ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ …
Read More »ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!
ಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಈ ಕುರಿತು ಎಸ್ಪಿ ಡಾ. ಬಿ. ಟಿ. ಕವಿತಾ ಅವರು ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ನಂತರ ನಮ್ಮ ಠಾಣಾ ವ್ಯಾಪ್ತಿಗೆ ಬಂದಿದ್ದರಿಂದಾಗಿ ನಾವು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದೆವು. ಅಲ್ಲಿ ಶುಭಾ(38) ಎಂಬ ಮಹಿಳೆ ಮನೆ ಮುಂದೆ ಕೊಲೆಯಾಗಿ ಬಿದ್ದಿದ್ದರು ಎಂದು ತಿಳಿಸಿದರು.ಮೃತ ಮಹಿಳೆ …
Read More »ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ!
ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ! ಅಥಣಿ, ಜುಲೈ 2:ತಾಲೂಕಿನ ಹಲವು ಸರಕಾರಿ ಶಾಲೆಗಳಲ್ಲಿ ಹಾಜರಾತಿ ತಪ್ಪಿಸುತ್ತಿರುವ ಹಾಗೂ ಕರ್ತವ್ಯ ಮರೆತ ಶಿಕ್ಷಕರು, ಈ ಬಾರಿ ತರಗತಿ ಕೊಠಡಿಗೆ ಅಲ್ಲ, ಬದಲಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾಗಿ ಗಮನಸೆಳೆದಿದ್ದಾರೆ. ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೊಸ ಬಿಇಒ ಎಂ. ಆರ್. ಮುಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರನ್ನು ಅಭಿನಂದಿಸಲು ಹಲವಾರು ಶಾಲೆಗಳ …
Read More »ಇನ್ನೂ ಎರಡು ದಿನ ಮಹಾಮಳೆ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ (ಜು.7) ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಗಂಟೆಗೆ 30 ರಿಂದ 40 …
Read More »ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.
ರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. ತಕ್ಷಣವೇ ರೈಲು ನಿಲ್ಲಿಸಿದ ಪೈಲಟ್ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ (ಹಿಂದಿನ ರಾಮನಗರ) ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ಮೈಸೂರಿನಿಂದ ರಾಜಸ್ಥಾನದ ಉದಯಪುರಕ್ಕೆ ರೈಲು ತೆರಳುತ್ತಿತ್ತು. ಈ ವೇಳೆ ರೈಲಿನ ಇಂಜಿನ್ನಲ್ಲಿ ಹಠಾತ್ ಬೆಂಕಿ ಕಾಣಿಸಿದೆ. ಮುಂದಿನ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ತಕ್ಷಣವೇ ಸಮಯಪ್ರಜ್ಞೆ ಮೆರೆದ ಚಾಲಕ …
Read More »ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್ಗೆ ಸೂಚನೆ
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಿದ್ದ ಆದೇಶವನ್ನು ರದ್ದು ಮಾಡಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ)ಯ ಆದೇಶ ಪ್ರಶ್ನಿಸಿ, ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿಯವರೆಗೂ ವಿಕಾಸ್ ಕುಮಾರ್ ಅವರು ಕರ್ತವ್ಯಕ್ಕೆ ಮರು ನೇಮಕಕ್ಕೆ ಒತ್ತಾಯಿಸಬಾರದು ಎಂದು ಹೈಕೋರ್ಟ್ ಇಂದು ಮೌಖಿಕವಾಗಿ ಸೂಚನೆ ನೀಡಿತು. ವಿಕಾಸ್ ಕುಮಾರ್ ಅವರ ಅಮಾನತು ಆದೇಶ ರದ್ದುಪಡಿಸಿದ್ದ ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ …
Read More »ಶ್ವಾಸನಾಳದಲ್ಲಿ ಸಿಲುಕಿದ್ದ ಕಡಲೆ ತುಣಕು
ಮಂಗಳೂರು: ಹಲವು ತಿಂಗಳಿನಿಂದ ಅಸ್ತಮಾ ಎಂದುಕೊಂಡು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ವೈದ್ಯರು ಯಶಸ್ವಿ ಚಿಕಿತ್ಸೆ ನೀಡಿ ಗುಣಪಡಿಸಿದ್ದಾರೆ. ಅಸ್ತಮಾ ಅಥವಾ ಯಾವುದೇ ಅಲರ್ಜಿಯ ಲಕ್ಷಣ ಹೊಂದಿರದ 50 ವರ್ಷದ ವ್ಯಕ್ತಿಯೊಬ್ಬರು ಕಳೆದ 6 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಉಬ್ಬಸ ಸಮಸ್ಯೆಯನ್ನು ಅಸ್ತಮಾ ಎಂದು ತಿಳಿದು ಸಾಕಷ್ಟು ಕಡೆ ಚಿಕಿತ್ಸೆ, ಬ್ರೊಂಕೊಡೈಲೇಟರ್ ಥೆರಪಿ ಪಡೆದರೂ ಸಮಸ್ಯೆಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಆದರೆ ಈಗ ಕೆಎಂಸಿ ಆಸ್ಪತ್ರೆಯ …
Read More »ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ
ಬೆಳಗಾವಿ: 2025ರ ಡಿಸೆಂಬರ್ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ ರಚನೆ ಮರೀಚಿಕೆ ಆಗುತ್ತದೆ. ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಜಿಲ್ಲೆಯ ಇಬ್ಬರು ಸಚಿವರು ಜನರ ಮೂಗಿಗೆ ತುಪ್ಪ ಹಚ್ಚುವುದನ್ನು ಬಿಟ್ಟು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು. ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಜನಗಣತಿ ಇಲಾಖೆ ಒಂದು ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳ …
Read More »ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ
ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿಯಾಗಿದ್ದರು
Read More »ಗಮನ ಸೆಳೆದ ಕೇರಳದ ಕೊಟ್ಟಿಯೂರು ಕ್ಷೇತ್ರ
ಬಂಟ್ವಾಳ(ದಕ್ಷಿಣ ಕನ್ನಡ): ಈ ವರ್ಷ ಇದ್ದಕ್ಕಿದ್ದಂತೆ ಕೇರಳದ ಪುಣ್ಯಕ್ಷೇತ್ರವೊಂದು ಗಮನ ಸೆಳೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಕ್ರೇಜ್ ಸೃಷ್ಟಿಸಿದೆ. ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವರ್ಷಕ್ಕೊಂದು ಬಾರಿ 27 ದಿನಗಳ ವೈಶಾಖ ಮಹೋತ್ಸವ ನಡೆಯುತ್ತದೆ. ಈ ವರ್ಷ ಕೊಟ್ಟಿಯೂರಿನ ವೈಶಾಖ ಮಹೋತ್ಸವ ಭಾರೀ ಸಂಚಲನ ಮೂಡಿಸಿದೆ. ದಕ್ಷಯಜ್ಞದ ಪುರಾಣ ಕಥೆಯೊಂದಿಗೆ ಸಂಬಂಧ ಇರುವ ಕೊಟ್ಟಿಯೂರು ಸನ್ನಿಧಿಯಲ್ಲಿ ಸ್ಥಾವರ ರೂಪದ ಶಾಶ್ವತ ದೇವಸ್ಥಾನಗಳಿಲ್ಲ. ವೈಶಾಖ ಮಹೋತ್ಸವಕ್ಕಾಗಿ ಪ್ರಕೃತಿದತ್ತವಾದ …
Read More »