ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ ಜೌನ್ಪುರ ಪಟ್ಟಣದ ರಾಜ್ಯ ವಿಶ್ವವಿದ್ಯಾಲಯವಾದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದಲ್ಲಿ, ಪರೀಕ್ಷಕರು ತಮ್ಮ ಉತ್ತರ ಪುಸ್ತಕಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಅನೇಕ ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದಾರೆ ಎಂದು ಹೇಳಲಾದ ಹಲವಾರು ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದ್ದು ಪಾಸ್ ಕೂಡ ಮಾಡಿದ್ದಾರೆ. ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ …
Read More »ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ!
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. 23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More »ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರಕ್ಕೆ ನಾಡಗೀತೆಯನ್ನು ಇಂತಹುದೇ ಧಾಟಿಯಲ್ಲಿ ಹಾಡುವಂತೆ ಕಡ್ಡಾಯಗೊಳಿಸುವ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು. ಶಿಕ್ಷಣ ಕಾಯಿದೆಯಡಿ ಅವಕಾಶ: ನಾಡಗೀತೆಗೆ ಮೈಸೂರು …
Read More »ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ ಮರಗಳ ಯಾರ್ಡ್ ಹಾಗೂ ಗಾರ್ಮೆಂಟ್ಸ್ ಕಾರ್ಖಾನೆ ಬೆಂಕಿಯಿಂದ ಹೊತ್ತಿ ಉರಿಯಿತು. ಅವಘಡದಿಂದಾಗಿ ₹ 2 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸೆಂಟ್ರಿಂಗ್ ಮರಗಳ ಯಾರ್ಡ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಹೆಚ್ಚಾಗಿತ್ತು. ಸೆಂಟ್ರಿಂಗ್ ಮರಗಳಿಗೆ ಬೆಂಕಿ ತಗುಲಿದ್ದರಿಂದ, ಧಗ ಧಗ ಉರಿಯಲಾರಂಭಿಸಿತ್ತು. ಇದೇ ಜಾಗಕ್ಕೆ ಹೊಂದಿಕೊಂಡಿದ್ದ ಗ್ಯಾರೇಜ್ ಹಾಗೂ ಸಮೀಪದಲ್ಲಿದ್ದ …
Read More »ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಗಿದೆ. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಗಿದೆ. ಬಳಿಕ ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್ಪೇಟೆ, ಗಾಣಿಗರಪೇಟೆ, ಅವೆನ್ಯೂ …
Read More »ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್ ಡ್ಯಾಮೇಜ್ ಆಗುತ್ತದೆ?
ಬೆಂಗಳೂರು: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್ ಕುಡಿಯುವುದು ಸಹ ಒಂದು ಚಟವಾಗಿ ಮಾರ್ಪಟ್ಟಿದೆ ಎಂದರೆ ಖಂಡಿತ ತಪ್ಪಾಗಲಾರದು. ಮದ್ಯ ಪ್ರಿಯರಿಗೆ ಇದನ್ನು ಸೇವಿಸುವುದರಿಂದ ಅದೇನೋ ಒಂದು ರೀತಿಯ ಖುಷಿ, ಉತ್ಸಾಹ ಲಭಿಸುತ್ತದೆ. ಕೆಲವರು ಆಲ್ಕೋಹಾಲ್ ಸೇವಿಸುವುದನ್ನು ದಿನನಿತ್ಯ ಅಭ್ಯಾಸ ಮಾಡಿಕೊಂಡರೆ, ಇನ್ನೂ ಕೆಲವರು ಟಾನಿಕ್ ರೀತಿ ರಾತ್ರಿಯ ವೇಳೆ ಕುಡಿಯುತ್ತಾರೆ. ಈ ಮಧ್ಯೆ ಇತ್ತೀಚಿನ ವರದಿಯೊಂದು ಎಷ್ಟು ಪ್ರಮಾಣದಲ್ಲಿ ಕುಡಿಯುವುದರಿಂದ ಲಿವರ್ ಆರೊಗ್ಯ ಕಾಪಾಡಿಕೊಳ್ಳಬಹುದು ಹಾಗೂ ಎಷ್ಟು …
Read More »ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಮಂಗಳೂರು: ನಗರದ ಅತ್ತಾವರದ ವಸತಿಗೃಹವೊಂದರ ಬಳಿಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿ ಬಸವರಾಜ್ ಅಲ್ಲಪ್ಪ ಮಡಿವಾಳರ್‌ಗೆ ಮಂಗಳೂರಿನ ನ್ಯಾಯಾಲಯ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2022ರ ಡಿ.13ರಂದು ಬಸವರಾಜ್ ಬಾಲಕಿಯನ್ನು ಪುಸಲಾಯಿಸಿ ಧರ್ಮಸ್ಥಳಕ್ಕೆ ಕರೆಯಿಸಿ ಅಲ್ಲಿಂದ ಬಸ್‌ನಲ್ಲಿ ಬಿಜಾಪುರಕ್ಕೆ ಕರೆದೊಯ್ದಿದ್ದ.ಅಲ್ಲಿಂದ ತಿರುಪತಿಗೆ ಕರೆದೊಯ್ದು ಡಾಬಾವೊಂದರಲ್ಲಿ ಕೆಲಸಕ್ಕೆ ಸೇರಿಸಿ ರೂಮ್‌ನಲ್ಲಿ ವಾಸವಿದ್ದ. ಈ ಸಂದರ್ಭ ಆಕೆಯ ಇಚ್ಛೆಗೆ ವಿರುದ್ಧವಾಗಿ ಹಲವು ಬಾರಿ ಅತ್ಯಾಚಾರ ನಡೆಸಿ ಜೀವ …
Read More »ಏಪ್ರಿಲ್ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!
2024: ಮತ ಹಾಕದೆ ಮೈಸೂರು ಅರಮನೆ ನೋಡಲು ಬಂದವರಿಗೆ ನೋ ಎಂಟ್ರಿ ಬೋರ್ಡ್ ಅನ್ನು ನೇತುಹಾಕಲಾಗುವುದು. ಏ. 26ರ ಮತದಾನದ ದಿನಕ್ಕೆ ಮಾತ್ರ ಈ ನಿರ್ಬಂಧ ಅನ್ವಯವಾಗಲಿದೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ಇದು ಅನ್ವಯವಾಗಲಿದೆ. ಮತ ಹಾಕದೆ ಅರಮನೆ ನೋಡಲು ಬಂದರೆ ಪ್ರವೇಶ ನಿರಾಕರಿಸಲು ಚಿಂತನೆ ನಡೆಸಲಾಗಿದೆ.ಇಂದು ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.
Read More »ಕಾಂಗ್ರೆಸ್ ಚೊಂಬು ವರ್ಸಸ್ ಬಿಜೆಪಿ ಚಿಪ್ಪು ಕದನ
ಬೆಂಗಳೂರು: ಕಾಂಗ್ರೆಸಿನ “ಚೊಂಬು’ ಜಾಹೀರಾತಿಗೆ ವಿರುದ್ಧವಾಗಿ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ “ಖಾಲಿ ಚಿಪ್ಪು’ ಅಭಿಯಾನ ಪ್ರಾರಂಭಿಸಿದ್ದು, ಜಾಹೀರಾತು ಸಮರ ಮುಂದುವರಿಸಿದೆ. “ಕನ್ನಡಿಗರ ಕೈಗೆ ಚಿಪ್ಪು ನೀಡಿದ ಕಾಂಗ್ರೆಸ್’ ಎಂಬ ಶೀರ್ಷಿಕೆಯೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ಮಾಡಿದೆ ಎನ್ನಲಾದ ಅನ್ಯಾಯವನ್ನು ಎಳೆಎಳೆಯಾಗಿ ಬಿಡಿಸಿಡಲಾಗಿದೆ.ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 4,000 ರೂ. ಕಡಿತ ಮಾಡಿ ರೈತರಿಗೆ ಚಿಪ್ಪು, ದಲಿತರ 11,000 ಕೋಟಿ ರೂ. ದುರ್ಬಳಕೆ ಮಾಡಿ ತಳ ಸಮುದಾಯದ ಕೈಗೆ …
Read More »ಕಲಬುರಗಿ: ಪಕ್ಷೇತರರಾಗಿ ಸ್ಪರ್ಧೆಗಿಳಿದ ದಂಪತಿ
ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು ಹೇಳುತ್ತಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಲಬುರಗಿ ತಾಲ್ಲೂಕಿನ ಕೇರೂರ ಗ್ರಾಮದ ರಮೇಶ ಭೀಮಸಿಂಗ್ ಚವ್ಹಾಣ (39) ಹಾಗೂ ಅವರ ಪತ್ನಿ ಜ್ಯೋತಿ ರಮೇಶ ಚವ್ಹಾಣ (33) ಚುನಾವಣಾ ಕಣದಲ್ಲಿದ್ದಾರೆ.ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದರೂ ಇಬ್ಬರೂ ಕಣದಲ್ಲಿ ಉಳಿಯುವ ನಿರ್ಧಾರ ಮಾಡಿದ್ದಾರೆ. ಮಾಹಿತಿ ಹಕ್ಕು ಕಾರ್ಯಕರ್ತರಾಗಿರುವ ರಮೇಶ …
Read More »