Breaking News

ರಾಷ್ಟ್ರೀಯ

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

ಚನ್ನಮ್ಮನ ಕಿತ್ತೂರು: ಮಕ್ಕಳ ಹಾಗೂ ಶಾಲೆಗಳ ಅಭಿವೃದ್ಧಿಗಳನ್ನು ಗಮನದಲ್ಲಿಟ್ಟುಕೊಂಡು ಪಾಲಕರು ಶ್ರಮ ವಹಿಸಬೇಕು. ಶಾಲೆಗಳ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹೇಳಿದರು. ಅವರು ಕಾದ್ರೊಳ್ಳಿ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಉತ್ತಮ ಶಿಕ್ಷಣ ದೊರಕಿಸುವುದರ ಮೂಲಕ ಮಕ್ಕಳನ್ನು ಆಸ್ತಿಯಾಗಿ ಮಾಡಬೇಕು. ಈ …

Read More »

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

ಕುಮಟಾ: ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ. ಪಟ್ಟಣದ ಕೊಪ್ಪಳಕರವಾಡಿ ವಾರ್ಡ್ ನಲ್ಲಿದ್ದ ಶಾಸಕ ದಿನಕರ ಶೆಟ್ಟಿ ಸಹೋದರ ಮಧುಕರ ಶೆಟ್ಟಿ ಅವರ ಮನೆ ಇದಾಗಿದ್ದು ಶನಿವಾರ ಕುಟುಂಬ ಸಮೇತರಾಗಿ ಹೊರಹೋಗಿದ್ದರು ಎನ್ನಲಾಗಿದೆ. ಅವರು ಮನೆಗೆ ಬಂದು ಬಾಗಿಲು ತೆರೆದಾಗ ಸಿಲಿಂಡ‌ರ್ ಸ್ಫೋಟಗೊಂಡಿದೆ. ಈ ವೇಳೆ ಮಧುಕರ ಶೆಟ್ಟಿ ಅವರ ಪತ್ನಿಗೂ ಗಾಯಗಳಾಗಿದ್ದು, …

Read More »

ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು;B.S.Y.

ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ ಹೇಳಿದರು. ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್‌‍ ದಯನೀಯ ಸೋಲು ಅನುಭವಿಸಿದೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು …

Read More »

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ

ರೈತರಿಗೆ ಸಂಪೂರ್ಣ ನೆರವಿನ ಭರವಸೆ ಕೊಟ್ಟ ಉತ್ತರ ಕನ್ನಡ ಜಿಲ್ಲಾಡಳಿತ ಕಾರವಾರ, ಜೂನ್ 23: ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಜಿಲ್ಲಾಡಳಿತ ನಿಮ್ಮ ಸಂಪೂರ್ಣ ನೆರವಿಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸಿ ಗಂಗೂಬಾಯಿ ಮಾನಕರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ …

Read More »

ಆರ್.ಎಫ್.ಒ ವಿರುದ್ಧ ಕೂಲಿಗಾರರ ಧರಣಿ

ಖಾನಾಪುರ: ನಾಗರಗಾಳಿ ವಲಯ ಅರಣ್ಯ ಅಧಿಕಾರಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನರೇಗಾ ಕೂಲಿಕಾರರು ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನಾಗರಗಾಳಿ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಧರಣಿ ನಡೆಸಿದರು.   ಅರಣ್ಯ ಇಲಾಖೆಯಿಂದ ನರೇಗಾ ಯೋಜನೆಯಡಿ ಕೂಲಿ ಕೆಲಸ ಒದಗಿಸುವಂತೆ ಗುರುವಾರ ಗೋಟಗಾಳಿ ಗ್ರಾ.ಪಂ. ಆವರಣದಲ್ಲಿ ಕೂಲಿಕಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಸುದ್ದಿ …

Read More »

SSLC ಪರೀಕ್ಷೆ -2 ವಿಜ್ಞಾನ ವಿಷಯದ ಕೀ ಉತ್ತರ ಪ್ರಕಟ: ಆಕ್ಷೇಪಣೆಗಳಿದ್ದರೆ ಈ ವೆಬ್ ಸೈಟ್ ಗೆ ಭೇಟಿ ನೀಡಿ

ಬೆಂಗಳೂರು: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ ವಿಷಯದ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ಜೂನ್ 21ರಂದು https://kseab.karnataka.gov.inನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಆಕ್ಷೇಪಣೆಗಳಿದ್ದರೆ ಆಹ್ವಾನಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಜೂನ್ 23ರಂದು ಸಂಜೆ 5:30ರೊಳಗೆ ಮಂಡಳಿಯ ಜಾಲತಾಣದ ಮೂಲಕ ಸಲ್ಲಿಸಬಹುದು. ಮಂಡಳಿಯ ಜಾಲತಾಣ https://kseab.karnataka.gov.in ಲಿಂಕ್ …

Read More »

ಬೆಂಗಳೂರಿನಲ್ಲಿ ಘೋರ ದುರಂತ : ಬಹುಮಹಡಿ ಕಟ್ಟಡದಿಂದ ಜಾರಿ ಬಿದ್ದ ಮಹಿಳೆ

ಬೆಂಗಳೂರು: ಆಕಸ್ಮಿಕವಾಗಿ ಸೋಪ್​ ಮೇಲೆ ಕಾಲಿಟ್ಟು ಮಹಿಳೆಯೊಬ್ಬರು ಕಟ್ಟಡದ ಮೇಲಿಂದ ಬಿದ್ದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಮಹಿಳೆ ಕೋಮಾಕ್ಕೆ ಜಾರಿದ್ದಾಳೆ ಎನ್ನಲಾಗಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ಈ ಪ್ರಕರಣ ನಡೆದಿದೆ. ಕಳೆದ ಮೂರು ದಿನದ ಹಿಂದ ನಡೆದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಛಾವಣಿಯ ಮೇಲೆ ಕೆಲವು ಕೆಲಸ ಮಾಡುತ್ತಿದ್ದ ವೇಳೆ …

Read More »

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಹಿರಿಯ ಅಧಿಕಾರಿಗಳು ಸೇರಿದಂತೆ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಬೆಳಿಗ್ಗೆ 9.15 ಕ್ಕೆ ಕಚೇರಿಗೆ ತಲುಪಲು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಅವರ ಹಾಜರಾತಿಯನ್ನು ಗುರುತಿಸಲು ಇತ್ತೀಚೆಗಷ್ಟೇ ಸೂಚನೆ ನೀಡಿದೆ. ವರದಿಯ ಪ್ರಕಾರ, …

Read More »

ಪ್ರಜ್ವಲ್ ಬೆನ್ನಲ್ಲೇ ಅಣ್ಣ ಸೂರಜ್‌ ರೇವಣ್ಣನ ಮೇಲೆ ಅತ್ಯಾಚಾರ ಆರೋಪ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ. ಸೂರಜ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್‌ …

Read More »

ಅಟಲ್ ಸೇತು ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆ ಅಟಲ್ ಸೇತು ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಶುಕ್ರವಾರ ಆರೋಪಿಸಿದ್ದಾರೆ. ಸೇತುವೆ ಉದ್ಘಾಟನೆಗೊಂಡ ಕೆಲವೇ ತಿಂಗಳೊಳಗೆ ಅದರಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದೆ ಎಂದು ಪಟೋಳೆ ಹೇಳಿದ್ದಾರೆ. ಇಂದು ಹಗಲಿನಲ್ಲಿ ಸೇತುವೆಯನ್ನು ಪರಿಶೀಲಿಸಿದ ಪಟೋಳೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿಯಷ್ಟು ಕುಸಿದಿದೆ …

Read More »