Breaking News

ರಾಷ್ಟ್ರೀಯ

ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್‌

ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಿ- ಪ್ರಕಾಶ ರಾಜ್‌ ಟೀಕೆ ಬೆಳಗಾವಿ: ‘ಒಂದೇ ಪಕ್ಷ, ಒಂದೇ ಭಾಷೆ ಎನ್ನುವ ಮಹಾಪ್ರಭು ಎರಡು ನಾಲಿಗೆ ಹಾವು ಇದ್ದಂತೆ. ಸುಳ್ಳುಗಳ ಮಹಾಪುರಾಣ ಹೇಳುವ ಈ ದುರಹಂಕಾರಿ ಮತ್ತು ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ನಟ ಪ್ರಕಾಶ ರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ಟೀಕಿಸಿದರು.   ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ ‘ದೇಶ ಉಳಿಸಿ ಸಂಕಲ್ಪ ಸಮಾವೇಶ’ದಲ್ಲಿ …

Read More »

ಪಕ್ಷಿಗಳ ಬಾಯಾರಿಕೆ ನೀಗಿಸಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯಾನ ವಿಭಾಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಯೋಗದಲ್ಲಿ ಹಸಿರು ಉದ್ಯಾನ, ಬೊಟಾನಿಕಲ್ ಉದ್ಯಾನ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಎದುರು ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಭಾನುವಾರ ಕುಲಪತಿ ಕೆ.ಬಿ.ಗುಡಸಿ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಆವರಣದಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿರು ಬಿಸಿಲಿನಿಂದ ಬಳಲುತ್ತಿರುವ ಪಕ್ಷಿಗಳಿಗೆ ಧಾನ್ಯ ಹಾಗೂ ನೀರುಣಿಸುವ ಕಾರ್ಯಕ್ಕೆ …

Read More »

ಹನುಮಾನ್ ಚಾಲೀಸ ಪಠಣಕ್ಕೆ ನಿರ್ಬಂಧ ಇದೆಯೇ?: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಕ್ಕೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ತುಷ್ಟೀಕರಣದ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣ ಮಾಡಲು ನಿರ್ಬಂಧ ಇದೆಯೇ? ಇದು ಖಂಡನೀಯ. ಕೂಡಲೇ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. …

Read More »

ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದ ಅವರು, ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. …

Read More »

ಹಿರೇಬಾಗೇವಾಡಿ: 25 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ

ಹಿರೇಬಾಗೇವಾಡಿ: 25 ವರ್ಷಗಳ ನಂತರ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಗೆ ಹಿರೇಬಾಗೇವಾಡಿ ಸಜ್ಜಾಗುತ್ತಿದ್ದು, ಊರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 1998ರ ಮೇ ತಿಂಗಳಲ್ಲಿ ಹಿರೇಬಾಗೇವಾಡಿಯಲ್ಲಿ ಜಾತ್ರೆ ನಡೆದಿತ್ತು. ಈ ಬಾರಿ ಏಪ್ರಿಲ್‌ 12ರಿಂದ ಮೇ 3ರವರೆಗೆ ಜಾತ್ರೆ ನಡೆಯಲಿದ್ದು, 21 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.   ಜಾತ್ರೆ ಪ್ರಯುಕ್ತ, ಗ್ರಾಮಸ್ಥರು ತಮ್ಮ ಮನೆಗಳಿಗೆ ಸುಣ್ಣ-ಬಣ್ಣ ಬಳಿದು ಅಲಂಕರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡವರು, ತ್ವರಿತವಾಗಿ ಮುಗಿಸುವುದರಲ್ಲಿ ನಿರತವಾಗಿದ್ದಾರೆ. ಇನ್ನೂ ಕೆಲವರು …

Read More »

ಯುಗಾದಿ ಬಳಿಕ ರಾಜ್ಯದಲ್ಲಿ ಒಳ್ಳೆ ಬೆಳೆ, ಮಳೆಯಾಗುತ್ತೆ ; ಕೋಡಿಮಠ ಶ್ರೀ ಭವಿಷ್ಯ

ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ …

Read More »

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು​ ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು …

Read More »

ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ

ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ- ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್ ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ …

Read More »

ಬೆಳಗಾವಿ ಲೋಕಸಭೆ: ಸ್ಟಾರ್‌ ಪ್ರಚಾರಕರತ್ತ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಚಿತ್ತ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳಲ್ಲಿ ಪ್ರಚಾರ ಚುರುಕುಗೊಳಿಸಿದ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳು, ನಿತ್ಯ ಮತದಾರರ ಮನೆಬಾಗಿಲಿಗೇ ಹೋಗುತ್ತಿದ್ದಾರೆ. ಮಹಿಳಾ ಮಂಡಳಗಳು, ಯುವಕ ಮಂಡಳಗಳು ಮತ್ತು ಇತರೆ ಸಂಘ-ಸಂಸ್ಥೆಗಳನ್ನು ಎಡತಾಕುತ್ತಿದ್ದಾರೆ. ಇದರ ಜತೆಗೆ, ತಮ್ಮ ಪಕ್ಷದ ಪರ ಅಲೆ ಸೃಷ್ಟಿಸಲು ಸ್ಟಾರ್‌ ಪ್ರಚಾರಕರಿಗಾಗಿ ಕಾಯುತ್ತಿದ್ದಾರೆ. ಅವರ ಭೇಟಿಯ ದಿನಾಂಕಗಳನ್ನು ಆಧರಿಸಿ ದೊಡ್ಡಮಟ್ಟದ ಸಮಾವೇಶಗಳನ್ನು ಸಂಘಟಿಸಿ, ಮತದಾರರನ್ನು ಸೆಳೆಯಲು ತಂತ್ರ ರೂಪಿಸುತ್ತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ …

Read More »

ಪೊಲೀಸ್‌ ಠಾಣೆ ಮಕ್ಕಳ ಸ್ನೇಹಿ ಆಗಿರಲಿ

ಬೆಳಗಾವಿ: ‘ವಿಶೇಷ ಮಕ್ಕಳ ಪೊಲೀಸ್‌ ಘಟಕದಲ್ಲಿ ಕಾರ್ಯನಿರ್ವಹಿಸುವ ಮಕ್ಕಳ ಕಲ್ಯಾಣ ಪೋಲಿಸ್‌ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ತಮ್ಮ ಹತ್ತಿರ ಬರುವ ಮಕ್ಕಳ ಸಮಸ್ಯೆ ಸರಿಯಾಗಿ ಆಲಿಸಿ, ಅವರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಬೇಕು’ ಎಂದು ನಗರ ಪೊಲೀಸ್‌ ಕಮಿಷನರ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್ ಹೇಳಿದರು.   ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್‌) ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌, ನಗರ ಪೊಲೀಸ್‌ ಕಮಿಷನರೇಟ್‌ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ …

Read More »