Breaking News

ರಾಷ್ಟ್ರೀಯ

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಗುರುವಾರ ಸಂಜೆ ಹೆಬ್ಬಾಳ್ಕರ್‌ ನಿವಾಸಕ್ಕೆ ಆಗಮಿಸಿದ ನಿರಂಜನ್ ಹಿರೇಮಠ ದಂಪತಿ, ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ …

Read More »

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!  : ಬೆಳಗಾವಿ : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಜಪಾನ್ ಮತ್ತು ಇಂಗ್ಲೆಂಡ್ ದೇಶಗಳನ್ನು ಹಿಂದೆ ಹಾಕಿ ಭಾರತ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಿದೆ. ಇನ್ನೂ ಕೆಲವೆ ವರ್ಷದಲ್ಲಿ ನಮ್ಮ ದೇಶ ಆರ್ಥಿಕವಾಗಿ ಮೊದಲ ಸ್ಥಾನದಲ್ಲಿ ತರುವುದು ಮೋದಿಯವರ ಗುರಿ ಆಗಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌ …

Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ(Special investigative team) ಅಧಿಕಾರಿಗಳ ತಂಡ ಇಂದು ಬುಧವಾರ ಹಾಸನ ಜಿಲ್ಲೆಯ ಹೆಚ್ ಡಿ ರೇವಣ್ಣ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಲಿದ್ದಾರೆ. ಹಾಸನದಲ್ಲಿರುವ ಹೆಚ್ ಡಿ ರೇವಣ್ಣ ನಿವಾಸ ಮತ್ತು ಫಾರ್ಮ್ ಹೌಸ್ ನಲ್ಲಿ ತಮ್ಮ ವಿರುದ್ಧ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ನಿರಂತರವಾಗಿ ಲೈಂಗಿಕ …

Read More »

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಸಿಎಂ ಸಿದ್ದರಾಮಯ್ಯನವರೇ ಅಧಿಕಾರ ಬಿಟ್ಟು ಕೆಳಗೆ ಇಳಿರಿ ಕೇವಲ 24 ಗಂಟೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬಿಡಿ ಅಧಿಕಾರದಿಂದ ಇಳೀರಿ ನೀವು 24 ಗಂಟೆಯಲ್ಲಿ ಅವರನ್ನ ನಾವು ಕಸ್ಟಡಿಗೆ …

Read More »

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

ಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ ಬಂಧನಕ್ಕೆ(Judicial custody) ನೀಡಿ ಆದೇಶ ಹೊರಡಿಸಿದೆ. ನೇಹಾ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಸಂಬಂಧ ಬಂಧನದಲ್ಲಿರುವ ಆರೋಪಿ ಫಯಾಜ್‌ನ ಸಿಐಡಿ ಕಷ್ಟಡಿ ಇಂದು ಅಂತ್ಯವಾಗಿದೆ ಈ ಹಿನ್ನೆಲೆ , ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಬಳಿಕ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Read More »

ರಾಜ್ಯದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಮುಂದಿರಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಯ ಸುಳ್ಳಿನ ಪಟ್ಟಿಗಳ ವಿವರವನ್ನೂ …

Read More »

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ.ಕರ್ನಾಟಕದಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ …

Read More »

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ.ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.   …

Read More »

ಉಪ್ಪು ತಿಂದವರು ನೀರು ಕುಡಿಯಲೇಬೇಕು:H.D.K.

ಬೆಂಗಳೂರು: ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿಕೊಟ್ಟ ಮೇಲಂತೂ ದೊಡ್ಡ ಗೌಡರ ಕುಟುಂಬ ತತ್ತರಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ. ನಾನಾಗಲಿ, …

Read More »

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

ನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ ಇದ್ದಾರೆ. ಸೋಶಿಯಲ್​​ ಮೀಡಿಯಾದಲ್ಲಿ ಕೆಲವು ವಿಡಿಯೋಗಳು ವೈರಲ್​ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತಿನ ಆನಂದ್‌ನಲ್ಲಿ ತುಳಸಿ ಪಾನಿಪುರಿ ಅಂಗಡಿ ಮಾಲೀಕ 71 ವರ್ಷದ ಅನಿಲ್‌ ಭಟ್‌ ಠಕ್ಕರ್‌ ಅವರು ನೋಡಲು ಪ್ರಧಾನಿ ಮೋದಿ ಅವರಂತೆ ಕಾಣುತ್ತಿದ್ದಾರೆ. ಠಕ್ಕರ್‌ ಮಾತನಾಡಿ, ‘ನಾನು ನೋಡಲು ಮೋದಿ ಅವರಂತೆ ಕಾಣುತ್ತಿರುವುದರಿಂದ ನಮ್ಮ ಅಂಗಡಿಗೆ ಬರುವ …

Read More »