ಪುಣೆ: ಅಗತ್ಯವೆನಿಸಿದರೆ ಪುಣೆಯಲ್ಲಿ ಮಳೆ ಸಂತ್ರಸ್ತರನ್ನು ವಾಯು ಮಾರ್ಗದ ಮೂಲಕ ಸ್ಥಳಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. ಪುಣೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಪುಣೆ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ನೆರೆಯ ಪಿಂಪ್ರಿ ಚಿಂಚ್ವಾಡ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಶಿಂದೆ, ಸ್ಥಳಾಂತರ ಕಾರ್ಯಗಳಿಗೆ ನೆರವಾಗುವಂತೆ ಸೇನೆ ಹಾಗೂ ರಾಷ್ಟ್ರೀಯ …
Read More »ಮಹಾರಾಷ್ಟ್ರದ ಕೆಲವೆಡೆ ರೆಡ್ ಅಲರ್ಟ್ ಘೋಷಣೆ
ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಂದು (ಗುರುವಾರ) ನಗರದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ. ಮುಂಬೈ ನಗರ, ಥಾಣೆ ಮತ್ತು ರಾಯಗಢ, ಪಾಲ್ಘರ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ಗುರುವಾರ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ …
Read More »ಹದಗೆಟ್ಟ ಕೇಜ್ರಿವಾಲ್ ಆರೋಗ್ಯ
ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಇದನ್ನು ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟವು ಜುಲೈ 30ರಂದು ಜಂತರ್ ಮಂತರ್‌ನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ. ‘ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಜ್ರಿವಾಲ್ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ …
Read More »ಮೈದುಂಬಿ ಹರಿಯುತ್ತಿರುವ ಮಲಪ್ರಭೆ
ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ. ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ.ಹುಬ್ಬಳ್ಳಿ ಬಳಿಯ …
Read More »ಜಿಲ್ಲೆಯಲ್ಲಿ ಮುಂದುವರೆದ ಮಳೆ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ: ಸತೀಶ ಜಾರಕಿಹೊಳಿ
ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿರುವ ಕಾರಣ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶ್ರೀ ಸತೀಶ ಜಾರಕಿಹೊಳಿ ರವರು ರಾಯಬಾಗ ತಾಲೂಕಿನ ಕುಡಚಿ ಸೇತುವೆ, ಹಳೆ-ದಿಗ್ಗೇವಾಡಿ ಮತ್ತಿತರ ಪ್ರವಾಹ ಪ್ರದೇಶಗಳ ವೀಕ್ಷಣೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪರೀಕ್ಷಾರ್ಥ ಐ.ಎ.ಎಸ್. ಅಧಿಕಾರಿ ಹಾಗೂ ಇತರೆ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ಹಾಜರಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು …
Read More »ಗಡ್ಕರಿ,ಕೋರೆ ಭೇಟಿ: ಚರ್ಚೆ
ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಭೇಟಿಯಾಗಿ, ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಿದರು. ‘ಅಥಣಿ ತಾಲ್ಲೂಕಿನ ಮುರಗುಂಡಿಯಿಂದ ಕಾಗವಾಡ, ಚಿಕ್ಕೋಡಿ ಮಾರ್ಗವಾಗಿ ಗೋಟೂರವರೆಗೆ (87 ಕಿ.ಮೀ) ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಶಿರಗುಪ್ಪಿಯಿಂದ ಅಂಕಲಿಯವರೆಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಂಜೂರುಗೊಳಿಸಿರುವುದು ಸ್ವಾಗತಾರ್ಹ. ಈ ಕಾಮಗಾರಿ ಬೇಗ ಆರಂಭಿಸಬೇಕು’ ಎಂದು ಕೋರಿದರು. ‘ನವೀಕರಿಸಬಹುದಾದ ಎಥೆನಾಲ್ ಬಳಕೆಯಿಂದ ರೈತರಿಗೆ …
Read More »UPSC, SSC ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ಕೇಂದ್ರ ಸರ್ಕಾರ
ನವದೆಹಲಿ: ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ), ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಮತ್ತು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕಳೆದ ಎರಡು ವರ್ಷಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಯಾವುದೇ ಪ್ರಕರಣ ವರದಿಯಾಗಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜೀತೇಂದ್ರ ಸಿಂಗ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು …
Read More »ಹುಬ್ಬಳ್ಳಿ: ರೈತರಿಗೆ ನೆರವಾದ ‘ಕೃಷಿ ಸಿಂಚಾಯಿ’
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆಗೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023-24ರ ಸಾಲಿನಲ್ಲಿ 11,143 ಜನ ರೈತರು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 8,009 ರೈತರಿಗೆ ಯೋಜನೆಯ ಲಾಭ ದಕ್ಕಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದು ಅತ್ಯಧಿಕವಾಗಿದೆ. ಉತ್ತಮ ಇಳುವರಿ ಪಡೆಯಲು ಹಾಗೂ ಬೆಳೆಗೆ ಆಗುವ ನೀರಿನ ತೊಂದರೆ ನೀಗಿಸಲು 2015ರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಲಾಭ ಪಡೆಯುತ್ತಿರುವ ರೈತರ ಸಂಖ್ಯೆ ವರ್ಷದಿಂದ …
Read More »ಕೃಷ್ಣಾ ನದಿ ನೀರು ; ಆತಂಕದಲ್ಲಿ ಜನರು
ಬೆಳಗಾವಿ : ನಿರಂತರ ಮಳೆಯಿಂದ ಕಂಗಾಲಾಗಿರುವ ಜನರಿಗೆ ಈಗ ಪ್ರವಾಹದ ಸಂಕಷ್ಟ ಎದುರಾಗಿದೆ. ಕೃಷ್ಣಾ ನದಿ ನೀರಿನ ಮಟ್ಟ ಕ್ಷಣ, ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಅನೇಗ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ರಾಯಬಾಗ, ಅಥಣಿ, ಕುಡಚಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅನೇಕ ಗ್ರಾಮಗಳು ಸಂಪರ್ಕ ಕಳೆದುಕೊಂಡಿದ್ದು ಜನ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಬಣದ ರಸ್ತೆ ಸಂಪರ್ಕ …
Read More »ವಧು-ವರರ ಸಮಾವೇಶ 28ರಂದು
ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ-ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ …
Read More »
Laxmi News 24×7