ಹಾವೇರಿ: ನಿರಂತರ ಮಳೆಯಿಂದಾಗಿ ಇಲ್ಲಿನ ತಹಸೀಲ್ದಾರ್ ಕಚೇರಿ ಮಾಳಿಗೆ ಸೋರುತ್ತಿದ್ದು, ಇದರಿಂದ ರಕ್ಷಿಸಿಕೊಳ್ಳಲು ಇಲ್ಲಿನ ಸಿಬ್ಬಂದಿ ಶುಕ್ರವಾರ ಛತ್ರಿ ಹಿಡಿದುಕೊಂಡೇ ಕೆಲಸ ಮಾಡಬೇಕಾದ ದುಸ್ಥಿತಿ ಎದುರಾಗಿತ್ತು. ಹೌದು…ಎರಡು ವಾರಗಳಿಂದ ಸುರಿಯುತ್ತಿರುವ ಮಳೆಗೆ ಕಟ್ಟಡದ ನೆಲ ಮಹಡಿವರೆಗೂ ಸೋರಿಕೆ ಉಂಟಾಗಿದೆ. ಇದರಿಂದ ರಕ್ಷಿಸಿಕೊಳ್ಳಲು ಇಲ್ಲಿನ ಸಿಬ್ಬಂದಿ ಛತ್ರಿ ಹಿಡಿದುಕೊಂಡು ಹರಸಾಹಸ ಮಾಡುವಂತಾಗಿದೆ. ಮಹತ್ವದ ದಾಖಲೆಗಳು, ಕಂಪ್ಯೂಟರ್ ರಕ್ಷಿಸಿಕೊಳ್ಳುವುದೇ ಇಲ್ಲಿನ ಸಿಬ್ಬಂದಿಗೆ ದೊಡ್ಡ ಸವಾಲಾಗಿದೆ. ಮಳೆ ನೀರು ಸೋರಿಕೆಯಿಂದ ಆದಾಯ, ಜಾತಿ, ಆಸ್ತಿ ಪತ್ರಗಳು …
Read More »ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಸಂಸದರ ಪ್ರತಿಭಟನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (MUDA) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು ಮಾದಿರುವುದನ್ನು ಖಂಡಿಸಿ ಶುಕ್ರವಾರ ಸಂಸತ್ ಭವನದ ಆವರಣದಲ್ಲಿ ಕರ್ನಾಟಕದ NDA ಸಂಸದರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು. ಕರ್ನಾಟಕದ ಬಿಜೆಪಿ ಮತ್ತು ಜೆಡಿಎಸ್ ನ ಎರಡೂ ಸದನಗಳ ಸಂಸದರು ದೆಹಲಿಯಲ್ಲಿ ಸರ್ಕಾರದ ಅಕ್ರಮಗಳನ್ನು ಪ್ರತಿಭಟಿಸುವ ಮೂಲಕ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿದರು. …
Read More »ಮೂಡಲಗಿ: ನದಿ ನೀರಿನಲ್ಲಿ ಕಬ್ಬಿನ ಬೆಳೆ
ಮೂಡಲಗಿ: ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಬುಧವಾರ ಮಧ್ಯಾಹ್ನ ನೀರು ಬಿಟ್ಟಿದ್ದರಿಂದ ಗುರುವಾರ ಬೆಳಿಗ್ಗೆಯಿಂದ ತಾಲ್ಲೂಕಿನ ಮಸಗುಪ್ಪಿ, ಸುಣಧೋಳಿ, ಕಮಲದಿನ್ನಿ, ಅವರಾಧಿ, ಢವಳೇಶ್ವರ ಗ್ರಾಮಗಳ ಬಳಿಯಲ್ಲಿ ನದಿ ನೀರಿನ ಹರಿವು ವಿಸ್ತಾರಗೊಂಡು ಸಾವಿರಾರು ಎಕರೆಯಷ್ಟು ಕಬ್ಬಿನ ಬೆಳೆ ನೀರಿನಲ್ಲಿ ನಿಂತಿದೆ. ಪ್ರವಾಹ ಭೀತಿ ಇರುವ ತೋಟಪಟ್ಟಿಗಳಲ್ಲಿ ವಾಸವಾಗಿರುವ ಜನರು ಜಾನುವಾರು ಸಹಿತಿ ಸುರಕ್ಷಿತ ಸ್ಥಳಕ್ಕೆ ಬೆಳಿಗ್ಗೆಯಿಂದ ತೆರಳುತ್ತಿದ್ದಾರೆ. ಪ್ರವಾಹ ಸಮಸ್ಯೆ ನಿರ್ವಹಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶೀಲ್ದಾರ್ ಮಹಾದೇವ ಸನ್ನಮುರೆ …
Read More »ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ರ್‍ಯಾಲಿ. ಮತ್ತೆ ಜೈಲುಪಾಲಾದ
ಮುಂಬೈ: ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರೋಡೆಕೋರನೊಬ್ಬ ಜೈಲಿನಿಂದ ಬಿಡುಗಡೆಗೊಂಡ ಕೆಲವೇ ದಿನದಲ್ಲಿ ಮತ್ತೆ ಜೈಲು ಪಾಲಾಗಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಅಂದಹಾಗೆ ಈ ದರೋಡೆಕೋರನನ್ನು ಸುಖಾಸುಮ್ಮನೆ ಜೈಲಿಗೆ ಹಾಕಿಲ್ಲ ಇದರ ಹಿಂದೆ ಒಂದು ಕತೆ ಇದೆ. ಮಹಾರಾಷ್ಟ್ರದ ನಾಸಿಕ್ ಮೂಲದ ದರೋಡೆಕೋರನಾಗಿರುವ ಹರ್ಷದ್ ಪಾಟಂಕರ್ ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಇದೆ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಇತ್ತ ಜೈಲಿನಿಂದ ಬಿಡುಗಡೆಗೊಳ್ಳುತ್ತಿರುವ ವಿಚಾರ ಆತನ ಬೆಂಬಲಿಗರಿಗೆ …
Read More »ಲಿಂಗನಮಕ್ಕಿಯಲ್ಲಿ ಭಾರೀ ಒಳಹರಿವು: ಗಂಗೆ ಪೂಜೆ
ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ಒಳಹರಿವು ಬರುತ್ತಿದ್ದು 1804.80 ಅಡಿಗೆ ತಲುಪಿದೆ. ಜಲಾಶಯ ನೀರಿನ ಮಟ್ಟವು ಈಗಾಗಲೇ ಗೇಟ್ ಮಟ್ಟ ತಲುಪಿದ್ದು ಸಂಪ್ರದಾಯದಂತೆ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಶುಕ್ರವಾರ ಗಂಗೆ ಪೂಜೆ ನೆರವೇರಿಸಿದರು. ನಂತರ ಕೆಲ ನಿಮಿಷಗಳ ಕಾಲ ಗೇಟ್ ಮೂಲಕ ನೀರು ಹೊರಬಿಡಲಾಯಿತು. ರಾಜ್ಯಕ್ಕೆ ಅತಿ ಕಡಿಮೆ ವೆಚ್ಚದಲ್ಲಿ ಜಲ ವಿದ್ಯುತ್ ಪೂರೈಸುವ ಏಕೈಕ ಜಲಾಶಯ ಇದಾಗಿದ್ದು ಶುಕ್ರವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 1804.40 ಅಡಿ ತಲುಪಿತ್ತು. …
Read More »ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ:C.M.
ಬೆಂಗಳೂರು, ಜುಲೈ 26: ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದು ಮನೆಮುರುಕ ರಾಜಕೀಯ. ಮುಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್‌ಗಳೆರಡೂ ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ. …
Read More »ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ : ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಡ್ಯಾಂ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರದಂದು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿರುವ ಅವರು, ಸಂಭಾವ್ಯ ಪ್ರವಾಹವನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚುತ್ತಿರುವ ಧಾರಾಕಾರ …
Read More »ಪುಣೆಯಲ್ಲಿ ಭಾರಿ ಮಳೆ | ಅಗತ್ಯಬಿದ್ದರೆ ಜನರನ್ನು ಏರ್‌ಲಿಫ್ಟ್ ಮಾಡುತ್ತೇವೆ: ಶಿಂದೆ
ಪುಣೆ: ಅಗತ್ಯವೆನಿಸಿದರೆ ಪುಣೆಯಲ್ಲಿ ಮಳೆ ಸಂತ್ರಸ್ತರನ್ನು ವಾಯು ಮಾರ್ಗದ ಮೂಲಕ ಸ್ಥಳಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. ಪುಣೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಪುಣೆ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ನೆರೆಯ ಪಿಂಪ್ರಿ ಚಿಂಚ್ವಾಡ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಶಿಂದೆ, ಸ್ಥಳಾಂತರ ಕಾರ್ಯಗಳಿಗೆ ನೆರವಾಗುವಂತೆ ಸೇನೆ ಹಾಗೂ ರಾಷ್ಟ್ರೀಯ …
Read More »ಮಹಾರಾಷ್ಟ್ರದ ಕೆಲವೆಡೆ ರೆಡ್ ಅಲರ್ಟ್ ಘೋಷಣೆ
ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಂದು (ಗುರುವಾರ) ನಗರದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ. ಮುಂಬೈ ನಗರ, ಥಾಣೆ ಮತ್ತು ರಾಯಗಢ, ಪಾಲ್ಘರ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ಗುರುವಾರ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ …
Read More »ಹದಗೆಟ್ಟ ಕೇಜ್ರಿವಾಲ್ ಆರೋಗ್ಯ
ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಇದನ್ನು ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟವು ಜುಲೈ 30ರಂದು ಜಂತರ್ ಮಂತರ್‌ನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ. ‘ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಜ್ರಿವಾಲ್ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ …
Read More »
Laxmi News 24×7