ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು ಬೆಳಗಾವಿ: ನದಿ ನೀರಿನ ಪ್ರವಾಹದಲ್ಲಿ ಸಿಲುಕಿ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು, ನಮ್ಮಸಮಸ್ಯೆ ಬಗೆಹರಿಸುವಂತೆ ಸಂತ್ರಸ್ತ ಮಹಿಳೆಯರು ಬೇಡಿಕೊಂಡ ಘಟನೆ ಸೋಮವಾರ (ಆ 05) ನಡೆದಿದೆ. ಗೋಕಾಕ ನಗರದಲ್ಲಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿದಾಗ, ಅನೇಕ ಮಹಿಳೆಯರು ಕೈ ಮುಗಿದು ಬೇಡಿಕೊಂಡರು. ನಮಗೆ ಪರಿಹಾರ ಕೊಡಿ, …
Read More »ಮನೆ ಸಂಪೂರ್ಣ ಹಾಳಾಗಿದ್ದರೆ ಪರಿಹಾರ: ಸಚಿವ ಮಹದೇವಪ್ಪ
ತಿ.ನರಸೀಪುರ: ಜಲಪ್ರವಾಹದಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೆ ಸಂತ್ರಸ್ತರಿಗೆ ಸೂರು ಕಲ್ಪಿಸಲು ರಾಜೀವ್ ಗಾಂಧಿ ವಸತಿ ನಿಗಮದಿಂದ 1.20 ಲಕ್ಷ ರೂ. ವೆಚ್ಚದ ವಸತಿ ಯೋಜನೆಯನ್ನು ಪರಿಹಾರವಾಗಿ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ಹೇಳಿದರು. ಅವರು ಪಟ್ಟಣದ ಹಳೇ ತಿರುಮಕೂಡಲು ಹಾಗೂ ತಾಲೂಕಿನ ಮಾಲಂಗಿ ಗ್ರಾಮದಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವಿಧಾನ ಪರಿಷತ್ ಸದಸ್ಯ ಡಾ| ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಪರಿಶೀಲಿಸಿ ಮಾತನಾಡಿದರು. …
Read More »ಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಅಭಯ! ನಿಮ್ಮ ಬೆನ್ನಿಗೆ ನಾವಿದ್ದೇವೆ
ಬೆಂಗಳೂರು: ರಾಜ್ಯಪಾಲರ ನೋಟಿಸ್ ಮತ್ತು ಮೈತ್ರಿಪಕ್ಷಗಳ ಪಾದಯಾತ್ರೆ ನಡುವೆಯೂ ಮುಡಾ ಹಗರಣದ ವಿಚಾರದಲ್ಲಿ ಸಂಪೂರ್ಣವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗಿದ್ದೇವೆ ಎಂಬ ಸಂದೇಶ ವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿ ಸಿದೆ. ಜತೆಗೆ ಸಂಪುಟದ ಎಲ್ಲ ಸಚಿವರು ಕೂಡ ಸಿಎಂ ಬೆಂಬಲಕ್ಕೆ ನಿಲ್ಲಬೇಕು. ಎಲ್ಲರೂ ಸೇರಿ ಕಾನೂನು ಹೋರಾಟಕ್ಕೆ ಸಜ್ಜಾಗಬೇಕು ಎಂದು ಸೂಚನೆ ನೀಡಿದೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. …
Read More »ಸಚಿವ ಸಂಪುಟ ಪುನಾರಚನೆಯ ಸ್ಪಷ್ಟ ಸುಳಿವು ನೀಡಿದ್ದಾರೆ.? ಕೆಲಸ ಮಾಡಿ, ಇಲ್ಲವೇ ಸ್ಥಾನ ಬಿಡಿ: ಸಚಿವರಿಗೆ ಹೈಕಮಾಂಡ್
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಾದ ಹಿನ್ನಡೆ, ಅನಂತರ ಡಿಸಿಎಂ ಹುದ್ದೆ ಸೃಷ್ಟಿ ಮತ್ತಿತರ ವಿಷಯಗಳಲ್ಲಿ ವ್ಯಕ್ತವಾದ ಬಣಗಳ ಬಡಿದಾಟದಿಂದ ತೀವ್ರ ಬೇಸರಗೊಂಡಿರುವ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ಮುಂದಿನ 2 ತಿಂಗಳಲ್ಲಿ ಸಚಿವರ ಕಾರ್ಯವೈಖರಿ ಬದಲಾಗದಿದ್ದರೆ ಸ್ಥಾನ ತೊರೆಯಲು ಸಜ್ಜಾಗುವಂತೆ ಸೂಚಿಸಿದ್ದಾರೆ. ಈ ಮೂಲಕ ಸಚಿವ ಸಂಪುಟ ಪುನಾರಚನೆಯ ಸ್ಪಷ್ಟ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ರವಿವಾರ ನಡೆದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ …
Read More »ಸರಕಾರ ಪ್ರವಾಹ ಸಂತ್ರಸ್ತರ ಜೊತೆಗಿದೆ: ಹೆಬ್ಬಾಳಕರ್
ಬೆಳಗಾವಿ: ಸರಕಾರ ಪ್ರವಾಹ ಸಂತ್ರಸ್ತರ ಜೊತೆಗಿದೆ. ಅವರಿಗೆ ಎಲ್ಲ ರೀತಿಯಲ್ಲೂ ನೆರವು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳಗಾ (ಯು), ಅತವಾಡ, ಬಸುರ್ತೆ, ಬೆಕ್ಕಿನಕೇರಿ, ಬೆಳಗುಂದಿ, ಸೋನೋಲಿ, ಕೊನೆವಾಡಿ, ರಾಕಸಕೊಪ್ಪ, ಯಳೆಬೈಲ್, ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಮನೆಗಳ ವೀಕ್ಷಣೆ ಮಾಡಿದರು. ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಸಾಕಷ್ಟು …
Read More »2 ವರ್ಷ ಕಳೆದರೂ ಪ್ರಾರಂಭಗೊಳದ ರಸ್ತೆ ಕಾಮಗಾರಿ
ರಾಯಬಾಗ: ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲ್ಲಿಲ್ಲ ಎಂಬಂತೆ ಜಿ.ಎಲ್.ಬಿ.ಸಿ. ಅನುದಾನದಲ್ಲಿ 1.60 ಕೋಟಿ ರೂ. ವೆಚ್ಚದಲ್ಲಿ 33 ಚಿಕ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಆಗಿದ್ದು, ಗುತ್ತಿದಾರ ಸಹ ಕೆಲಸ ಪ್ರಾರಂಭಿಸಿದ್ದಾರೆ. ಆದರೆ ಕೆಲ ರೈತರು ಇದಕ್ಕೆ ತಕರಾರು ಮಾಡಿದ್ದರಿಂದ, ಸರ್ವೆ ಮಾಡಿ ನಿಮ್ಮ ರಸ್ತೆ ಎಲ್ಲಿ ಬರುತ್ತದೆ ಅಲ್ಲಿ ತೆಗೆದುಕೊಳ್ಳಿ ಎಂದಿದ್ದಾರೆ. ಅದರಂತೆ ಸರ್ವೆ ಇಲಾಖೆಯ ಅಧಿಕಾರಿಗಳಿಗೆ ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ …
Read More »ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ
ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ ಬೆಳಗಾವಿ: ತಾಲ್ಲೂಕಿನ ಬಾವನ ಸವದತ್ತಿ ಗ್ರಾಮದ ಬಾಬುರಾವ್ ಸಂಜೀವ ಬಾಪಕರ (40) ಎಂಬ ವ್ಯಕ್ತಿ ಶವ, ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಬುರಾವ್ ಅವರು ಕಾಗವಾಡ ಸಕ್ಕರೆ ಕಾರ್ಖಾನೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಗುರುವಾರ ಬೆಳಿಗ್ಗೆ ಮನೆಯಿಂದ ಹೋದವರು ಮತ್ತೆ ಬಂದಿರಲಿಲ್ಲ. ಅಂಕಲಿ ಸೇತುವೆ ಬಳಿ ಅವರ ಶವ ಪತ್ತೆಯಾಗಿದೆ. ಸಾವಿಗೆ ನಿಖರ …
Read More »ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನ ಮಾಡಿ: ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ: ‘ಯಾವ ಧರ್ಮವೂ ಅಂಗಾಂಗ ದಾನ ನಿಷೇಧಿಸಿಲ್ಲ. ಈ ಪದ್ಧತಿ ಅನುಸರಿಸಿದರೆ ಬದುಕಿನಲ್ಲಿ ಮೋಕ್ಷ ಸಿಗದು, ನಿಧನದ ನಂತರ ಸ್ವರ್ಗಕ್ಕೆ ಹೋಗಲಾಗದು ಎಂಬೆಲ್ಲ ತಪ್ಪು ಕಲ್ಪನೆ ಜನರಲ್ಲಿವೆ. ಇದರಿಂದ ಎಲ್ಲರೂ ಹೊರಬಂದು ಅಂಗಾಂಗ ದಾನಕ್ಕೆ ಮುಂದಾಗಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಲ್ಲಿನ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್‌ನ (ಕಾಹೇರ್) ಡಾ.ಬಿ.ಎಸ್.ಜೀರಗೆ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
Read More »ಆದಾಯಕ್ಕಿಂತ ಅಧಿಕ ಆಸ್ತಿ: ಯಾದಗಿರಿ ಡಿಎಚ್‌ಒ ಅಮಾನತು
ಯಾದಗಿರಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಭುಲಿಂಗ ಅವರು ₹1.40 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದನ್ನು ಲೋಕಾಯುಕ್ತ ಪೊಲೀಸ್ ಪತ್ತೆ ಹಚ್ಚಿದ್ದರು. ಹೀಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಳಂದ ಸಾರ್ವಜನಿಕ ಆಸ್ಪತ್ರೆಗೆ ಲೀನ್ ವರ್ಗಾವಣೆ …
Read More »ವಯನಾಡ್ ಭೂಕುಸಿತ: ಕೊಡಗು ಜಿಲ್ಲೆಯ ಯುವತಿ ಮೃತದೇಹ ಪತ್ತೆ
ಸಿದ್ದಾಪುರ: ವಯನಾಡು ಭೂಕುಸಿತ ದುರಂತದಲ್ಲಿ ನಾಪಯ್ತೆಯಾಗಿದ್ದ ಕೊಡಗಿನ ನೆಲ್ಯಹುದಿಕೇರಿ ಮೂಲದ ಯುವತಿ ಹಾಗೂ ಕುಟುಂಬದ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿಯ ನಲ್ವತ್ತೇಕರೆ ನಿವಾಸಿ ಪೊನ್ನಮ್ಮ ಎಂಬವರ ಮಗಳು ದಿವ್ಯಾ (35) ಚೂರಲ್ ಮಲ ಗೆ ವಿವಾಹವಾಗಿದ್ದರು. ಭೂಕುಸಿತದಲ್ಲಿ ದಿವ್ಯಾ ಸೇರಿದಂತೆ ಕುಟುಂಬದ 9 ಮಂದಿ ನಾಪತ್ತೆಯಾಗಿದ್ದರು. ಮಗಳು ಹಾಗೂ ಕುಟುಂಬಸ್ಥರನ್ನು ಹುಡುಕಿಕೊಡುವಂತೆ ಪೊನ್ನಮ್ಮ ಮನವಿ ಮಾಡಿದ್ದರು. ಶುಕ್ರವಾರ ಸಂಜೆ ಕುಟುಂಬದ 9 ಮಂದಿಯ ಪೈಕಿ 8 ಮಂದಿಯ …
Read More »
Laxmi News 24×7