ಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ. ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ …
Read More »ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಶಾಸಕ ಬಿ. ಆರ್. ಪಾಟೀಲ್ ಆರೋಪ
ಬೆಂಗಳೂರು : ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆಡಳಿತ ಪಕ್ಷದ ಶಾಸಕರ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಶಾಸಕ ಎ. ಮಂಜು ಮಾತನಾಡಿ, ಈಗಾಗಲೇ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ್ ಅವರು ಒಂದು ರೀತಿಯಲ್ಲಿ ಮಾತನಾಡಿದ್ದಾರೆ. ಬಿ. ಆರ್. ಪಾಟೀಲ್ ಅವರ ಮಾದರಿಯಲ್ಲೇ ಶಾಸಕ ರಾಜು ಕಾಗೆ ಹೇಳಿದ್ದಾರೆ. ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ. ಅದರ ಬಗ್ಗೆ ನನಗೂ …
Read More »ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!
ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು …
Read More »ಶಾಸಕ ಬಿ.ಆರ್.ಪಾಟೀಲ್ ಆರೋಪ ಸುಳ್ಳು: ಡಿಸಿಎಂ
ರಾಮನಗರ: ಹಣ ಪಡೆದು ಮನೆ ನೀಡಿದ್ದಾರೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ?. ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು. ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನಿಡಬೇಕೋ ಆಯಾ ಸ್ಥಳೀಯ …
Read More »ಹೂತಿಟ್ಟ ಶವದ ಹಿಂದಿನ ಕಾರಣ ಬಯಲು
ಚಾಮರಾಜನಗರ: ಹೂತಿಟ್ಟ ಶವದಿಂದ ಮುಂಗೈ ಹೊರಬಂದ ಪ್ರಕರಣದಲ್ಲಿ ಮಹಿಳೆಯ ಗುರುತು ಪತ್ತೆಯಾಗಿದ್ದು, ಕೊಲೆಗೈದ ಪ್ರಿಯಕರ ಸಿಕ್ಕಿಬಿದ್ದಿದ್ದಾನೆ. ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದ ಸುವರ್ಣಾವತಿ ನದಿ ದಂಡೆಯಲ್ಲಿ ಗುರುವಾರ ರಾತ್ರಿ ಶವದ ಮುಂಗೈ ಕಾಣಿಸಿಕೊಂಡಿತ್ತು. ಮೋಳೆ ಗ್ರಾಮದ ಸೋನಾಕ್ಷಿ (29) ಎಂಬಾಕೆಯ ಶವ ಇದಾಗಿದೆ. ಈಕೆಯನ್ನು ಪ್ರಿಯಕರ ಮಾದೇಶ(35) ಕೊಲೆ ಮಾಡಿ, ಹೂತು ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋನಾಕ್ಷಿ ತನ್ನ ಸೋದರ ಮಾವ ವಿಜಯ್ ಕುಮಾರ್ ಎಂಬವರನ್ನು ಮದುವೆಯಾಗಿದ್ದರೂ ಸಂಬಂಧದಲ್ಲಿ …
Read More »ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ:C.M.
ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು : ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು …
Read More »ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…
ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್… ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದಿಂದ ಬೆಳಗಾವಿಯಲ್ಲಿ ಹೊಸ ಉಪಕ್ರಮ; ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಇತಿಹಾಸದಲ್ಲೇ ಮೊದಲ ಬಾರಿ ಬೃಹತ್ ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದ ವತಿಯಿಂದ ಜೂನ್ 22 ರಂದು ಸೂರ್ಯನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ಅವರು ತಿಳಿಸಿದರು. …
Read More »11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ
“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಬಹುದು. ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬಹುದು ಎಂದು ಸಂಸದ ಜಗದೀಶ್ ಶೆಟ್ಟರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ (ಜೂ.21) ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ …
Read More »ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಇಡೀ ವಿಶ್ವಕ್ಕೆ ಯೋಗ ಕಲಿಸಿದ್ದು ಭಾರತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ ಉಡುಪಿ: ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ …
Read More »ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!
ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ ಅಂಗಡಿ. ಆ ಅಂಗಡಿ ಮಾಲೀಕನಿಗೊಬ್ಬ ಮಗ.. ಕ್ರಿಕೆಟ್ ಹುಚ್ಚು ಹಿಡಿಸಿಕೊಂಡಿದ್ದವನಿಗೆ ಯಾರೋ ಹೇಳಿದ್ದಂತೆ, “ನೀನು ಇಲ್ಲಿಯೇ ಇದ್ದರೆ ಕ್ರಿಕೆಟರ್ ಆಗಲು ಸಾಧ್ಯವಿಲ್ಲ, ಮುಂಬೈಗೆ ಹೋಗು” ಎಂದು. 10ನೇ ವಯಸ್ಸಿನಲ್ಲಿ ತಂದೆಯ ಜೊತೆ ಮುಂಬೈಗೆ ಬಂದಿಳಿದಿದ್ದ ಆ ಹುಡುಗ. ಮುಂಬೈ ಎಂದರೆ ಅದೊಂದು ಮಹಾಸಾಗರ. ಆ ಸಾಗರದಲ್ಲಿ ಅಪ್ಪಳಿಸಿ ಬರುವ ಅಲೆಗಳ ಮುಂದೆ …
Read More »