Breaking News

ರಾಷ್ಟ್ರೀಯ

ಲೋಕಸಭಾ ಸ್ಪೀಕರ್ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್: ಯೂಟ್ಯೂಬರ್ ವಿರುದ್ಧ FIR

ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್‌’ನಲ್ಲಿ (ಟ್ವಿಟರ್‌) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗೆ ಹಾಜರಾಗದೆ ತೇರ್ಗಡೆಯಾಗಿದ್ದಾರೆ ಎಂದು ಧ್ರುವ ರಾಠಿಯ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ …

Read More »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್

ನವದೆಹಲಿ: ಅನಾರೋಗ್ಯದಿಂದ ರಾಷ್ಟ್ರ ರಾಜಧಾನಿಯ ಏಮ್ಸ್ ಗೆ ದಾಖಲಾಗಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುನೋವಿನಿಂದ ಕಳೆದೆರಡು ದಿನಗಳ ಹಿಂದೆ ದಾಖಲಾಗಿದ್ದ ರಾಜನಾಥ್ ಸಿಂಗ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಏಮ್ಸ್ ನ ಮಾಧ್ಯಮ ಕೋಶದ ಉಸ್ತುವಾರಿ ಡಾ.ರೀಮಾ ದಾದಾ, ಬೆನ್ನುನೋವಿಗಾಗಿ ರಕ್ಷಣಾ ಸಚಿವರಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಪರಿಸ್ಥಿತಿ ಉತ್ತಮವಾಗಿದೆ …

Read More »

ನೇಣು ಬಿಗಿದು ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಪತಿ ಸಾವಿನ ಖಿನ್ನತೆಯಿಂದ ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 13 ವರ್ಷದ ಪುತ್ರ ಭಾರ್ಗವ್ ನನ್ನು ಕೊಂದು ತಾಯಿ ರಮ್ಯಾ (40) ಅವರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕ ಠಾಣಾ ವ್ಯಾಪ್ತಿಯ RNZ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. 3 ತಿಂಗಳ ಹಿಂದೆ ಕ್ಯಾನ್ಸರ್ ನಿಂದ ರಮ್ಯಾ ಪತಿ ಶ್ರೀಧರ್ ಸಾವನ್ನಪ್ಪಿದ್ದರು. …

Read More »

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ   ಮುಧೋಳ: ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ ಹುಟ್ಟಿಸಿದ್ದು ಜನರು ಮನೆಯಿಂದ ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ಜಮೀನುಗಳಲ್ಲಿ‌ ಪ್ರತ್ಯಕ್ಷವಾಗಿರುವ ಚಿರತೆ ಮೇಯಲು ಬಿಟ್ಟ ಎಮ್ಮೆ, ಕರುಗಾಲ ಮೇಲೆ‌ ದಾಳಿ‌ ನಡೆಸಿದ್ದು ಚಿರತೆ ಕಾಟದಿಂದ ಗ್ರಾಮದ ಜನ ರೋಸಿ ಹೋಗಿದ್ದಾರೆ. ಯಡಹಳ್ಳಿ‌ ಚಿಂಕಾರ ರಕ್ಷಿತಾರಣ್ಯಕ್ಕೆ‌ ಹೊಂದಿಕೊಂಡಿರುವ ಕಿಶೋರಿ ಗ್ರಾಮದ ಜಮೀನುಗಳಲ್ಲಿ ಓಡಾಡುತ್ತಿರುವ ಚಿರತೆ ನಾಯಿಯೊಂದನ್ನು ಕೊಂದು ತಿಂದಿದ್ದು, …

Read More »

ನಾಳೆಯ ಬೆಂಗಳೂರಿನ ‘ಬಿಜೆಪಿ ಪ್ರತಿಭಟನೆ’ಗೆ ಪೊಲೀಸರಿಂದ ಅನುಮತಿ ನಿರಾಕರಣೆ

ಬೆಂಗಳೂರು: ರಾಜ್ಯ ಸರ್ಕಾದ ವಿರುದ್ಧದ ಹಗರಣಗಳು, ಮುಡಾ ಅಕ್ರಮ, ವಾಲ್ಮೀಕಿ ನಿಗದಮ ಅವ್ಯವಹಾರ ಸೇರಿದಂತೆ ವಿವಿಧ ಅಕ್ರಮಗಳ ವಿರುದ್ಧ ನಾಳೆ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿತ್ತು. ಆದ್ರೇ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ನಾಳೆ ಮುಡಾ ಸೈಟ್, ವಾಲ್ಮೀಕಿ ಅಕ್ರಮ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧರಿಸಿತ್ತು. ಆದ್ರೇ ಬಿಜೆಪಿ …

Read More »

ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅನುದಾನ ಗ್ಯಾರಂಟಿಗೆ ಬಳಸಿದ್ದು ನಿಜ: ಜಿ.ಪಲ್ಲವಿ

ಬೆಳಗಾವಿ: ‘7ಸಿ ಸೆಕ್ಷನ್ ಯೋಜನೆಯಡಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್‌ಟಿಪಿ, ಟಿಎಸ್‌ಪಿ ಕಾರ್ಯಕ್ರಮ ದೇಶದಲ್ಲಿಯೇ ಅತ್ಯುತ್ತಮವಾದದ್ದು. ತಳಮಟ್ಟದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆಯೇ …

Read More »

ಜುಲೈ 15 ರಿಂದ ವಿಧಾನ ಮಂಡಲ ಅಧಿವೇಶನ ಆರಂಭ

ಬೆಂಗಳೂರು : ಇದೆ ಜುಲೈ 15 ರಂದು ಸೋಮವಾರದಂದು ವಿಧಾನ ಮಂಡಲ ಅಧಿವೇಶನ ಆರಂಭಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಬಿಗ್ ಪ್ಲಾನ್ ಮಾಡಿಕೊಂಡಿದ್ದು, ಅಧಿವೇಶನ ಆರಂಭದಲ್ಲಿ ಯಾವುದೇ ಪ್ರತಿಭಟನೆ ಧರಣಿ ನಡೆಸಿದಂತೆ ಕೇಂದ್ರ ಸಚಿವರು ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.   ಸದನದಲ್ಲಿ ಮೂಡ ಸೈಟ್ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು ಎರಡು …

Read More »

ಜಿಎಸ್‌ಟಿ ವಂಚನೆ: ಉದ್ಯಮಿಗಳಿಗೂ ಕಂಟಕ

ಬೆಳಗಾವಿ: ಬೆಳಗಾವಿ ಕೇಂದ್ರಿತವಾಗಿ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಪ್ರಕರಣದಲ್ಲಿ ರಾಜ್ಯದ ದೊಡ್ಡ ಉದ್ಯಮಿಗಳು, ಪ್ರಭಾವಿಗಳು ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪ್ರಕರಣದ ಆರೋಪಿ ಒಬ್ಬನೇ ಇದ್ದರೂ ಆತ ಹಲವು ಪ್ರಭಾವಿಗಳ ಹೆಸರು, ಜಿಎಸ್‌ಟಿ ಸಂಖ್ಯೆಗಳನ್ನು ಅಕ್ರಮಕ್ಕೆ ಬಳಸಿದ್ದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ನಕೀಬ್ ನಜೀಬ್ ಮುಲ್ಲಾ (24) ಎಂಬ ಆರೋಪಿಯನ್ನು ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ₹132 ಕೋಟಿಯ ನಕಲಿ ವ್ಯವಹಾರದ …

Read More »

ಕಮ್ಮಿ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್! BSNL ನಿಂದ ಭರ್ಜರಿ ಆಫರ್ ಬಿಡುಗಡೆ‌ -ʼʼJio, Airtelʼʼನಿಂದ BSNLಗೆ ಸಿಮ್ ಪೋರ್ಟ್!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ JioBoycott ಅಭಿಯಾನ ಆರಂಭವಾಗಿದ್ದು, BSNLkigharwapsi (ಬಿಎಸ್‌ಎನ್‌ಎಲ್‌ ಘರ್ ವಾಪಸಿ) ಅಂತ ಬರೆದುಕೊಂಡಿದ್ದಾರೆ. ಯಾವಾಗ ಅಭಿಯಾನ ಆರಂಭವಾಯ್ತೋ ಎಚ್ಚೆತ್ತುಕೊಂಡ ಬಿಎಸ್‌ಎನ್‌ಎಲ್‌ ಟ್ವೀಟ್ ಮಾಡಿ ತನ್ನ ಹೊಸ ಆಫರ್ ಘೋಷಿಸಿದೆ. ಇದರ ಜೊತೆಗೆ ಅಮರನಾಥ ಯಾತ್ರಿಕರಿಗೆ ವಿಶೇಷವಾಗಿ 196 ರೂಗಳಿಗೆ ಹೊಸ ಸಿಮ್ ನೀಡುವ ಘೋಷಣೆ ಮಾಡಿದೆ. ಹೌದು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು …

Read More »

ವರ್ಗಾವಣೆ ನಿಯಮ ಬದಲು ಸರ್ಕಾರದ ವಿರುದ್ಧ ಖಾಕಿ ಕೆಂಡ!

ಬೆಂಗಳೂರು ;ಪೊಲೀಸ್ ಕಾನ್​ಸ್ಟೆಬಲ್​ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವವರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷ ಅವಧಿಗೆ ಹೆಚ್ಚಳ ಮಾಡುವ ಸಿದ್ಧತೆ ನಡೆಸಿರುವ ಮಾಹಿತಿ ಹಿನ್ನೆಲೆಯಲ್ಲಿ ನಾಲ್ಕು ವರ್ಷದಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪೊಲೀಸ್ ಕಾನ್​ಸ್ಟೆಬಲ್​ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕುಟುಂಬ ಸಮೇತ ಪ್ರತಿಭಟನೆಗಿಳಿಯುವ ಎಚ್ಚರಿಕೆ ಕೊಟ್ಟಿದ್ದಾರೆ. ಮೊದಲಿಗೆ ಎರಡೂವರೆ ವರ್ಷ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದರೆ ಕಾನ್​ಸ್ಟೆಬಲ್​ಗಳನ್ನು …

Read More »