Breaking News

ರಾಷ್ಟ್ರೀಯ

ಭಾರತದಲ್ಲಿ ಎಲ್ಲಾ ಮಾದರಿಗಳ ‘ಐಫೋನ್’ ಬೆಲೆ ಇಳಿಕೆ

ನವದೆಹಲಿ : ಐಫೋನ್ ಖರೀದಿದಾರರಿಗೆ ಆಪಲ್ ಸಿಹಿ ಸುದ್ದಿ ನೀಡಿದೆ. ಭಾರತದಲ್ಲಿ ತನ್ನ ಐಫೋನ್ ಶ್ರೇಣಿಯ ಬೆಲೆಗಳನ್ನ ಕಡಿತಗೊಳಿಸಿದೆ. ಭಾರತದ ಇತ್ತೀಚಿನ ಬಜೆಟ್ ಘೋಷಣೆಯ ಹಿನ್ನೆಲೆಯಲ್ಲಿ ಬೆಲೆ ಕಡಿತ ಬಂದಿದೆ. ಆಮದು ಮಾಡಿಕೊಳ್ಳುವ ಮೊಬೈಲ್ ಫೋನ್ಗಳು ಮತ್ತು ಬಿಡಿಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನ (BCD) 20% ರಿಂದ 15%ಕ್ಕೆ ಇಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಕೇಂದ್ರ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಗಮನಾರ್ಹವಾಗಿ, ಆಪಲ್ ಭಾರತೀಯ …

Read More »

ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ

ಸುಲ್ತಾನಪುರ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶದಲ್ಲಿ ಇಂದು ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ದಿಢೀರ್ ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಇಂದು ಹಾಜರಾದರು. ಅಲ್ಲಿಂದ ಲಖನೌಗೆ ಹಿಂತಿರುಗುವ ವೇಳೆ ವಿಧಾಯಕ ನಗರದಲ್ಲಿ ಚಮ್ಮಾರನ ಅಂಗಡಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ …

Read More »

ಉಕ್ಕಿ ಹರಿಯುತ್ತಿದೆ ವೇದಗಂಗಾ ನದಿ

ನಿಪ್ಪಾಣಿ: ವೇದಗಂಗಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುನ್ನರಗಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನವೇ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂಜೆಯವರೆಗೆ ಸುಮಾರು 40ಕ್ಕೂ ಅಧಿಕ ಕುಂಟುಂಬಗಳು ಜಾನುವಾರುಗಳ ಸಮೇತ ಸ್ಥಳಾಂತರಣೆ ಮಾಡಿದ್ದು 50ಕ್ಕೂ ಅಧಿಕ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ಹುನ್ನರಗಿ ಗ್ರಾಮದ 41 ಕುಟುಂಬಗಳಲ್ಲಿಯ ಒಟ್ಟು 89 ಜನರಿಗೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 26 ಕುಟುಂಬಗಳು ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಸ್ಥಾಪಿಸಿದ ಗಂಜಿ ಕೇಂದ್ರದಲ್ಲಿ …

Read More »

ಕಚೇರಿ ಒಳಗಡೆ ಕೊಡೆ ಹಿಡಿದು ಕೆಲಸ ಮಾಡುವ ಸಿಬ್ಬಂದಿ;

ಹಾವೇರಿ: ನಿರಂತರ ಮಳೆಯಿಂದಾಗಿ ಇಲ್ಲಿನ ತಹಸೀಲ್ದಾರ್ ಕಚೇರಿ ಮಾಳಿಗೆ ಸೋರುತ್ತಿದ್ದು, ಇದರಿಂದ ರಕ್ಷಿಸಿಕೊಳ್ಳಲು ಇಲ್ಲಿನ ಸಿಬ್ಬಂದಿ ಶುಕ್ರವಾರ ಛತ್ರಿ ಹಿಡಿದುಕೊಂಡೇ ಕೆಲಸ ಮಾಡಬೇಕಾದ ದುಸ್ಥಿತಿ ಎದುರಾಗಿತ್ತು. ಹೌದು…ಎರಡು ವಾರಗಳಿಂದ ಸುರಿಯುತ್ತಿರುವ ಮಳೆಗೆ ಕಟ್ಟಡದ ನೆಲ ಮಹಡಿವರೆಗೂ ಸೋರಿಕೆ ಉಂಟಾಗಿದೆ. ಇದರಿಂದ ರಕ್ಷಿಸಿಕೊಳ್ಳಲು ಇಲ್ಲಿನ ಸಿಬ್ಬಂದಿ ಛತ್ರಿ ಹಿಡಿದುಕೊಂಡು ಹರಸಾಹಸ ಮಾಡುವಂತಾಗಿದೆ. ಮಹತ್ವದ ದಾಖಲೆಗಳು, ಕಂಪ್ಯೂಟರ್ ರಕ್ಷಿಸಿಕೊಳ್ಳುವುದೇ ಇಲ್ಲಿನ ಸಿಬ್ಬಂದಿಗೆ ದೊಡ್ಡ ಸವಾಲಾಗಿದೆ. ಮಳೆ ನೀರು ಸೋರಿಕೆಯಿಂದ ಆದಾಯ, ಜಾತಿ, ಆಸ್ತಿ ಪತ್ರಗಳು …

Read More »

ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಸಂಸದರ ಪ್ರತಿಭಟನೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (MUDA) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾದಿರುವುದನ್ನು ಖಂಡಿಸಿ ಶುಕ್ರವಾರ ಸಂಸತ್ ಭವನದ ಆವರಣದಲ್ಲಿ ಕರ್ನಾಟಕದ NDA ಸಂಸದರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು. ಕರ್ನಾಟಕದ ಬಿಜೆಪಿ ಮತ್ತು ಜೆಡಿಎಸ್ ನ ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದರು. …

Read More »

ಮೂಡಲಗಿ: ನದಿ ನೀರಿನಲ್ಲಿ ಕಬ್ಬಿನ ಬೆಳೆ

ಮೂಡಲಗಿ: ಹಿಡಕಲ್‌ ಜಲಾಶಯದಿಂದ ಘಟಪ್ರಭಾ ನದಿಗೆ ಬುಧವಾರ ಮಧ್ಯಾಹ್ನ ನೀರು ಬಿಟ್ಟಿದ್ದರಿಂದ ಗುರುವಾರ ಬೆಳಿಗ್ಗೆಯಿಂದ ತಾಲ್ಲೂಕಿನ ಮಸಗುಪ್ಪಿ, ಸುಣಧೋಳಿ, ಕಮಲದಿನ್ನಿ, ಅವರಾಧಿ, ಢವಳೇಶ್ವರ ಗ್ರಾಮಗಳ ಬಳಿಯಲ್ಲಿ ನದಿ ನೀರಿನ ಹರಿವು ವಿಸ್ತಾರಗೊಂಡು ಸಾವಿರಾರು ಎಕರೆಯಷ್ಟು ಕಬ್ಬಿನ ಬೆಳೆ ನೀರಿನಲ್ಲಿ ನಿಂತಿದೆ. ಪ್ರವಾಹ ಭೀತಿ ಇರುವ ತೋಟಪಟ್ಟಿಗಳಲ್ಲಿ ವಾಸವಾಗಿರುವ ಜನರು ಜಾನುವಾರು ಸಹಿತಿ ಸುರಕ್ಷಿತ ಸ್ಥಳಕ್ಕೆ ಬೆಳಿಗ್ಗೆಯಿಂದ ತೆರಳುತ್ತಿದ್ದಾರೆ. ಪ್ರವಾಹ ಸಮಸ್ಯೆ ನಿರ್ವಹಣೆಗೆ ನೋಡೆಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶೀಲ್ದಾರ್ ಮಹಾದೇವ ಸನ್ನಮುರೆ …

Read More »

ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ರ್‍ಯಾಲಿ. ಮತ್ತೆ ಜೈಲುಪಾಲಾದ

ಮುಂಬೈ: ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರೋಡೆಕೋರನೊಬ್ಬ ಜೈಲಿನಿಂದ ಬಿಡುಗಡೆಗೊಂಡ ಕೆಲವೇ ದಿನದಲ್ಲಿ ಮತ್ತೆ ಜೈಲು ಪಾಲಾಗಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಅಂದಹಾಗೆ ಈ ದರೋಡೆಕೋರನನ್ನು ಸುಖಾಸುಮ್ಮನೆ ಜೈಲಿಗೆ ಹಾಕಿಲ್ಲ ಇದರ ಹಿಂದೆ ಒಂದು ಕತೆ ಇದೆ.   ಮಹಾರಾಷ್ಟ್ರದ ನಾಸಿಕ್‌ ಮೂಲದ ದರೋಡೆಕೋರನಾಗಿರುವ ಹರ್ಷದ್ ಪಾಟಂಕರ್ ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಇದೆ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಇತ್ತ ಜೈಲಿನಿಂದ ಬಿಡುಗಡೆಗೊಳ್ಳುತ್ತಿರುವ ವಿಚಾರ ಆತನ ಬೆಂಬಲಿಗರಿಗೆ …

Read More »

ಲಿಂಗನಮಕ್ಕಿಯಲ್ಲಿ ಭಾರೀ ಒಳಹರಿವು: ಗಂಗೆ ಪೂಜೆ

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ಒಳಹರಿವು ಬರುತ್ತಿದ್ದು 1804.80 ಅಡಿಗೆ ತಲುಪಿದೆ. ಜಲಾಶಯ ನೀರಿನ ಮಟ್ಟವು ಈಗಾಗಲೇ ಗೇಟ್ ಮಟ್ಟ ತಲುಪಿದ್ದು ಸಂಪ್ರದಾಯದಂತೆ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಶುಕ್ರವಾರ ಗಂಗೆ ಪೂಜೆ ನೆರವೇರಿಸಿದರು. ನಂತರ ಕೆಲ ನಿಮಿಷಗಳ ಕಾಲ ಗೇಟ್ ಮೂಲಕ ನೀರು ಹೊರಬಿಡಲಾಯಿತು. ರಾಜ್ಯಕ್ಕೆ ಅತಿ ಕಡಿಮೆ ವೆಚ್ಚದಲ್ಲಿ ಜಲ ವಿದ್ಯುತ್ ಪೂರೈಸುವ ಏಕೈಕ ಜಲಾಶಯ ಇದಾಗಿದ್ದು ಶುಕ್ರವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 1804.40 ಅಡಿ ತಲುಪಿತ್ತು. …

Read More »

ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ:C.M.

ಬೆಂಗಳೂರು, ಜುಲೈ 26: ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದು ಮನೆಮುರುಕ ರಾಜಕೀಯ. ಮುಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್‌ಗಳೆರಡೂ ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ. …

Read More »

ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಡ್ಯಾಂ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರದಂದು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿರುವ ಅವರು, ಸಂಭಾವ್ಯ ಪ್ರವಾಹವನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚುತ್ತಿರುವ ಧಾರಾಕಾರ …

Read More »