್ತೆಯಾಗಿದ್ದು, ಇದುವರೆಗೆ ನಾಲ್ಕು ಮೇಕೆಗಳ ಮೇಲೆ ದಾಳಿ …

Read More »

ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ಖಾನಾಪೂರ ತಹಶೀಲ್ದಾರ್ ಕಚೇರಿ ಸೇರಿದಂತೆ ಸಬ್ ರಿಜಿಸ್ಟ್ರಾರ್ ಕಚೇರಿ ಅದರಂತೆಯೇ ಖಾನಾಪೂರ ಎಮ್ ಸಿಎಚ್ ಆಸ್ಪತ್ರೆಯಲ್ಲಿ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿ ಸಿ.ಎಸ್ ಪಾಟೀಲ್ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು ಸಾರ್ವಜನಿಕರಿಗೆ ನೀಡುವ ಸೌಲಭ್ಯ ಸೇರಿದಂತೆ ಕಚೇರಿಗಳಲ್ಲಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಬೆಳಗಾವಿ …

Read More »

4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು…

4 ಪ್ರಕರಣಗಳಲ್ಲಿ 8 ಆರೋಪಿಗಳ ಬಂಧನ ಗಾಂಜಾ ಮತ್ತು ಜೂಜಾಟ ಪ್ರಕರಣವನ್ನು ಬೇಧಿಸಿದ ಬೆಳಗಾವಿ ಪೊಲೀಸರು… ಜೂಜಾಟ, ಗಾಂಜಾ ಸೇವನೆ ಮತ್ತು ಹರಿತವಾದ ಆಯುಧ ಹೊಂದಿದ ಒಟ್ಟು 4 ಪ್ರಕರಣಗಳಲ್ಲಿ ಒಟ್ಟು 8 ಜನರನ್ನು ವಶಕ್ಕೆ ಪಡೆದು, ಒಟ್ಟು 9,580 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಕ್ರಾಸ್ ಹತ್ತಿರ ಮಟಕಾ ಆಡುತ್ತಿದ್ದಾಗ ಸಿಸಿಬಿ ವಿಭಾಗ …

Read More »

ಎಟಿಎಂ ಬಳಸುವಾಗ ಎಚ್ಚರ! ವಿಶೇಷ ಸಾಧನ ಅಳವಡಿಸಿ ಹಣ ಲಾಕ್ ಮಾಡುತ್ತಿದ್ದ ಕಳ್ಳ ಸೆರೆ

ಚಿಕ್ಕಬಳ್ಳಾಪುರ: ನಗರದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು ದೋಚುತ್ತಿದ್ದ ಚಾಲಾಕಿ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ನಿಯಾಜುದ್ದೀನ್ (20) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಬಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಏಪ್ರಿಲ್ 11ರ ರಾತ್ರಿ ಸಿನಿಮೀಯ ರೀತಿಯ ಕಳ್ಳತನ ನಡೆದಿತ್ತು. ಕಳ್ಳರು ಎಟಿಎಂನಿಂದ ಹಣ ಹೊರಬರುವ ಜಾಗಕ್ಕೆ ಒಂದು ಸಾಧನವನ್ನು ಅಳವಡಿಸಿದ್ದರು. ಗ್ರಾಹಕರು ಹಣ ಡ್ರಾ ಮಾಡಿದಾಗ ನೋಟುಗಳು ಹೊರಬರುವ …

Read More »

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್

ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್ ‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ ನಟನೆಯ ‘ಮಿರಾಯ್’ ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ …

Read More »

ಧಾರವಾಡ: ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಳ

ಧಾರವಾಡ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಆಕರ್ಷಣೆಗೊಳಗಾಗಿ ಪ್ರೇಮ ಪ್ರಕರಣಗಳಲ್ಲಿ ಸಿಲುಕಿ ಗರ್ಭ ಧರಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇಂಥ ಅನೇಕ ಪ್ರಕರಣಗಳು ವರದಿಯಾಗುತ್ತಿವೆ. ಧಾರವಾಡದಲ್ಲಿ ಬಾಲಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇದರಲ್ಲಿ ಪ್ರೇಮ ಪ್ರಕರಣಗಳೇ ಅಧಿಕ. ಆರ್‌ಸಿಎಚ್ ದತ್ತಾಂಶದ ಪ್ರಕಾರ 2023-24ರಲ್ಲಿ 111 ಹಾಗೂ 2024-25ರಲ್ಲಿ 31 ಪ್ರಕರಣಗಳು ದಾಖಲಾಗಿವೆ. ಈ ಅಂಕಿ-ಅಂಶಗಳಿಂದ ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರು, “ಸಾಕಷ್ಟು …

Read More »