ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ …
Read More »ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ
ಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು, ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಾನೂನು ರೀತ್ಯಾ ಕ್ರಮ ಆಗುತ್ತಿದೆ. ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು. ಕಾಡುಗೋಡಿ ಪ್ಲಾಂಟೇಷನ್ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ …
Read More »ಮೈಸೂರು ದಸರಾ 2025: ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭ
ಮೈಸೂರು: ಈ ಬಾರಿ ಸಂಭ್ರಮ ಹಾಗೂ ಅದ್ಧೂರಿ ದಸರಾ ಆಚರಿಸಲು ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಎಂಟು ಆನೆ ಶಿಬಿರಗಳಿಗೆ ಭೇಟಿ ನೀಡಿ ಸುಮಾರು 25 ಗಂಡು ಮತ್ತು ಹೆಣ್ಣು ಆನೆಗಳ ಆರೋಗ್ಯ ಪರಿಶೀಲನೆ ನಡೆಸಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯೇ ಗಜಪಡೆ. ಈ ಗಜಪಡೆಯ ಪ್ರಮುಖ ಕೇಂದ್ರಬಿಂದುವಾಗಿ ಇಟ್ಟುಕೊಂಡು ನಡೆಯುವುದು ಮೈಸೂರು ದಸರಾದ ಜಂಬೂಸವಾರಿ. ಇಂತಹ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳನ್ನು ಆಯ್ಕೆ …
Read More »ಡಿಕೆಶಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸಿಎಂ ಸ್ಥಾನ ? ಇಕ್ಬಾಲ್ ಹುಸೇನ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನಮ್ಮ (ಕಾಂಗ್ರೆಸ್ನ) ಶಕ್ತಿ ಏನಿತ್ತು ಎಂದು ನಿಮಗೆಲ್ಲರಿಗೂ ತಿಳಿದಿದೆ. ಈ ವಿಜಯವನ್ನು ಸಾಧಿಸಲು ಯಾರು ಹೋರಾಟ, ಬೆವರು ಸುರಿಸಿದರು ಮತ್ತು ಶ್ರಮ ಹಾಕಿದರು ಅನ್ನೋದು ಎಲ್ಲರಿಗೂ ತಿಳಿದಿದೆ. ಅವರ (ಶಿವಕುಮಾರ್) ತಂತ್ರ …
Read More »ಆಹಾರ ಮತ್ತು ಪಾನೀಯ ವಿಭಾಗದಲ್ಲಿ ‘ನಂದಿನಿ’ ಬ್ರ್ಯಾಂಡ್ಗೆ ದೇಶದಲ್ಲೇ ಟಾಪ್-4 ಸ್ಥಾನ
ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್-4 ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್-100 ಬ್ರ್ಯಾಂಡ್ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್ ಫೈನಾನ್ಸ್ ಸಂಸ್ಥೆ ಲಂಡನ್ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್ಗಳ ಪಟ್ಟಿಗೆ ಸೇರಿದೆ. ದೇಶದ ಆಹಾರ …
Read More »ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್ ಚಕ್ರ
ಗದಗ, ಜೂನ್ 27: ಜಿಲ್ಲೆಯ ಶಿರಹಟ್ಟಿಯ ಬಳಿ ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ಬಸ್‌ನ (Bus) ಮುಂಭಾಗದ ಚಕ್ರ ಚಲಿಸುದ್ದ ವೇಳೆಯೇ ಕಳಚಿಕೊಂಡಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಕೋಟಾ ಬಸ್‌ಗಳ ಬಳಕೆಯ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹೊಸ ಬಸ್‌ಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ.
Read More »ಮಾಟ ಮಂತ್ರ.. ಖಾರದ ಪುಡಿ ತಂತ್ರ: ಬ್ಯಾಂಕ್ನಲ್ಲಿ 58 ಕೆಜೆ ಚಿನ್ನ ದರೋಡೆ ಕೇಸ್; ಮ್ಯಾನೇಜರ್ ಸೇರಿ ಮೂವರ ಬಂಧನ
ವಿಜಯಪುರ: ಕಳೆದ ತಿಂಗಳು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನ ಲಾಕರ್ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ) ಬಂಗಾರದ ಆಭರಣಗಳು ಹಾಗೂ ರೂ. 5,20,450 ನಗದು ದರೋಡೆಯಾಗಿತ್ತು. ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕೆನರಾ ಬ್ಯಾಂಕ್‌ನ ಸೀನಿಯರ್ ಮ್ಯಾನೇಜರ್ …
Read More »ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು ಮಂಗಳೂರು (ದಕ್ಷಿಣ ಕನ್ನಡ) : ನಿವೃತ್ತರಾದ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕರ್ತವ್ಯ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಇವರು ನಿವೃತ್ತಿ …
Read More »ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು
ಬೆಂಗಳೂರು/ಹಾಸನ, (ಜೂನ್ 26): ಹಾಸನ (Hassan) ಮೂಲದ ಯುವಕ-ಯುವತಿಯರು(Youths) ಹೃದಯಾಘಾತದಿಂದ (Heart Attack) ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 32 ವರ್ಷದ ಆಟೋ …
Read More »4 ಹುಲಿಗಳ ಅಸಹಜ ಸಾವು
4 ಹುಲಿಗಳ ಅಸಹಜ ಸಾವು ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 …
Read More »