Breaking News

ರಾಷ್ಟ್ರೀಯ

ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಿಜೆಪಿ ಉತ್ತರ ಮಂಡಳದವರು ಗುರುವಾರ ಪ್ರತಿಭಟನೆ ನಡೆಸಿದರು‌. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು‌. ನೇತೃತ್ವ ವಹಿಸಿದ್ದ ಸಂಸದ ಜಗದೀಶ ಶೆಟ್ಟರ್, ‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ದರ ಹೆಚ್ಚಿಸುತ್ತಿದೆ. ಅದರಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಎಲ್ಲದರ ಮೇಲೆ ಪರಿಣಾಮ ಬೀರುತ್ತದೆ. …

Read More »

ಸೋರಿಕೆಯಿಲ್ಲದೆ ಪರೀಕ್ಷೆ ನಡೆಸುವುದು ಮೋದಿ ಸರ್ಕಾರಕ್ಕೆ ಅಸಾಧ್ಯ: ಖರ್ಗೆ

ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪ್ರತಿ ದಿನ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದು, ಇದು ಯಾವ ರೀತಿಯ ಪರೀಕ್ಷಾ ಪೇ ಚರ್ಚಾ?’ ಎಂದು ಕೇಳಿದ್ದಾರೆ. ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಪ್ರತಿ ವರ್ಷ ‘ಪರೀಕ್ಷಾ ಪೇ ಚರ್ಚಾ’ ಎಂಬ ಹಾಸ್ಯಾಸ್ಪದ ಕಾರ್ಯಕ್ರಮವನ್ನು ನಡೆಸುತ್ತಿದ್ದರೂ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆಯಿಲ್ಲದೆ ಯಾವುದೇ ಪರೀಕ್ಷೆಯನ್ನು ನಡೆಸಲು …

Read More »

ಭಾರತದಲ್ಲಿ ಅತಿ ಹೆಚ್ಚು ಅವಳಿ ಮಕ್ಕಳು ಜನಿಸುವ ಅಪರೂಪದ ಗ್ರಾಮ…!

ಅವಳಿ ಮಕ್ಕಳನ್ನು ಹೊಂದುವುದು ಅಪರೂಪ. ಆದರೆ ಭಾರತದ ಹಳ್ಳಿಯೊಂದರಲ್ಲಿ ಅವಳಿ ಮಕ್ಕಳ ಜನನ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿರುವ ಕೊಡಿನ್ಹಿ ಗ್ರಾಮವನ್ನು ಅವಳಿಗಳ ಗ್ರಾಮ ಎಂದೂ ಕರೆಯುತ್ತಾರೆ. ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ ಪ್ರತಿ 1000 ಮಕ್ಕಳಲ್ಲಿ ಕೇವಲ 9 ಅವಳಿ ಮಕ್ಕಳು ಜನಿಸುತ್ತಾರೆ. ಆದರೆ ಕೇರಳದ ಈ ಹಳ್ಳಿಯಲ್ಲಿ ಪ್ರತಿಯೊಂದು ಮನೆಯಲ್ಲೂ ಅವಳಿ ಮಕ್ಕಳಿದ್ದಾರೆ. 2008ರ ಮಾಹಿತಿ ಪ್ರಕಾರ ಎರಡು ಸಾವಿರ ಜನಸಂಖ್ಯೆಯ ಈ ಗ್ರಾಮದಲ್ಲಿ ಅವಳಿ ಮಕ್ಕಳ ಸಂಖ್ಯೆ …

Read More »

ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಚಿವೆ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸಾವಿರಾರು ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ ನಿಮ್ಮ ಪರವಾಗಿ ನಾವಿದ್ದೇವೆ ಎನ್ನುವ ಭರವಸೆ ನೀಡಿದರು. …

Read More »

ದೈಹಿಕ ಶಿಕ್ಷಣ ಶಿಕ್ಷಕರ ಒತ್ತಾಯ ಮುಂಬಡ್ತಿಗೆ

ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರೆಂದು ಪರಿಗಣಿಸಿ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡಬೇಕೆಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ಆಗ್ರಹಿಸಿದೆ. ಶಿಕ್ಷಣ ಸಚಿವ ಮಧು.ಎಸ್. ಬಂಗಾರಪ್ಪ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೆಂಗಳೂರಿನಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸಿ ಒತ್ತಾಯಿಸಿದರು.   ಬರುವ ಜುಲೈ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರಸ್ತುತ ವರ್ಷದ ಇಲಾಖೆಯ ಕ್ರೀಡಾಕೂಟಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ …

Read More »

NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ: ಜೂನ್​ 18ರಂದು (ಮಂಗಳವಾರ) ನಡೆದಿದ್ದ ಯುಜಿಸಿ ನೆಟ್​ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್​ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.   ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ …

Read More »

ವಾಹನ ಸವಾರ’ರಿಗೆ ಬಿಗ್ ರಿಲೀಫ್: ರಾಜ್ಯ ಸರ್ಕಾರದಿಂದ ಮತ್ತೆ ‘HSRP ನಂಬರ್ ಪ್ಲೇಟ್’ ಅಳವಡಿಕೆ ಗಡುವು ವಿಸ್ತರಣೆ

ಬೆಂಗಳೂರು: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ …

Read More »

77 ಮಕ್ಕಳಿದ್ದರೂ ಪ್ರೌಢಶಾಲೆ ಇಲ್ಲ

ರಾಯಬಾಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ 77 ವಿದ್ಯಾರ್ಥಿಗಳಿದ್ದರೂ ಪ್ರೌಢಶಾಲೆ ಇಲ್ಲ. ಪ್ರೌಢಶಿಕ್ಷಣಕ್ಕಾಗಿ ಮಕ್ಕಳು ಪಕ್ಕದ ನಿಪನಾಳ ಗ್ರಾಮಕ್ಕೆ ಅಲೆಯಬೇಕಾದ ಪರಿಸ್ಥಿತಿ ಇದೆ. ಇದು ಮಕ್ಕಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.   ಗ್ರಾಮಕ್ಕೆ ಒಂದು ‍ಪ್ರೌಢಶಾಲೆ ಮಂಜೂರು ಮಾಡುವಂತೆ ಗ್ರಾಮಸ್ಥರು ಶಾಸಕರಿಗೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಯಾರೊಬ್ಬರೂ ಕಿವಿಗೊಟ್ಟಿಲ್ಲ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಮಕ್ಕಳ ಸಂಕಷ್ಟ ದೂರು ಮಾಡುವ …

Read More »

ದರ್ಶನ್​ ಅಭಿಮಾನಿಗಳಿಂದ ಜೀವ ಬೆದರಿಕೆ: ಪ್ರಥಮ್​

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ​ ಬಿಗ್​ಬಾಸ್​ ವಿಜೇತ ಹಾಗೂ ನಟ ಪ್ರಥಮ್​ ಜ್ಞಾನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ನೀಡಿರುವ ಬಗ್ಗೆ ಪ್ರಥಮ್ ಅವರು​ ತಮ್ಮ ಎಕ್ಸ್​ ಖಾತೆಯ ಮೂಲಕ ಖಚಿತಪಡಿಸಿದ್ದಾರೆ. ಅಲ್ಲದೆ, ದರ್ಶನ್​ ಅಭಿಮಾನಿಗಳಿಗೆ ಬುದ್ಧಿಮಾತು ಸಹ ಹೇಳಿದ್ದಾರೆ. ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ ‘ಕರ್ನಾಟಕದ …

Read More »

NEETಲೋಪ: ಸುಪ್ರೀಂ ತರಾಟೆ; ತಪ್ಪಾಗಿದ್ದರೆ ಒಪ್ಪಿಕೊಳ್ಳಿ : ಎನ್‌ಟಿಎಗೆ ತಾಕೀತು

ಹೊಸದಿಲ್ಲಿ: ನೀಟ್‌-ಯುಜಿ ಅಕ್ರಮದ ವಿಚಾರಣೆ ವೇಳೆ ಮಂಗಳವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. “ನೀಟ್‌-ಯುಜಿ 2024 ಪರೀಕ್ಷೆ ಸಂದರ್ಭ ಸಾಸಿವೆ ಕಾಳಿನಷ್ಟು ಲೋಪ ಆಗಿದ್ದರೂ ಆ ಕುರಿತು ಸಮಗ್ರ ತನಿಖೆ ನಡೆಸಬೇಕು. ಪರೀಕ್ಷೆಗಾಗಿ ವಿದ್ಯಾರ್ಥಿಗಳು ಭಾರೀ ಪರಿಶ್ರಮ ನಡೆಸಿರುತ್ತಾರೆ ಎಂಬುದನ್ನು ನಾವು ಮರೆಯುವ ಹಾಗಿಲ್ಲ. ಒಂದು ವೇಳೆ ನಿಮ್ಮಿಂದ ತಪ್ಪಾಗಿದ್ದರೆ ಒಪ್ಪಿಕೊಳ್ಳಿ’ ಎಂದು ಎನ್‌ಟಿಎಗೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೃಪಾಂಕಕ್ಕೆ ತಕರಾರು, …

Read More »