Breaking News

ರಾಷ್ಟ್ರೀಯ

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ.   ಬೀಸರಹಳ್ಳಿ ಗ್ರಾಮದಲ್ಲಿ …

Read More »

ಸದ್ಯದಲ್ಲೇ ಬಿಜೆಪಿ ಸ್ಟಾರ್ ಪ್ರಚಾರಕರು ರಾಜ್ಯಕ್ಕೆ ಎಂಟ್ರಿ

ಬೆಂಗಳೂರು,ಮಾ.28- ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕರು, ಪಕ್ಷದ ಅಭ್ಯರ್ಥಿಗಳ ಪರ ಕರ್ನಾಟಕದಲ್ಲಿ ಪ್ರಚಾರಕ್ಕೆ ಧುಮುಕಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಬಿಜೆಪಿ ನಾಯಕರು ಮುಂದಿನ ಕೆಲವು ವಾರಗಳಲ್ಲಿ ಕನಿಷ್ಠ ಪಕ್ಷ 2-3 ಬಾರಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

Read More »

ಏಪ್ರಿಲ್ 1 ರಿಂದ Debit Cardಗಳ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸಲಿದೆ SBI

ನವದೆಹಲಿ: ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐ ಡೆಬಿಟ್ ಕಾರ್ಡ್ಗಳ ವಾರ್ಷಿಕ ನಿರ್ವಹಣಾ ಶುಲ್ಕ ಹೆಚ್ಚಳದಿಂದ ಗ್ರಾಹಕರಿಗೆ ದೊಡ್ಡ ಹೊಡೆತ ನೀಡಿದೆ. ನೀವು ಎಸ್ಬಿಐ ಡೆಬಿಟ್ ಕಾರ್ಡ್ ಹೊಂದಿದ್ದರೆ, ಈ ಬದಲಾವಣೆಗಳ ಬಗ್ಗೆ ಖಂಡಿತವಾಗಿಯೂ ತಿಳಿದುಕೊಳ್ಳಿ. ವಾಸ್ತವವಾಗಿ, ಕೆಲವು ಡೆಬಿಟ್ ಕಾರ್ಡ್ಗಳಿಗೆ ಸಂಬಂಧಿಸಿದ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಷ್ಕರಿಸಿದೆ.ಏಪ್ರಿಲ್ 1, 2024 ರಿಂದ, ಹೊಸ ಪ್ರಸ್ತಾವಿತ ದರಗಳು ಎಸ್ಬಿಐ ವೆಬ್ಸೈಟ್ನಲ್ಲಿ ಜಾರಿಗೆ ಬರಲಿವೆ. ಯಾವ …

Read More »

ಕಾಂಗ್ರೆಸ್ ಪಟ್ಟಿ ಬಿಡುಗಡೆ; ಇನ್ನೂ ಅಂತಿಮವಾಗದ ಅಭ್ಯರ್ಥಿಗಳು

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಬುಧವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ತೆಲಂಗಾಣ ರಾಜ್ಯಗಳ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಉತ್ತರ ಪ್ರದೇಶದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಪಡಿಸಿದರೂ, ಇದರ ಘೋಷಣೆಗೆ ಕಾಯಲಾಗುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ.ಆದ್ದರಿಂದ ರಾಜ್ಯದಲ್ಲಿ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರದ ಅಭ್ಯರ್ಥಿಗಳ ಹೆಸರಷ್ಟೇ ಅಂತಿಮವಾಗಲು ಬಾಕಿ ಉಳಿದಿವೆ.   ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ …

Read More »

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ : ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಖರ್ಚು ಮಾಡಲು ಹಣವಿಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ಅವರು, ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ಸ್ಥಳಗಳಿಂದ ಸ್ಪರ್ಧಿಸಲು ಆಫರ್ ನೀಡಿದ್ದರು.ಆದರೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಾದ ಹಣವಿಲ್ಲದ ಕಾರಣ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಹೇಳಿದರು.   10 ದಿನಗಳ ಚರ್ಚೆಯ ನಂತರ, ನಾನು ಅಂತಿಮವಾಗಿ ನಡ್ಡಾಜಿಗೆ ಕ್ಷಮೆಯಾಚಿಸಿದೆ. ಏಕೆಂದರೆ ಚುನಾವಣೆಯಲ್ಲಿ …

Read More »

ಸಿದ್ದರಾಮಯ್ಯ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು

ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ ಕುಳಿತುಕೊಂಡು ಗಾಳ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ …

Read More »

ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಭರಾಟೆ ಆರಂಭ

ಬೆಂಗಳೂರು : ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.   ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ …

Read More »

ಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ

ಬೆಂಗಳೂರು, – ಯಾವುದೇ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿ ಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ನಿನ್ನೆ ಸಂಜೆ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ 2 ಬ್ಯಾಗ್ಗಳಲ್ಲಿ 25 ಲಕ್ಷ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಚುನಾವಣಾಧಿಕಾರಿಗಳಿಗೆ ಲಭಿಸಿದೆ.   ತಕ್ಷಣ ಸಿಸಿಬಿ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಅದರಲ್ಲಿ 25 ಲಕ್ಷ …

Read More »

ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ;B.S.Y

ಬೆಳಗಾವಿ : ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ, ಅವರು ಸಮಾಧಾನದಿಂದ ಇರಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ಫಿಕ್ಸ್ ಆಗಿದೆ. ಸುಮಲತಾ ಅವರಿಗೆ ಬೇರೆ ಅವಕಾಶ ಇದೆ. ಸುಮಲತಾ ಸಮಾಧಾನದಿಂದ ಇದ್ದರೆ ಮುಂದೆ ಅವಕಾಶ ಸಿಗುತ್ತೆ ಎಂದು ಹೇಳಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ …

Read More »

ಡಿಕೆಶಿ ಮುಖ್ಯಮಂತ್ರಿ ಆಗಲೆಂದು ಅರ್ಚಕರ ಸಂಕಲ್ಪ

ಉತ್ತರಕನ್ನಡ: ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.   ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ …

Read More »