ನವದೆಹಲಿ: ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ), ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜೀತೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು …
Read More »ಹುಬ್ಬಳ್ಳಿ: ರೈತರಿಗೆ ನೆರವಾದ ‘ಕೃಷಿ ಸಿಂಚಾಯಿ’
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆಗೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023-24ರ ಸಾಲಿನಲ್ಲಿ 11,143 ಜನ ರೈತರು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 8,009 ರೈತರಿಗೆ ಯೋಜನೆಯ ಲಾಭ ದಕ್ಕಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದು ಅತ್ಯಧಿಕವಾಗಿದೆ. ಉತ್ತಮ ಇಳುವರಿ ಪಡೆಯಲು ಹಾಗೂ ಬೆಳೆಗೆ ಆಗುವ ನೀರಿನ ತೊಂದರೆ ನೀಗಿಸಲು 2015ರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಲಾಭ ಪಡೆಯುತ್ತಿರುವ ರೈತರ ಸಂಖ್ಯೆ ವರ್ಷದಿಂದ …
Read More »ಕೃಷ್ಣಾ ನದಿ ನೀರು ; ಆತಂಕದಲ್ಲಿ ಜನರು
ಬೆಳಗಾವಿ : ನಿರಂತರ ಮಳೆಯಿಂದ ಕಂಗಾಲಾಗಿರುವ ಜನರಿಗೆ ಈಗ ಪ್ರವಾಹದ ಸಂಕಷ್ಟ ಎದುರಾಗಿದೆ. ಕೃಷ್ಣಾ ನದಿ ನೀರಿನ ಮಟ್ಟ ಕ್ಷಣ, ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಅನೇಗ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ರಾಯಬಾಗ, ಅಥಣಿ, ಕುಡಚಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅನೇಕ ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದು ಜನ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಬಣದ ರಸ್ತೆ ಸಂಪರ್ಕ …
Read More »ವಧು-ವರರ ಸಮಾವೇಶ 28ರಂದು
ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ-ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ …
Read More »ಹಿರಣ್ಯಕೇಶಿ ನದಿಯ ಸೇತುವೆಯಲ್ಲಿ ಸವಾರರ ಹುಚ್ಚಾಟ
ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ. ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.
Read More »ರಾಜ್ಯದ 1,351 ಗ್ರಾಮಗಳಲ್ಲಿ ಭೂಕುಸಿತ ಆತಂಕ;ಕೃಷ್ಣಬೈರೇಗೌಡ?
ಬೆಂಗಳೂರು: ಪಶ್ಚಿಮಘಟ್ಟ ವ್ಯಾಪ್ತಿಯ 250 ಗ್ರಾಮ ಪಂಚಾಯತ್‌ಗಳ 1,351 ಗ್ರಾಮಗಳ ಸೂಕ್ಷ್ಮ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆಯಿದೆ ಎಂದು ಕೇಂದ್ರದ ಭೂ ಸರ್ವೆಕ್ಷಣ ಇಲಾಖೆ ವರದಿ ನೀಡಿದ್ದು, ಮುಂಜಾಗ್ರತ ಕ್ರಮವಾಗಿ ಕುಸಿತ ಉಂಟಾಗುವ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಸೇರಿದಂತೆ ಅಗತ್ಯ ಪರಿಹಾರ ಕಾರ್ಯಾಚರಣೆಗಾಗಿ 100 ಕೋಟಿ ರೂ. ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಪಶ್ಚಿಮಘಟ್ಟ, ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಭೂ ಕುಸಿತಕ್ಕೆ ಕಾರಣವೇನು ? …
Read More »ESI ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮೊಸಳೆ ಮರಿ. ಸಿಬ್ಬಂದಿಗಳು ಕಕ್ಕಾಬಿಕ್ಕಿ
ದಾಂಡೇಲಿ : ನದಿಯಲ್ಲಿ, ನದಿಯ ಸುತ್ತಮುತ್ತ, ರಸ್ತೆಗಳಲ್ಲಿ ಮೊಸಳೆಗಳು ಅಡ್ಡಾಡುತ್ತಿರುವುದನ್ನು ಆಗೊಮ್ಮೆ ಈಗೊಮ್ಮೆ ನೋಡಿದ್ದೇವೆ. ಆದರೆ ಆಸ್ಪತ್ರೆಯ ಒಳಗಡೆ ಮೊಸಳೆಯ ಮರಿಯೊಂದು ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಘಟನೆ ದಾಂಡೇಲಿಯ ಇಎಸ್‌ಐ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯೊಳಗಡೆ ಪ್ರತ್ಯಕ್ಷವಾದ ಮೊಸಳೆಯ ಮರಿಯನ್ನು ನೋಡಿದೊಡನೆ ಸಿಬ್ಬಂದಿಗಳು ಒಮ್ಮೆಲೆ ಭಯ ಮತ್ತು ಅಚ್ಚರಿಗೊಂಡಿದ್ದಾರೆ. ತಕ್ಷಣವೆ ಇ.ಎಸ್.ಐ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ತುಕರಾಮ ಅವರು ಮೊಸಳೆಯ ಮರಿಯನ್ನು ಸುರಕ್ಷಿತವಾಗಿ ಹಿಡಿದು, ನದಿಗೆ ಬಿಟ್ಟು ಬಂದಿದ್ದಾರೆ. ಒಟ್ಟಿನಲ್ಲಿ …
Read More »ಹೊಂಡಕ್ಕೆ ಬಿದ್ದು ಮಹಿಳೆ ಆತ್ಮಹತ್ಯೆ
ಮುಂಡಗೋಡ: ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಸವನ ಹೊಂಡದಲ್ಲಿ ಜು. 23ರ ಮಂಗಳವಾರ ನಡೆದಿದೆ. ಪಟ್ಟಣದ ಅಂಬೇಡ್ಕರ್ ಓಣಿಯ ರುಕ್ಮಿಣಿ ನಾಗೇಂದ್ರ ವಡ್ಡರ(50) ಮೃತಪಟ್ಟ ಮಹಿಳೆ. ಮಹಿಳೆ (ಜು.23) ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಸವನ ಹೊಂಡದಲ್ಲಿ ಎಂಬಲ್ಲಿ ಹೊಂಡಕ್ಕೆ ಬಿದ್ದಿದ್ದಾರೆ. ಇದನ್ನು ನೋಡಿದ ಸಾರ್ವಜನಿಕರು ಆಕೆಯನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಅದಾಗಲೇ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದರು. ತಕ್ಷಣವೇ ಸಾರ್ವಜನಿಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ …
Read More »ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ
ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ ಹುಬ್ಬಳ್ಳಿ: ಇಲ್ಲಿನ ಈಶ್ವರನಗರದ ಶ್ರೀ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೆಂದ್ರಪ್ಪ ಮಹಾದೇವಪ್ಪ ವನಹಳ್ಳಿ (63) ಕೊಲೆ ಮಾಡಿದ ಹಂತಕನನ್ನು ಪೊಲೀಸರು ಘಟನೆ ನಡೆದ 24 ತಾಸಿನೊಳಗೆ ಬಂಧಿಸಿದ್ದಾರೆ. ಇಲ್ಲಿನ ಕಮರಿಪೇಟೆ ಜಿ. ಅಡ್ಡಾ ನಿವಾಸಿ, ಆಟೋ ರಿಕ್ಷಾ ಚಾಲಕ ಸಂತೋಷ ಬೋಜಗಾರ ಬಂಧಿತನಾದವ. ದೇವಪ್ಪಜ್ಜನ ಪೂಜಾ-ವಿಧಾನಗಳಿಂದಲೇ ನಾವು ಆರ್ಥಿಕವಾಗಿ ಹಾಳಾಗಲು, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿರುವುದಾಗಿ ಹೇಳಿ ಹತ್ಯೆ ಮಾಡಿರುವುದಾಗಿ ತನಿಖೆ …
Read More »ಮಾದಕ ವಸ್ತು ಮಾರುತ್ತಿದ್ದ ರಾಜಸ್ಥಾನ ಮೂಲದ ಐವರ ಬಂಧನ
ಹುಬ್ಬಳ್ಳಿ: ಅಫೀಮು ಮತ್ತು ಅಫೀಮು ಗಿಡದ ಪಾವಡರ್ ಪೊಪೆಸ್ಟ್ರಾ ಹೆಸರಿನ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಐವರನ್ನು ಕಸಬಾಪೇಟೆ ಪೊಲೀಸರು ಬಂಧಿಸಿ, ಅವರಿಂದ 150ಗ್ರಾಂ ಅಫೀಮು ಮತ್ತು 3ಕೆಜಿ ಅಫೀಮು ಗಿಡದ ಪೌಡರ್ ಪೊಪೆಸ್ಟ್ರಾ ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ರಾಜಸ್ಥಾನ ಮೂಲದವರಾದ ಶಿವಮೊಗ್ಗದ ಜುಗತರಾಮ ಪಟೇಲ್ , ಹೀಮಾ ಬಿಷ್ಣೋಯ್, ದನರಾಮ ಪಟೇಲ್, ಶ್ರವಣಕುಮಾರ ಬಿಷ್ಣೋಯ್, ಓಂಪ್ರಕಾಶ ಬಿಷ್ಣೋಯ್ …
Read More »