Breaking News

ರಾಷ್ಟ್ರೀಯ

ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ಕಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡು‌ಗು-ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.   ಮಳೆಯೊಂದಿಗೆ ಗಾಳಿಯೂ ಜೋರಾಗಿ ಬೀಸಿದ್ದರಿಂದ ನಾಲ್ಕು ಮನೆಗಳ ಪತ್ರಾಸ್‌, ಹೆಂಚು ಹಾರಿಹೋಗಿದ್ದು, ಒಂದು ಮನೆಯ ಗೋಡೆ ಕುಸಿದಿದೆ. ವಿದ್ಯುತ್‌ ಪೂರೈಕೆ ಸ್ಥಗಿತವಾದ ಕಾರಣ, ಜನರು ಪರದಾಡಿದರು. ಚಿಕ್ಕೋಡಿ, ಸವದತ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಬೈಲಹೊಂಗಲದಲ್ಲಿ ಕೆಲಕಾಲ ತುಂತುರು ಮಳೆಯಾಯಿತು. ಗೋಕಾಕ ತಾಲ್ಲೂಕಿನ ಅಂಕಲಗಿ, ಮದವಾಲ, ಅಕ್ಕತಂಗೇರಹಾಳ ಮತ್ತು ಬೆಳಗಾವಿ ತಾಲ್ಲೂಕಿನ ಸುಲಧಾಳದಲ್ಲಿ ಸಾಧಾರಣ ಮಳೆಯಾಯಿತು. ಜಿಲ್ಲೆಯ …

Read More »

ಕೆಲವು ಊರಿನಲ್ಲಿ ಮತದಾನ ಬಹಿಷ್ಕಾರ !

ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉದಯಪುರ, ಬಚ್ಚಿನ ಕೊಡುಗೆ, ಕಿಕ್ಕೇರಿ ಗ್ರಾಮದ ರಸ್ತೆಯ ಪರಿಸ್ಥಿತಿಯ ಬಗ್ಗೆ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರವನ್ನು ಕೊಡದ ಕಾರಣ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಕ್ಕಪಕ್ಕದ ಊರಿನ ಗ್ರಾಮದ ರಸ್ತೆಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು ನಮ್ಮ ಊರಿಗೆ ಹೋಗುವ ರಸ್ತೆಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಮಳೆಗಾಲದಲ್ಲಿ ಗೊಚ್ಚೆಯ ಸಮಸ್ಯೆ …

Read More »

ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ!

ಅಯೋಧ್ಯೆ: ಇಂದು (ಬುಧವಾರ) ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸರ್ವಾಲಂಕೃತ ಬಾಲರಾಮನ ಹಣೆಗೆ ಸೂರ್ಯ ರಶ್ಮಿ ಸ್ಪರ್ಶಿಸಿದ್ದು, ಸುಮಾರು 4 ನಿಮಿಷಗಳ ಕಾಲ ಸೂರ್ಯ ರಶ್ಮಿ ತಿಲಕದಂತೆ ರಾಮನ ಹಣೆಮೇಲೆ ಕಂಗೊಳಿಸಿತು. ಕಳೆದ ವಾರ ಬಾಲರಾಮನ ಹಣೆಗೆ ಸೂರ್ಯ ತಿಲಕವಿಡುವ ಪ್ರಯೋಗ ಮಾಡಲಾಗಿತ್ತು. ಇದು ಯಶಸ್ವಿಯಾಗಿತ್ತು. ಇಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯನ್ನು ಸ್ಪರ್ಶಿಸಿದೆ.‌ 58 ಮಿ.ಮೀ. ಗಾತ್ರದ ಸೂರ್ಯ ರಶ್ಮಿಯು ಬಾಲರಾಮನ ಹಣೆಯ ಕೇಂದ್ರದಲ್ಲಿ …

Read More »

ಹಲವು ವರ್ಷಗಳ ತ್ಯಾಗದ ಫಲ’ : `ರಾಮನವಮಿ’ಯಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಇಂದು ಭಗವಾನ್ ಶ್ರೀರಾಮನ ಜನ್ಮದಿನದ ಹಿನ್ನೆಲೆಯಲ್ಲಿ ರಾಮನವಮಿಗೆ ದೇಶದ ಜನತೆಗೆ ಪ್ರಧಾನಿ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , “ಭಗವಾನ್ ಶ್ರೀ ರಾಮನ ಜನ್ಮ ದಿನಾಚರಣೆ, ರಾಮನವಮಿಯ ಸಂದರ್ಭದಲ್ಲಿ ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರಿಗೆ ಅನಂತ ಶುಭಾಶಯಗಳು! ಈ ಶುಭ ಸಂದರ್ಭದಲ್ಲಿ, ನನ್ನ ಹೃದಯವು ಮುಳುಗಿದೆ ಮತ್ತು ನೆರವೇರಿದೆ” ಎಂದು ಈ ವರ್ಷದ ಜನವರಿ 22 ರಂದು ಅಯೋಧ್ಯೆಯಲ್ಲಿ …

Read More »

ಇಂದು ರಾಹುಲ್‌ ರಾಜ್ಯಕ್ಕೆ ; ಮಂಡ್ಯ, ಕೋಲಾರದಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ

ಬೆಂಗಳೂರು: ಚುನಾವಣೆ ಘೋಷಣೆ ಯಾದ ಅನಂತರ ಬುಧವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಯವರು ಹೈವೋಲ್ಟೆàಜ್‌ ಕ್ಷೇತ್ರ ಗಳಲ್ಲಿ ಒಂದಾದ ಮಂಡ್ಯದಲ್ಲಿ ಚುನಾ ವಣ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣ ಕಹಳೆ ಮೊಳಗಿಸಿದ್ದಾರೆ. ಆದರೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರು ಇನ್ನೂ ರಾಜ್ಯದ ಅಖಾಡಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡಿರಲಿಲ್ಲ. ರಾಹುಲ್‌ ಗಾಂಧಿ ಆಗಮಿಸುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಲಿದ್ದಾರೆ.

Read More »

ಮೋದಿ ಭ್ರಷ್ಟಾಚಾರದ ವಿಶ್ವ ಚಾಂಪಿಯನ್ ; ರಾಹುಲ್

ಗಾಜಿಯಾಬಾದ್, ಏ. 17 (ಪಿಟಿಐ) : ಚುನಾವಣಾ ಬಾಂಡ್‍ಗಳ ಯೋಜನೆಯು ವಿಶ್ವದಲ್ಲೆ ಅತ್ಯಂತ ದೊಡ್ಡ ಸುಲಿಗೆ ಯೋಜನೆಯಾಗಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ ಒಳಹರಿವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು …

Read More »

ಚನ್ನಮ್ಮನ ಕಿತ್ತೂರು | ಬಸ್ ಪಲ್ಟಿ: 10 ಜನರಿಗೆ ಗಾಯ

ಚನ್ನಮ್ಮನ ಕಿತ್ತೂರು: ಹುಬ್ಬಳ್ಳಿಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ತಡೆರಹಿತ ರಾಜಹಂಸ ಬಸ್ ತಾಲ್ಲೂಕಿನ ತಿಮ್ಮಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು 10 ಪ್ರಯಾಣಿಕರಿಗೆ ಗಾಯಗಳಾಗಿವೆ. ಹೆದ್ದಾರಿ ಬದಿಗಿರುವ ಕಬ್ಬಿಣದ ತಡೆ ಸರಳುಗಳನ್ನು ಕಿತ್ತುಕೊಂಡು ಸರ್ವೀಸ್ ರಸ್ತೆಗೆ ಬಂದು ಬಸ್ ಬಿದ್ದಿದೆ. ಭಾರಿ ಸಪ್ಪಳವಾಗಿದ್ದರಿಂದ ತಿಮ್ಮಾಪುರ ಗ್ರಾಮಸ್ಥರು ಧಾವಿಸಿ ಬಂದು ವಾಹನದಲ್ಲಿ ಸಿಕ್ಕಿ ಬಿದ್ದಿದ್ದ ಪ್ರಯಾಣಿಕರನ್ನು ಹೊರತೆಗೆಯುವಲ್ಲಿ ನೆರವಾದರು. ಗಾಯಾಳುಗಳನ್ನು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರ | ತಿಂಗಳಲ್ಲಿ 79 ಪ್ರಕರಣ:₹1.17 ಕೋಟಿ ವಶ

ಚಿಕ್ಕೋಡಿ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಏಪ್ರಿಲ್ 16ರವರೆಗೆ ₹1.17 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳು ₹ 1.17 ನಗದು, ₹ 7.05 ಲಕ್ಷ ಮೌಲ್ಯದ 1948.151 ಲೀಟರ್‌ ಮದ್ಯ, ₹ 2.21 ಲಕ್ಷ ಮೌಲ್ಯದ 8.813 ಕೆ.ಜಿ. ಮಾದಕ, ಅಮಲು ಪದಾರ್ಥಗಳು ಹಾಗೂ ₹ 9.88 …

Read More »

ತೆರಿಗೆದಾರರ’ ಮೇಲಿನ ಹೊರೆ ಕಡಿಮೆ ಮಾಡಬೇಕು: ಪ್ರಧಾನಿ ಮೋದಿ

ನವದೆಹಲಿ: ದೇಶದ ತೆರಿಗೆದಾರರ ಕೊಡುಗೆಯನ್ನು ಆಚರಿಸಬೇಕು ಮತ್ತು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, “ಮಧ್ಯಮ ವರ್ಗದ ತೆರಿಗೆದಾರರಿಗೆ ಸಂಬಂಧಿಸಿದಂತೆ ಅವರನ್ನು ಆಚರಿಸಬೇಕು ಮತ್ತು ಗೌರವಿಸಬೇಕು.ನಾವು ತೆರಿಗೆದಾರರನ್ನು ಹಗಲು ರಾತ್ರಿ ನಿಂದಿಸಿದರೆ ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ?” ಎಂದು ಕೇಳಿದರು. ದಕ್ಷ ಮತ್ತು ಪಾರದರ್ಶಕ ತೆರಿಗೆ ಸಂಗ್ರಹ ವ್ಯವಸ್ಥೆಯ ಬಗ್ಗೆ ಮಾತನಾಡಿದ ಪಿಎಂ ಮೋದಿ, ತಮ್ಮ ಸರ್ಕಾರದ ಅಡಿಯಲ್ಲಿ …

Read More »

ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಬಳಿ ಖಾಸಗಿ ಬಸ್ ಮತ್ತು ಫಾರ್ಚ್ಯೂನರ್ ಕಾರು ನಡುವೆ ಅಪಘಾತ ಸಂಭವಿಸಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಮಾರ್ಗವಾಗಿ ಕಾರವಾರ ಕಡೆಗೆ ಹೊರಟಿದ್ದ ಕಾರು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ನಡುವೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ …

Read More »