Breaking News

ರಾಷ್ಟ್ರೀಯ

*ಯುವತಿಯರ ಫೋಟೋ ಕ್ಲಿಕ್ಕಿಸಿ ಅಸಭ್ಯವಾಗಿ ಕಾಣುವಂತೆ ಪೋಸ್ಟ್ ಮಾಡುತ್ತಿದ್ದ ಆರೋಪಿ ಅರೆಸ್ಟ್

ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಕೆ.ಆರ್.ಪುರಂ ನ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಮುಗಿಸಿ ಕೆಲಸಕ್ಕಾಗಿ ಯತ್ನಿಸುತ್ತಿದ್ದ.ಇತ್ತೀಚೆಗೆ ಕಂಡ ಕಂಡ ಹುಡುಗಿಯರ ಫೋಟೋ ಕ್ಲಿಕ್ಕಿಸಿ ಅದನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾ …

Read More »

ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ

ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ: ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಲೋಂಡಾ ರೇಲ್ವೆ ಗೇಟ್ ಬಳಿ, ಗೋವಾಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 11 ಜಾನುವಾರುಗಳು ಸಿಕ್ಕಿಹಾಕಿಕೊಂಡಿದ್ದವು. ಸ್ಥಳಕ್ಕೆ ತಕ್ಷಣವೇ ಲೋಂಡಾ ಪೊಲೀಸ್ ಪಡೆ ಧಾವಿಸಿ, ಜೆಸಿಪಿ ಯಂತ್ರದ ಸಹಾಯದಿಂದ ಎಲ್ಲ ಜಾನುವಾರುಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಈ ಅಪಘಾತದ ಕುರಿತು ಲೋಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ

5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ 5 ಅಕ್ರಮ ಗಾಂಜಾ ಮಾರಾಟ ಪ್ರಕರಣಗಳನ್ನು ಬೇಧಿಸಿದ ಬೆಳಗಾವಿ ಪೊಲೀಸರು ಒಟ್ಟು 11 ಜನರನ್ನು ಬಂಧಿಸಿ ಒಟ್ಟು 1 ಲಕ್ಷ 3000 ರೂಪಾಯಿ ಮೌಲ್ಯದ 3 ಕಿಲೋ 132 ಗ್ರಾಂ. ಗಾಂಜಾ ಮತ್ತು 1 ಲಕ್ಷ 55 ಸಾವಿರ ಮೌಲ್ಯದ ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಲಹೊಂಗಲ ತಾಲೂಕಿನ ಮರಕಟ್ಟಿಯಲ್ಲಿ ಬೈಕ್’ನಲ್ಲಿ ಅನಧಿಕೃತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಂಜುನಾಥ ಕುರೇರನನ್ನು …

Read More »

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ …

Read More »

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲ ರೀತಿಯಲ್ಲೂ ಉತ್ತಮವಾಗಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಸುಬ್ರಹ್ಮಣ್ಯ(ದ.ಕನ್ನಡ): “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ನಡೆದ ಕಾನ್ಫೆರೆನ್ಸ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಮ್ ರೇಟ್ ಕಡಿಮೆಯಾಗಿರುವುದು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೇ ಎಲ್ಲ ಕಡೆ ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡ …

Read More »

ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ”

ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ” ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ ಬೆಳಗಾವಿ,ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು …

Read More »

ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದ ಜನಾರ್ದನ ರೆಡ್ಡಿ

ಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಾದ ನೀವು ಕಳಂಕ ಉಂಟು ಮಾಡಲು ಯತ್ನಿಸುತ್ತಿದ್ದೀರಿ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಅಧಿಕಾರಿಗಳನ್ನು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ …

Read More »

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ …

Read More »

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು, ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ …

Read More »