Breaking News

ರಾಷ್ಟ್ರೀಯ

ಭಾರತಕ್ಕೆ​ ಒಲಿಯಿತು ಮೊದಲ ಕಂಚು

ಪ್ಯಾರಿಸ್​: ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪಿಸ್ತೂಲ್​ ದೋಷದಿಂದ ಹಿನ್ನಡೆ ಅನುಭವಿಸಿದ್ದ ಶೂಟರ್​ ಮನು ಭಾಕರ್(Manu Bhaker)​ ಇದೀಗ ಪ್ಯಾರಿಸ್(Paris Olympics Shooting)​ ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪದಕವೊಂದನ್ನು ಗೆದ್ದು ಸಂಭ್ರಮಿಸಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್​ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಒಲಿದ ಮೊದಲ ಪದಕ. ಕೊರಿಯಾದ ಶೂಟರ್​ಗಳಾದ ಓಹ್ ಯೇ ಜಿನ್(243.2), ಕಿಮ್​ ಯೆಜಿ(241.3) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ …

Read More »

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ! ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ …

Read More »

ಅಂದು ಕಾನ್‌ಸ್ಟೆಬಲ್, ಇಂದು ರಾಣೆಬೆನ್ನೂರು ಪೌರಾಯುಕ್ತ

ಹಾವೇರಿ: ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ಫಕ್ಕೀರಪ್ಪ ಇ. ಇಂಗಳಗಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ಮಾಡುತ್ತಿದ್ದ ಇಂಗಳಗಿ ಅವರನ್ನು ರಾಣೆಬೆನ್ನೂರು ನಗರಸಭೆಯ ನೂತನ ಪೌರಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.   ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದ ಫಕ್ಕೀರಪ್ಪ, ಸ್ವಂತ ಊರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದಾರೆ. ನಂತರ, ಕುಂದಗೋಳ …

Read More »

ರಾಣೆಬೆನ್ನೂರು | ಯೂರಿಯಾ ಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ; ರೈತರ ಆಕ್ರೋಶ

ರಾಣೆಬೆನ್ನೂರು: ‘ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ಬೆಳೆಗಳಿಗೆ ಮೇಲು ಗೊಬ್ಬರವಾಗಿ ನೀಡಲು ಯೂರಿಯಾ ಗೊಬ್ಬರ ಅತ್ಯವಶ್ಯ. ಸರ್ಕಾರ ಯೂರಿಯಾ ಗೊಬ್ಬರ ಪೂರೈಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ನಗರದ ಆಗ್ರೋ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರ ₹266 ಇದ್ದರೂ, ವ್ಯಾಪಾರಸ್ಥರು ₹ 300 ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಕೃಷಿ ಅಧಿಕಾರಿಗಳು ಕ್ರಮಕೈಗೊಂಡಿಲ್ಲ’ ಎಂದು ತಾಲ್ಲೂಕಿನ ಹುಲ್ಲತ್ತಿ ಗ್ರಾಮದ ಜಗದೀಶ ಕೆರೂಡಿ ಆರೋಪಿಸಿದ್ದಾರೆ. …

Read More »

ಬೆಳಗಾವಿ | ಮನೆಗಳು ಜಲಾವೃತ: ಕಾಳಜಿ ಕೇಂದಲ್ಲಿ ಆಶ್ರಯ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಶನಿವಾರ ಮಳೆ ಅಬ್ಬರ ತುಸು ತಗ್ಗಿದೆ. ಅಣೆಕಟ್ಟೆಗಳಿಂದ ನಿರಂತರ ನೀರು ಹರಿಸುತ್ತಿರುವ ಕಾರಣ, ಜಿಲ್ಲೆಯ 41 ಸೇತುವೆಗಳು ಇನ್ನೂ ನೀರಿನಲ್ಲಿ ಮುಳುಗಿವೆ. ಅಂದಾಜು 700ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಹುಕ್ಕೇರಿ ತಾಲ್ಲೂಕಿನ ಹೆಬ್ಬಾಳ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಮೇಲೆ ಅಪಾರ ಪ್ರಮಾಣ ನೀರು ಹರಿಯಿತು. ಇದರಿಂದ ಕೆಲ ಸಮಯ ಸಂಚಾರ ಬಂದ್ ಆಯಿತು. ಹೆದ್ದಾರಿ ಮೇಲೆಯೇ ಮಣ್ಣು-ಕಲ್ಲು ಸುರಿದು ಅದರ ಮೇಲೆ …

Read More »

ಕಾಗವಾಡ | ಪ್ರವಾಹ: ಐದು ಪ್ರಮುಖ ರಸ್ತೆಗಳು ಮುಳುಗಡೆ

ಕಾಗವಾಡ: ತಾಲ್ಲೂಕಿನ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗುತ್ತಿದ್ದು, ಪ್ರಮುಖ ಐದು ರಸ್ತೆಗಳ ಮೇಲೆ ನದಿಯ ನೀರು ಹರಿಯುತ್ತಿದ್ದರಿಂದ ಸಂಚಾರ ಬಂದ್‌ ಮಾಡಲಾಗಿದೆ. ತಾಲ್ಲೂಕಿನ ಅಥಣಿ-ಕಾತ್ರಾಳ, ಉಗಾರ ಬಿ.ಕೆ. ಕುಸುನಾಳ, ಉಗಾರ ಬಿ.ಕೆ- ಶಿರಗುಪ್ಪಿ,ಕಾತ್ರಾಳ-ಬಣಜವಾಡ, ಮೋಳವಾಡ-ಇಂಗಳಿ ರಸ್ತೆಗಳು ಜಲಾವೃತ ಆಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾಗವಾಡ ಪಿಎಸ್‌ಐ ಎಂ.ಬಿ. ಬಿರಾದಾರ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಿ ಸಂಚಾರ ಬಂದ್‌ ಮಾಡಿದ್ದಾರೆ. ತಾಲ್ಲೂಕಿನ ನದಿ ತೀರದ ಗ್ರಾಮಗಳಾದ ಕಾತ್ರಾಳ, ಐನಾಪುರ, …

Read More »

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹3,252 ಕೋಟಿ ನಿವ್ವಳ ಲಾಭ

ನವದೆಹಲಿ: 2024-25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ), ₹3,252 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಎರಡು ಪಟ್ಟು ಏರಿಕೆಯಾಗಿದೆ. 2023-24ನೇ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹1,255 ಕೋಟಿ ಲಾಭಗಳಿಸಲಾಗಿತ್ತು. ವಸೂಲಾಗದ ಸಾಲದ ‍ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೊತೆಗೆ, ಬಡ್ಡಿ ವರಮಾನದಲ್ಲಿ ಏರಿಕೆಯಾಗಿದೆ. ಹಾಗಾಗಿ, ಈ ತ್ರೈಮಾಸಿಕದಲ್ಲಿ ಲಾಭ ಹೆಚ್ಚಳವಾಗಿದೆ ಎಂದು ಬ್ಯಾಂಕ್‌, ಶನಿವಾರ ತಿಳಿಸಿದೆ. …

Read More »

ಮಾರುತಿ ಸುಜುಕಿಗೆ 779 ಕೋಟಿ ಐ.ಟಿ ಇಲಾಖೆ ನೋಟಿಸ್‌

ನವದೆಹಲಿ: 2019-20ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ₹779 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೇಶದ ಪ್ರಮುಖ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ಗೆ, ಆದಾಯ ತೆರಿಗೆ ಇಲಾಖೆಯು ಷೋಕಾಸ್‌ ನೋಟಿಸ್‌ ನೀಡಿದೆ. ‘ಈ ಮೊತ್ತದಲ್ಲಿ ಬಡ್ಡಿಯೂ ಸೇರಿದೆ. ತೆರಿಗೆ ಪಾವತಿ ಬಾಕಿ ಸಂಬಂಧ ಕಂಪನಿ ವಿರುದ್ಧ ದಂಡಾರ್ಹ ಪ್ರಕ್ರಿಯೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಈ ನೋಟಿಸ್‌ ನೀಡಲಾಗಿದೆ’ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.  

Read More »

ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಮೀಪದ ಕೃಷ್ಣಾ ನದಿಯಲ್ಲಿ ದಿನದಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಶನಿವಾರ ಹಿಪ್ಪರಗಿ ಜಲಾಶಯಕ್ಕೆ 2,28,056 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುರಿಂದ ಅವಳಿ ರಬಕವಿ-ಬನಹಟ್ಟಿ ನಗರಗಳಿಗೆ ನೀರು ಪೂರೈಸುವ ಜಾಕವೆಲ್‌ಗಳಿಗೆ ಹೋಗುವ ಮಾರ್ಗ ಬಂದಾಗಿದೆ. ಸದ್ಯ ಜಾಕವೆಲ್‌ಗಳು ಸಂಪೂರ್ಣವಾಗಿ ನಡುಗಡ್ಡೆಗಳಾಗಿವೆ. ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ …

Read More »

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ   ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ ಕುಟುಂಬಗಳು ಕಟ್ಟಬೇಕಿದ್ದ 1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ …

Read More »