ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಕಾಂಗ್ರೆಸ್ ಪಕ್ಷವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ನೀವು ನಮ್ಮ ಪಕ್ಷದ ಹಣವನ್ನು ದೇಣಿಗೆಯಾಗಿ ನೀಡಿದ್ದೀರಿ, ಅವರು ಅದನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ… ಆದರೆ, ಅವರು (ಬಿಜೆಪಿ) ತಮಗೆ ದೊರೆತ ಚುನಾವಣಾ ಬಾಂಡ್ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ, ಏಕೆಂದರೆ ಅವರ ಕಳ್ಳತನ ಹೊರಬರುತ್ತದೆ, ಅವರ …
Read More »ʻಲೋಕಸಭಾ ಚುನಾವಣೆ 2024ʼರ ಸಂಪೂರ್ಣ ವೇಳಾಪಟ್ಟಿ ಈ ವಾರ ಪ್ರಕಟ
ನವದೆಹಲಿ: ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಈ ವಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರ ಭೇಟಿಯ ನಂತರ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ವರದಿ ಸೂಚಿಸಿದೆ. ಬುಧವಾರ, ಚುನಾವಣಾ ಆಯೋಗದ ತಂಡವು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿತು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನು ಪರಿಶೀಲಿಸಿತು. …
Read More »ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ
ಬೆಂಗಳೂರು, ಮಾ.13- ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ …
Read More »ಅಡುಗೆ ಸಿಬ್ಬಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ
ಗೋಕಾಕ: ‘ಶಿಕ್ಷಣ ಮಗುವಿನ ಅವಿಭಾಜ್ಯ ಅಂಗ, ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹಾಕುತ್ತಿದ್ದಾರೆ. ಶಿಕ್ಷಣ ಇಲಾಖೆಗೆ ಶಕ್ತಿಯಾಗಿ ಅಡುಗೆ ಸಿಬ್ಬಂದಿ ಇದ್ದಾರೆ’ ಎಂದು ಬಿಇಒ ಜಿ.ಬಿ. ಬಳಗಾರ ಹೇಳಿದರು. ಮಹಾಲಕ್ಷ್ಮಿ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಗಳು, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಂ.ಡಿ.ಎಂ.) ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಗೋಕಾಕ ವಲಯದ ಅಡುಗೆ ಸಿಬ್ಬಂದಿಗಾಗಿ ಆಯೋಜಿಸಿದ್ದ …
Read More »ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಿಚ್ಚ ಸುದೀಪ್ ಪ್ರಚಾರ
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಗೆ ಕಿಚ್ಚ ಸುದೀಪ್ ಬೆಂಬಲ ನೀಡಲಿದ್ದಾರೆ. ಮಾಜಿ ಸಿಎಂ ದಿವಂಗತ ಬಂಗಾರಪ್ಪನವರ ಮಗಳೂ ಆಗಿರುವ ಗೀತಾ ಶಿವರಾಜ್ ಕುಮಾರ್ ಗೆ ಶಿವಮೊಗ್ಗ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದೆ.ಇನ್ನೇನು ಅವರು ಶಿವಮೊಗ್ಗದಲ್ಲಿ ಪ್ರಚಾರ ಕಾರ್ಯವನ್ನೂ ಶುರು ಮಾಡಲಿದ್ದಾರೆ. ಅವರಿಗೆ ಪತಿ ಶಿವರಾಜ್ ಕುಮಾರ್ ಕೂಡಾ ಸಾಥ್ …
Read More »ಪ್ರತಾಪ್ ಸಿಂಹ ಅಲ್ಲ.. ಯದುವೀರ್ ಅಲ್ಲ.. ಮೈಸೂರಿನಿಂದ ಕಣಕ್ಕಿಳಿಯುತ್ತಾರಾ ಸುಮಲತಾ?
ಮೈಸೂರು, ಮಾರ್ಚ್ 12: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಒಂದೊಂದು ಕ್ಷೇತ್ರದಲ್ಲಿಯೂ ಲೆಕ್ಕಾಚಾರಗಳು ಬದಲಾಗುತ್ತಿವೆ. ಇಷ್ಟು ದಿನ ಮಂಡ್ಯ ಇಂತಹ ಗೊಂದಲದಿಂದ ಸಕತ್ ಸುದ್ದಿಯಾಗುತ್ತಿತ್ತು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ಸಂಸದೆ ಸುಮಲತಾ ಅವರಿಗೆ ಟಿಕೆಟ್ ಕೈ ತಪ್ಪುವ ಭಯವಿದೆ. ದೇ ಬೆನ್ನಲ್ಲೇ ಮೈಸೂರು ಕ್ಷೇತ್ರದಿಂದ ಅಚ್ಚರಿಯ ಬೆಳವಣಿಗೆಯೊಂದು ಸುದ್ದಿಯಾಗಿದೆ.ಹೌದು.. ಮೈಸೂರು – ಕೊಗಡು ಕ್ಷೇತ್ರಗಳ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ಕೈ …
Read More »ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ : ʻಅಂತರ್ಜಲ ಮಟ್ಟʼ ಹೆಚ್ಚಳಕ್ಕೆ ಮಹತ್ವದ ಕ್ರಮ
ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅಂತರ್ಜಲ ಹೆಚ್ಚಳಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ತುರ್ತು ಹಾಗೂ ದೀರ್ಘಕಾಲದ ಕ್ರಮಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಬೆಳ್ಳಂದೂರು, ವರ್ತೂರು ಕೆರೆಗಳು ಬರಿದಾಗಿರುವುದರಿಂದ ಆ ಪ್ರದೇಶಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. 1,300 ಎಂಎಲ್ಡಿ ಸಂಸ್ಕರಿಸಿದ ಗುಣಮಟ್ಟದ ನೀರನ್ನು ಕೆರೆಗಳಿಗೆ ತುಂಬಿಸಲು ಉದ್ದೇಶಿಸಲಾಗಿದೆ ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ. …
Read More »ಕೇಂದ್ರ ಸರ್ಕಾರಿ ನೌಕರರಿಗೆ D.A 4 % ಹೆಚ್ಚಳ : ಕೇಂದ್ರದಿಂದ ಅಧಿಕೃತ ಆದೇಶ..!
ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಜನವರಿ 1, 2024 ರಿಂದ ಜಾರಿಗೆ ಬರುವಂತೆ ಮೂಲ ವೇತನದ 46% ರಿಂದ 50% ಕ್ಕೆ ಹೆಚ್ಚಿಸಲಾಗುವುದು. ತುಟ್ಟಿಭತ್ಯೆಯು ಸಂಭಾವನೆಯ ಒಂದು ವಿಶಿಷ್ಟ ಅಂಶವಾಗಿ ಮುಂದುವರಿಯುತ್ತದೆ ಮತ್ತು ಎಫ್‌ಆರ್ 9 (21) ರ ವ್ಯಾಪ್ತಿಯಲ್ಲಿ ವೇತನವೆಂದು ಪರಿಗಣಿಸಲಾಗುವುದಿಲ್ಲ.50 ಪೈಸೆಗಿಂತ ಕಡಿಮೆ ಭಾಗಗಳನ್ನು ನಿರ್ಲಕ್ಷಿಸಬಹುದು ಎಂದು ಹೇಳಲಾಗಿದೆ. ಪ್ರಧಾನಿ …
Read More »ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ
ಬೆಳಗಾವಿ : ಲೋಕಸಭಾ ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ ಹೊರಬರುತ್ತಿವೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಚರ್ಚೆ ಜೋರಾಗಿದೆ. ಸಧ್ಯ ಮೂಲಗಳ ಪ್ರಕಾರ ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅದವರನ್ನೇ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಹೊಡೆತ ನೀಡಿದ್ದ ಶೆಟ್ಟರ್ ಅವರಿಗೆ …
Read More »ಫೆಬ್ರುವರಿಯಲ್ಲಿ ಭಾರತದ ಹಣದುಬ್ಬರ ಎಷ್ಟಿರಬಹುದು?
ನವದೆಹಲಿ, ಮಾರ್ಚ್ 11: ಜನವರಿಯಲ್ಲಿ ಶೇ. 5.1ರಷ್ಟಿರುವ ಹಣದುಬ್ಬರ ಫೆಬ್ರುವರಿಯಲ್ಲೂ ಮುಂದುವರಿದಿರುವ ಸಾಧ್ಯತೆ ಇದೆ ಎಂದು ವಿವಿಧ ಆರ್ಥಿಕ ತಜ್ಞರು (economists poll) ಅಭಿಪ್ರಾಯಪಟ್ಟಿದ್ದಾರೆ. ರಾಯ್ಟರ್ಸ್ ನಡೆಸಿದ 15 ಆರ್ಥಿಕ ತಜ್ಞರ ಸಮೀಕ್ಷೆ ಪ್ರಕಾರ ಫೆಬ್ರುವರಿ ತಿಂಗಳಲ್ಲಿ ಹಣದುಬ್ಬರ (India inflation) ಶೇ. 5.1ರಷ್ಟಿರಬಹುದು ಎನ್ನಲಾಗಿದೆ. ಇದು ನಿಜವೇ ಆದಲ್ಲಿ ಆರ್ಬಿಐ ನಿಗದಿ ಮಾಡಿರುವ ಹಣದುಬ್ಬರ ತಾಳಿಕೆ ಮಿತಿಯಾದ ( ಶೇ. 6ರ ಒಳಗೆ ಹಣದುಬ್ಬರ ಇರಲಿದೆ. ಮಾರ್ಚ್ 12, ಮಂಗಳವಾರ …
Read More »