Breaking News

ರಾಷ್ಟ್ರೀಯ

ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಕಲಬುರಗಿ: ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ ಎರಡು ಸಾವಿರ ಬರ‌ ಪರಿಹಾರ ನೀಡಿದೆ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು. ನಗರದ ಜಿಲ್ಲಾ ಚುನಾವಣಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬರಗಾಲದಲ್ಲಿ 18-20 ಸಾವಿರ ರೂ.ಪರಿಹಾರ ನೀಡಲಾಗಿದೆ. ಆದರೆ, ಈಗಿನ ಸಿದ್ದರಾಮಯ್ಯ ಸರ್ಕಾರ ಕೇವಲ ಎರಡು ಸಾವಿರ ರೂಪಾಯಿಗಳನ್ನು ಭಿಕ್ಷುಕರಂತೆ ರೈತರಿಗೆ …

Read More »

ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎ. 19ರಂದು(ಶುಕ್ರವಾರ) ನಡೆಯಲಿದ್ದು, ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಒಟ್ಟು 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜತೆಗೆ, ಅರುಣಾಚಲ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಮತದಾನ ನಡೆಯಲಿದೆ.   ಮೊದಲ ಹಂತದಲ್ಲಿ 8 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರ ಅದೃಷ್ಟ ಪರೀಕ್ಷೆ ನಡೆಯಲಿದೆ. ಮೊದಲ …

Read More »

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ‘ಕೈ’ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ ನೀಡಿದರು. ಈ ವೇಳೆ ಮಾತನಾಡಿದ ಕರಡಿ ಸಂಗಣ್ಣ, ನಾವೆಲ್ಲರೂ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಶತಾಯಗತಾಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ …

Read More »

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು. ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ …

Read More »

ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ; ಬೆಚ್ಚಿಬಿದ್ದ ವೈದ್ಯರು

ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ನಡೆದಿದ್ದೇನು?: ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಕೂಲಿ ಕೆಲಸಕ್ಕೆ ಹೋಗಿದ್ದರುಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆಗೆ ಹಾವು ಕಚ್ಚಿದೆ. ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆಸ್ಪತ್ರೆಗೆ …

Read More »

‘ಗೃಹ ಜ್ಯೋತಿ’ ಯೋಜನೆಗೆ ನೀವೂ ನೋಂದಣಿ ಆಗಿಲ್ಲವೇ? ಹಾಗಾದ್ರೆ ಅರ್ಜಿ ಸಲ್ಲಿಕೆ ಹೇಗೆ? ವಿಧಾನ, ಅರ್ಹತೆ ವಿವರ ಇಲ್ಲಿದೆ

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯನ್ನು ಘೋಷಿಸಿತ್ತು. ಇದರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಪೂರೈಕೆಯ ಉದ್ದೇಶವನ್ನು ಹೊರ ಹಾಕಿತ್ತು. ಈ ಯೋಜನೆ ಫಲಾನುಭವಿ ಆಗಲು ಆನ್‌ಲೈನ್‌ ಮತ್ತು ಆಫ್‌ಲೈನ್ ಮೂಲಕ ನೀವು ನೋಂದಾಯಿತ ಆಗಬಹುದು.ಈವರೆಗೆ ಯಾರೆಲ್ಲ ಯೋಜನೆಗೆ ನೋಂದಣಿ ಆಗಿಲ್ಲ ಅವರು ಫಲಾನುಭವಿ ಆಗಲು ಇಲ್ಲಿನ ವಿಧಾನ, ಮಾಹಿತಿ ತಿಳಿಯಬೇಕು.   ಕರ್ನಾಟಕ ಸರ್ಕಾರ ನಾಗರಿಕರ ಕಲ್ಯಾಣ ಉದ್ದೇಶದಿಂದ ಉಚಿತ ವಿದ್ಯುತ್ …

Read More »

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು’ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನಿಲ್‌ಕುಮಾರ್‌ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕರ್ನಾಟಕದ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದ ನಾಯಕರ ಆಶೀರ್ವಾದ ಇಲ್ಲದೇ ಇಂತಹ ಹೇಳಿಕೆಗಳನ್ನು ನೀಡಲು ಸಾಧ್ಯವೇ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು. …

Read More »

ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ಕಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡು‌ಗು-ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.   ಮಳೆಯೊಂದಿಗೆ ಗಾಳಿಯೂ ಜೋರಾಗಿ ಬೀಸಿದ್ದರಿಂದ ನಾಲ್ಕು ಮನೆಗಳ ಪತ್ರಾಸ್‌, ಹೆಂಚು ಹಾರಿಹೋಗಿದ್ದು, ಒಂದು ಮನೆಯ ಗೋಡೆ ಕುಸಿದಿದೆ. ವಿದ್ಯುತ್‌ ಪೂರೈಕೆ ಸ್ಥಗಿತವಾದ ಕಾರಣ, ಜನರು ಪರದಾಡಿದರು. ಚಿಕ್ಕೋಡಿ, ಸವದತ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಬೈಲಹೊಂಗಲದಲ್ಲಿ ಕೆಲಕಾಲ ತುಂತುರು ಮಳೆಯಾಯಿತು. ಗೋಕಾಕ ತಾಲ್ಲೂಕಿನ ಅಂಕಲಗಿ, ಮದವಾಲ, ಅಕ್ಕತಂಗೇರಹಾಳ ಮತ್ತು ಬೆಳಗಾವಿ ತಾಲ್ಲೂಕಿನ ಸುಲಧಾಳದಲ್ಲಿ ಸಾಧಾರಣ ಮಳೆಯಾಯಿತು. ಜಿಲ್ಲೆಯ …

Read More »

ಕೆಲವು ಊರಿನಲ್ಲಿ ಮತದಾನ ಬಹಿಷ್ಕಾರ !

ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉದಯಪುರ, ಬಚ್ಚಿನ ಕೊಡುಗೆ, ಕಿಕ್ಕೇರಿ ಗ್ರಾಮದ ರಸ್ತೆಯ ಪರಿಸ್ಥಿತಿಯ ಬಗ್ಗೆ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರವನ್ನು ಕೊಡದ ಕಾರಣ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಕ್ಕಪಕ್ಕದ ಊರಿನ ಗ್ರಾಮದ ರಸ್ತೆಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು ನಮ್ಮ ಊರಿಗೆ ಹೋಗುವ ರಸ್ತೆಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಮಳೆಗಾಲದಲ್ಲಿ ಗೊಚ್ಚೆಯ ಸಮಸ್ಯೆ …

Read More »

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ!

ಅಯೋಧ್ಯೆ: ಇಂದು (ಬುಧವಾರ) ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸರ್ವಾಲಂಕೃತ ಬಾಲರಾಮನ ಹಣೆಗೆ ಸೂರ್ಯ ರಶ್ಮಿ ಸ್ಪರ್ಶಿಸಿದ್ದು, ಸುಮಾರು 4 ನಿಮಿಷಗಳ ಕಾಲ ಸೂರ್ಯ ರಶ್ಮಿ ತಿಲಕದಂತೆ ರಾಮನ ಹಣೆಮೇಲೆ ಕಂಗೊಳಿಸಿತು. ಕಳೆದ ವಾರ ಬಾಲರಾಮನ ಹಣೆಗೆ ಸೂರ್ಯ ತಿಲಕವಿಡುವ ಪ್ರಯೋಗ ಮಾಡಲಾಗಿತ್ತು. ಇದು ಯಶಸ್ವಿಯಾಗಿತ್ತು. ಇಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯನ್ನು ಸ್ಪರ್ಶಿಸಿದೆ.‌ 58 ಮಿ.ಮೀ. ಗಾತ್ರದ ಸೂರ್ಯ ರಶ್ಮಿಯು ಬಾಲರಾಮನ ಹಣೆಯ ಕೇಂದ್ರದಲ್ಲಿ …

Read More »